'ಕಾಂಗ್ರೆಸ್ನಿಂದ ಮಾತ್ರ ದಲಿತರಿಗೆ ಹಿತ'
ಬೈಲುಕುಪ್ಪೆ: ದಲಿತರ ಹಿತ ಕಾಯುವುದು ಕಾಂಗ್ರೆಸ್ನಿಂದ ಮಾತ್ರ ಸಾಧ್ಯ ಎಂದು ಲೋಕೋಪಯೋಗಿ ಸಚಿವ ಡಾ.ಎಚ್.ಸಿ. ಮಹದೇವಪ್ಪ ಹೇಳಿದರು.
ಪಿರಿಯಾಪಟ್ಟಣ ತಾಲೂಕಿನ ಬೈಲಕುಪ್ಪೆ ಪಂಚಾಯಿತಿ ವ್ಯಾಪ್ತಿಯ ದೊಡ್ಡಹರವೆ ಗ್ರಾಮದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಕೆ. ವೆಂಕಟೇಶ್ ಪರ ಗುರುವಾರ ಮತಯಾಚಿಸಿ ಮಾತನಾಡಿ, ಕಾಂಗ್ರೆಸ್ ಪಕ್ಷ ಹಲವಾರು ದಲಿತ ರಾಜಕಾರಣಿಗಳನ್ನು ಹುಟ್ಟು ಹಾಕಿದೆ. ಮತ್ತು ದಲಿತ ನಾಯಕರಿಗೆ ಅತ್ಯುನ್ನತ ಹುದ್ದೆ ನೀಡಿದೆ. ಪ್ರಸ್ತುತ ಸಂದರ್ಭದಲ್ಲಿ ಮಲ್ಲಿಕಾರ್ಜುನ ಖರ್ಗೆ ಅವರು ಕೇಂದ್ರ ಸರ್ಕಾರದಲ್ಲಿ ಪ್ರಭಾವಿ ಖಾತೆ ನಿರ್ವಹಿಸುತ್ತಿದ್ದಾರೆ ಎಂದು ತಿಳಿಸಿದರು.
ಡಾ. ಬಿ.ಆರ್. ಅಂಬೇಡ್ಕರ್ ನಿರ್ವಹಿಸುತ್ತಿದ್ದ ದೊಡ್ಡ ಖಾತೆಯನ್ನು ಮಲ್ಲಿಕಾರ್ಜುನ ಖರ್ಗೆ ಅವರು ನಿರ್ವಹಿಸುತ್ತಿದ್ದಾರೆ. ತಾವು ಸೇರಿದಂತೆ ಇತರರು ಮಂತ್ರಿಗಳಾಗಿ ಕೆಲಸ ಮಾಡುತ್ತಿದ್ದೇವೆ.
ಈ ಎಲ್ಲಾ ಅಧಿಕಾರ ನೀಡುವುದು ಕಾಂಗ್ರೆಸ್ ಪಕ್ಷ. ಆದರೆ, ದಲಿತರನ್ನು ಮುಖ್ಯಮಂತ್ರಿ ಮಾಡುವುದು ಕಾಂಗ್ರೆಸ್ ಪಕ್ಷದಿಂದಲೇ ಮಾತ್ರ ಸಾಧ್ಯವೆಂದು ಸ್ವಷ್ಟಪಡಿಸಿ, ಇತರ ಯಾವುದೇ ರಾಜಕೀಯ ಪಕ್ಷಗಳಿಂದ ದಲಿತರನ್ನು ರಾಜ್ಯದ ಮುಖ್ಯಮಂತ್ರಿ ಮಾಡಲು ಸಾಧ್ಯವಿಲ್ಲ ಎಂದು ಹೇಳಿದರು.
ಛಲವಾದಿ ಮಹಾಸಭಾ ಸಂಸ್ಥಾಪಕರಾದ ಡಾ.ಕೆ. ಶಿವರಾಂ ಮಾತನಾಡಿ, ಮತಯಾಚಿಸಿದರು. ತಾಲೂಕಿನ ದೊಡ್ಡಹೊನ್ನೂರು, ತಿರುಮಲಾಪುರ, ಆಲನಹಳ್ಳಿ, ನವಿಲೂರು, ಭೂತನಹಳ್ಳಿ, ಐಲಾಪುರ, ನಂದಿನಾಥಪುರ, ನರಳಾಪುರ, ಮುತ್ತೂರು, ಬೇಗೂರು ಸೇರಿದಂತೆ 20 ಕ್ಕೂ ಹೆಚ್ಚು ಗ್ರಾಮಗಳಿಗೆ ತೆರಳಿ ಕಾಂಗ್ರೆಸ್ ಅಭ್ಯರ್ಥಿ ಕೆ. ವೆಂಕಟೇಶ್ ಪರ ಮತಯಾಚಿಸಿದರು.
ಕಾಂಗ್ರೆಸ್ ಎಸ್ಸಿ ಘಟಕದ ಜಿಲ್ಲಾಧ್ಯಕ್ಷ ಡಿ. ಪದ್ಮನಾಭ್, ಜಿಪಂ ಸದಸ್ಯೆ ಕಾವೇರಿ ಶೇಖರ್, ತಾಪಂ ಸದಸ್ಯರಾದ ಮಹದೇವ್ ನವಿಲೂರು, ಆರ್.ಡಿ. ಚಂದ್ರು, ತಾಪಂ ಮಾಜಿ ಅಧ್ಯಕ್ಷ ಎಸ್. ರಾಮು ಐಲಾಪುರ, ಮಾಜಿ ಸದಸ್ಯ ಶೇಖರ್, ಕಾಂಗ್ರೆಸ್ ಎಸ್ಸಿ ಘಟಕದ ಅಧ್ಯಕ್ಷ ಪಿ. ಮಹದೇವ್, ಛಲವಾದಿ ಮಹಾಸಭಾ ತಾ. ಅಧ್ಯಕ್ಷ ಪಿ.ಪಿ. ಮಹದೇವ್, ಮುಖಂಡರಾದ ಟಿ.ಈರಯ್ಯ, ಕುಮಾರ್ ಕರಡೀಪುರ, ಅಣ್ಣಯ್ಯ ದಾಸ್, ಸೀಗೂರು ವಿಜಯಕುಮಾರ್ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

