ಮೈಸೂರು

ಅಭಿವೃದ್ಧಿ ಕಾರ್ಯಕ್ಕೆ ಪ್ರಚಾರ ನೀಡದ್ದರಿಂದ ಸೋಲು: ಜೋಶಿ

Published On :

ಪಿರಿಯಾಪಟ್ಟಣ: ಈ ಹಿಂದೆ ಬಿಜೆಪಿ ಸರ್ಕಾರ ತಾನು ಮಾಡಿದ ಅಭಿವೃದ್ಧಿ ಕಾರ್ಯಗಳ ಬಗ್ಗೆ ಮತದಾರರಿಗೆ ಪ್ರತಿಬಿಂಬಿಸುವಲ್ಲಿ ವಿಫಲವಾಗಿದ್ದೆ ಪಕ್ಷದ ಸೋಲಿಗೆ ಕಾರಣ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಪ್ರಹ್ಲಾದ್ ಜೋಶಿ ಹೇಳಿದರು.
ಪಕ್ಷದ ಅಭ್ಯರ್ಥಿ ಆರ್.ಟಿ. ಸತೀಶ್ ಪರವಾಗಿ ಪಟ್ಟಣದಲ್ಲಿ ಮತಯಾಚಿಸಿ ಮಾತನಾಡಿ, ಕಳೆದ ಐದು ವರ್ಷಗಳಲ್ಲಿ ಬಿಜೆಪಿ ಸರ್ಕಾರ ಈ ಹಿಂದೆ ಯಾರು ಮಾಡದ ಅಭಿವೃದ್ಧಿ ಕಾರ್ಯಗಳನ್ನು ಮಾಡಿದೆ. ಆದರೆ, ಮತದಾರರಿಗೆ ಅಭಿವೃದ್ಧಿ ಕಾರ್ಯಗಳ ಬಗ್ಗೆ ಮಾಹಿತಿ ತಲುಪಿಸುವಲ್ಲಿ ವಿಫಲವಾಗಿದೆ ಎಂದು ತಿಳಿಸಿದರು.
ಈಗಾಗಲೇ ಮತದಾರರು ಶಿಕ್ಷೆ ನೀಡಿದ್ದು, ವಿಧಾನಸಭೆಯಲ್ಲಿ ಸಮರ್ಥ ಪ್ರತಿಪಕ್ಷವಾಗಿ ಕಾರ್ಯನಿರ್ವಹಿಸಲು ಕ್ಷೇತ್ರದ ಬಿಜೆಪಿ ಅಭ್ಯರ್ಥಿಯನ್ನು ಗೆಲ್ಲಿಸಿಕೊಡುವಂತೆ ಮನವಿ ಮಾಡಿದರು.
ಬಿಜೆಪಿ ಅಭ್ಯರ್ಥಿ ಆರ್.ಟಿ. ಸತೀಶ್, ವಿಧಾನಪರಿಷತ್ ಸದಸ್ಯ ಸಿ.ಎಚ್. ವಿಜಯಶಂಕರ್, ರಮೇಶ್, ಬಿ.ಎಸ್. ರಾಮಚಂದ್ರ, ವಕೀಲ ಕೃಷ ,  ಪ್ರಸಾದ್, ಪುಟ್ಟಸ್ವಾಮಿ, ಟಿ. ರಮೇಶ್, ವಿಕ್ರಂರಾಜ್, ಪ್ರಸನ್ನಕೇಶವ, ಲೋಕಪಾಲಯ್ಯ, ಸುದರ್ಶನ್, ಪಿ.ಜೆ. ರವಿ, ಪಿ.ಬಿ. ಶ್ರೀನಿವಾಸ್ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.