'ಐಎಎಸ್ ಅಭ್ಯರ್ಥಿಗಳಿಗೆ ಸಮಯ ನಿರ್ವಹಣೆ ಮುಖ್ಯ'
ಕ.ಪ್ರ.ವಾರ್ತೆ , ಮೈಸೂರು , ಮೇ 20
ಐಎಎಸ್ ಮತ್ತು ಕೆಎಎಸ್ ಪರೀಕ್ಷೆ ಎದುರಿಸುವ ಅಭ್ಯರ್ಥಿಗಳಿಗೆ ಸಮಯ ನಿರ್ವಹಣೆ ಬಹಳ ಮುಖ್ಯ ಎಂದು ಜಿಲ್ಲಾಧಿಕಾರಿ ಸಿ. ಶಿಖಾ ಅಭಿಪ್ರಾಯಪಟ್ಟರು.
ಜ್ಞಾನಬುತ್ತಿ ಸಂಸ್ಥೆಯು ಸೋಮವಾರ ಏರ್ಪಡಿಸಿದ್ದ ಐಎಎಸ್ ಮತ್ತು ಕೆಎಎಸ್ ಪೂರ್ವಭಾವಿ ಪರೀಕ್ಷೆ, ಅಬಕಾರಿ ಎಸ್ಐ ಮತ್ತು ಗಾರ್ಡ್ ಪರೀಕ್ಷಾ ತರಬೇತಿ ಶಿಬಿರದ ಸಮಾರೋಪ ಸಮಾರಂಭದಲ್ಲಿ ಶುಭ ಹಾರೈಸಿ ಮಾತನಾಡಿದ ಅವರು, ಅಭ್ಯರ್ಥಿಗಳು ಪ್ರತಿದಿನ ಕನಿಷ್ಠ 15 ಗಂಟೆಯನ್ನಾದರೂ ಅಧ್ಯಯನಕ್ಕೆ ಮೀಸಲಿಡಬೇಕು. ಕೆಲವು ಅಂಶಗಳನ್ನು ಹೆಚ್ಚು ಬಾರಿ ಓದಿ ಸ್ಮರಣೆಯಲ್ಲಿಟ್ಟುಕೊಳ್ಳಬೇಕು ಎಂದರು.
ಅರಣ್ಯ ಸಂರಕ್ಷಣಾಧಿಕಾರಿ ಎಸ್. ವೆಂಕಟೇಶನ್ ಮಾತನಾಡಿ, ನಾವು ಐಎಫ್ಎಸ್ ಮಾಡುವಾಗ ಮಾರ್ಗದರ್ಶನ ನೀಡುವವರಿರಲಿಲ್ಲ. ನಾವೇ ಪಠ್ಯವಸ್ತುಗಳನ್ನು ಸಿದ್ಧಪಡಿಸಿಕೊಂಡು ಕಷ್ಟಪಟ್ಟು ಓದಿ ಪರೀಕ್ಷೆ ಬರೆದವು. ಈಗ ಕಾಲ ಬದಲಾಗಿದೆ. ಐಎಎಸ್, ಕೆಎಎಸ್ ಪರೀಕ್ಷೆ ಎದುರಿಸುತ್ತೇನೆ ಎನ್ನುವವರಿಗೆ ಸಲಹೆ, ಮಾರ್ಗದರ್ಶನ ನೀಡಲು ಬಹಳಷ್ಟು ಸಂಸ್ಥೆಗಳಿವೆ ಎಂದರು.
ಅಧ್ಯಕ್ಷತೆ ವಹಿಸಿದ್ದ ಮೈಸೂರು ವಿವಿ ಕುಲಪತಿ ಪ್ರೊ.ಕೆ.ಎಸ್. ರಂಗಪ್ಪ ಮಾತನಾಡಿದರು. ಅಬಕಾರಿ ಉಪ ಆಯುಕ್ತ ಡಾ.ವೈ. ಮಂಜುನಾಥ್, ಜೈನಹಳ್ಳಿ ಸತ್ಯನಾರಾಯಣಗೌಡ, ಪ್ರೊ.ಮಲ್ಲಿಕಾರ್ಜುನಶಾಸ್ತ್ರಿ, ಎಚ್.ಜಿ. ಸುರೇಶ್ಬಾಬು ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

