ಮೈಸೂರು

'ಸಹಕಾರಿ ಕ್ಷೇತ್ರದಲ್ಲಿ ರೈತರಿಗೆ ಅನ್ಯಾಯವಾಗಲ್ಲ'

Published On :

ಕ.ಪ್ರ.ವಾರ್ತೆ ರಾವಂದೂರು ಮೇ 22
ಸಹಕಾರಿ ಕ್ಷೇತ್ರದಲ್ಲಿ ರೈತರಿಗೆ ಅನ್ಯಾಯವಾಗದಂತೆ ತೀರ್ಮಾನ ಕೈಗೊಳ್ಳಲಾಗುವುದು ಎಂದು ಸಹಕಾರ ಸಚಿವ ಎಚ್.ಎಸ್. ಮಹದೇವಪ್ರಸಾದ್ ಹೇಳಿದರು.
ಪಿರಿಯಾಪಟ್ಟಣ ಕ್ಷೇತ್ರದ ವಿವಿಧ ಗ್ರಾಮಗಳಿಗೆ ತೆರಳಿ ಕಾಂಗ್ರೆಸ್ ಅಭ್ಯರ್ಥಿ ಕೆ. ವೆಂಕಟೇಶ್ ಪರ ಮತಯಾಚಿಸಿ ಮಾತನಾಡಿ, ಈ ಹಿಂದೆ ಬಿಜೆಪಿ ಸರ್ಕಾರ 25 ಸಾವಿರದವರೆಗಿನ ಸಾಲ ಮನ್ನಾ ಮಾಡಿದ್ದು, 3,600 ಕೋಟಿ ಬದಲಾಗಿ 914 ಕೋಟಿ ನೀಡಿದೆ. ಉಳಿದ ಹಣವನ್ನು ನೀಡಿಲ್ಲವಾದ್ದರಿಂದ ಫೆಬ್ರವರಿವರಗೆ ಮರುಪಾವತಿ ಮಾಡಿದ ರೈತರನ್ನು ಹೊರತುಪಡಿಸಿ ಉಳಿದ ರೈತರ 25 ಸಾವಿರದವರೆಗಿನ ಹಣವನ್ನು ಹಿಡಿದು ಕೊಡುವ ಕೆಲಸವನ್ನು ಸಹಕಾರ ಸಂಘಗಳು ಮಾಡುತ್ತಿರುವುದು ತಿಳಿದು ಬಂದಿದೆ.
ಸರ್ಕಾರ ಉಳಿದ ಹಣವನ್ನು ಪಾವತಿ ಮಾಡಬೇಕಾಗಿರುವುದರಿಂದ ಈ ರೀತಿಯ ಕೆಲಸವಾಗುತ್ತಿದ್ದು, ಮುಂದಿನ ಗುರುವಾರ ಸಚಿವ ಸಂಪುಟ ಸಭೆ ನಡೆಯಲಿದ್ದು, ಅದರಲ್ಲಿ ರೈತರ ಪರವಾಗಿ ಸೂಕ್ತ ನಿರ್ಧಾರ ಕೈಗೊಳ್ಳುವುದಾಗಿ ತಿಳಿಸಿದರು.
ತಾಲೂಕಿನಲ್ಲಿ ಕೆಜೆಪಿ ಅಭ್ಯರ್ಥಿಯು ಪಕ್ಷಕ್ಕೆ ಬೆಂಬಲ ವ್ಯಕ್ತಪಡಿಸಿದ್ದು, ಕಾಂಗ್ರೆಸ್ ಸರ್ಕಾರದ ಧೋರಣೆ ಒಪ್ಪಿ ಹಲವು ನಾಯಕರು ತಮ್ಮೊಂದಿಗೆ ಕೈಜೋಡಿಸುತ್ತಿದ್ದಾರೆ. ಆದ್ದರಿಂದ ಪಿರಿಯಾಪಟ್ಟಣದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಹೆಚ್ಚಿನ ಬಹುಮತದಿಂದ ಜಯಗಳಿಸಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ವಿಧಾನಪರಿಷತ್ ಸದಸ್ಯ ಎಸ್.ಕೆ. ಪಾಟೀಲ್ ಮಾತನಾಡಿ, ಬಸವಣ್ಣನವರ ಜಾತ್ಯತೀತ ಸಿದ್ದಾಂತ ಇರುವುದು ಕಾಂಗ್ರೆಸ್ ಪಕ್ಷದಲ್ಲಿ ಮಾತ್ರ. ಆದ್ದರಿಂದಲೆ, ರಾಜ್ಯದಲ್ಲಿ 121 ಸ್ಥಾನ ಪಡೆಯಲು ಸಾಧ್ಯವಾಗಿದೆ. ಮತದಾರರು ಹೆಚ್ಚಿನ ಸಂಖ್ಯೆಯಲ್ಲಿ ಕಾಂಗ್ರೆಸ್ ಪಕ್ಷದ ಕೆ. ವೆಂಕಟೇಶ್ ಬೆಂಬಲಿಸಲಿದ್ದಾರೆ ಎಂದು ತಿಳಿಸಿದರು.
ಮಂತ್ರಿ ಸ್ಥಾನ ಎಂಬುದು ಸೇವೆಯ ಸ್ಥಾನವಷ್ಟೆ. ಅದನ್ನು ನೀಡುವ ಅಧಿಕಾರಿ ಮುಖ್ಯಮಂತ್ರಿ ಮತ್ತು ಹೈಕಮಾಂಡ್‌ಗೆ ಸೇರಿದ್ದು, ತಮಗೆ ಅವಕಾಶ ಕಲ್ಪಿಸಿದರೆ ಪ್ರಾಮಾಣಿಕವಾಗಿ ನಿರ್ವಹಿಸುವುದಾಗಿ ಹೇಳಿದರು.
ಕಂಪಲಾಪುರ, ಪಂಚವಳ್ಳಿ, ಉತ್ತೇನಹಳ್ಳಿ, ನಾರಳಾಪುರ, ಕಿರಂಗೂರು, ನಂದಿನಾಥಪುರ, ಭೂತನಹಳ್ಳಿ, ಆಲನಹಳ್ಳಿ, ನವಿಲೂರು, ಸೇರಿದಂತೆ ಮತ್ತಿತರ ಕಡೆ ಮತಯಾಚಿಸಿದರು.
ಎಪಿಎಂಸಿ ಅಧ್ಯಕ್ಷ ಹೊಲದಪ್ಪ, ಪಿಎಲ್‌ಡಿ ಬ್ಯಾಂಕ್ ಮಾಜಿ ಅಧ್ಯಕ್ಷ ಪರಮೇಶ್ವರ್, ಜಿಪಂ ಮಾಜಿ ಸದಸ್ಯ ಆರ್.ಎಸ್. ಚಿಕ್ಕವೀರಪ್ಪ, ತಾಪಂ ಸದಸ್ಯೆ ಬಿ.ವಿ. ಅನಿತಾ, ಮುಖಂಡರಾದ ವರುಣಾ ಮಹೇಶ್, ಆರ್.ಡಿ. ವಿಶ್ವನಾಥ್, ಪಪಂ ಸದಸ್ಯೆ ಅನಿತಾಶೇಖರ್, ಪಿ.ಎಂ. ಕುಮಾರ್, ಕುಮಾರ್, ಮಲ್ಲಿಕಾರ್ಜುನ್, ಆನಂದ್, ವಿರೂಪಾಕ್ಷ, ಕೆಂಪಣ್ಣ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.