'ಕೃಷಿ ಕ್ಷೇತ್ರ ಸುಧಾರಣೆಗೆ ಸಮನ್ವಯ ಅಗತ್ಯ'
ಕ.ಪ್ರ.ವಾರ್ತೆ , ಹುಣಸೂರು , ಮೇ 24
ಕೃಷಿ ಇಲಾಖೆಯೊಂದರಿಂದಲೇ ಕೃಷಿ ಸುಧಾರಣೆ ಕಾಣಲು ಸಾಧ್ಯವಿಲ್ಲ. ನೀರಾವರಿ, ತೋಟಗಾರಿಕೆ, ಕೃಷಿ ಮಾರುಕಟ್ಟೆ, ಇಂಧನ ಇಲಾಖೆ ಸೇರಿದಂತೆ ಇತರೆ ಇಲಾಖೆಗಳ ಜೊತೆಗೂಡಿ ಕಾರ್ಯನಿರ್ವಹಿಸಿದಲ್ಲಿ ಮಾತ್ರ ಕೃಷಿ ಕ್ಷೇತ್ರ ಸುಧಾರಣೆ ಕಾಣಲು ಸಾಧ್ಯ ಎಂದು ಕೃಷಿ ಸಚಿವ ಕೃಷ , ಬೈರೇಗೌಡ ಅಭಿಪ್ರಾಯಪಟ್ಟರು.
ಶುಕ್ರವಾರ ಪಿರಿಯಾಪಟ್ಟಣದ ಚುನಾವಣಾ ಪ್ರಚಾರಕ್ಕೆ ತೆರಳುತ್ತಿದ್ದ ವೇಳೆ ಶಾಸಕ ಎಚ್.ಪಿ. ಮಂಜುನಾಥ್ ಅವರ ಮನೆಗೆ ಭೇಟಿ ನೀಡಿದ, ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.
ಈ ಬಾರಿ ನಿರೀಕ್ಷೆಯಷ್ಟು ಮಳೆ ಬಂದಿಲ್ಲ. ಮಳೆ ಬರುವ ನಿರೀಕ್ಷೆಯಲ್ಲಿದ್ದು, ಪ್ರಥಮ ಹಂತದಲ್ಲಿ ಅಗತ್ಯ ಬಿತ್ತನೆ ಬೀಜ, ರಸಗೊಬ್ಬರ ಹಾಗೂ ಇನ್ನಿತರೆ ಸವಲತ್ತು ಕ್ರೋಡೀಕರಿಸಲಾಗಿದೆ. ರೈತರಲ್ಲಿ ಸ್ವಾವಲಂಬಿ, ಸ್ವಾಭಿಮಾನಿ ಬದುಕನ್ನು ರೂಪಿಸಲು ತಮ್ಮ ಸರ್ಕಾರ, ಕೃಷಿ ಇಲಾಖೆಯಲ್ಲಿ ಹೊಸ- ಹೊಸ ಕಾರ್ಯಕ್ರಮ ಜಾರಿಗೆ ತರಲಾಗುತ್ತದೆ. ರೈತರು ಸದುಪಯೋಗಿಸಿಕೊಂಡು ಅಭಿವೃದ್ಧಿಯಾಗುವಂತೆ ಸಲಹೆ ನೀಡಿದರು.
ಸಾವಯವ ಕೃಷಿ ಪ್ರಾಧಿಕಾರದಲ್ಲಿ ನಡೆದಿರುವ ಅವ್ಯವಹಾರದ ಬಗ್ಗೆ ಸರ್ಕಾರ ತನಿಖೆ ನಡೆಸಲಿದೆಯೇ ಎಂಬ ಪ್ರಶ್ನೆಗೆ ಸಾವಯವ ಕೃಷಿ ಬಗ್ಗೆ ತಮ್ಮದು ತಕರಾರಿಲ್ಲ. ಆದರೆ, ಪ್ರಾಧಿಕಾರದ ರೈತ ವಿರೋಧಿ ಚಟುವಟಿಕೆ ತಮ್ಮಲ್ಲಿ ಆತಂಕ ಮೂಡಿಸಿದೆ. ಇದು ತೋಟಗಾರಿಕೆ ಇಲಾಖೆಯ ವ್ಯಾಪ್ತಿಗೆ ಬರಲಿದ್ದು, ಮುಖ್ಯಮಂತ್ರಿಗಳಿಗೆ ಈ ಬಗ್ಗೆ ಸಂಪೂರ , ಅರಿವಿದ್ದು, ತನಿಖೆ ಮಾಡಿ ಸೂಕ್ತ ಕ್ರಮ ಕೈಗೊಳ್ಳಲಿದ್ದಾರೆ ಎಂದು ಹೇಳಿದರು.
ಇತ್ತೀಚಿಗೆ ಬ್ರಾಂಡೆಡ್ ಬಿತ್ತನೆ ಬೀಜ, ಗೊಬ್ಬರ ಕಂಪನಿಗಳ ಹೆಸರಿನಲ್ಲಿ ನಕಲಿ ಬಿತ್ತನೆ ಬೀಜ, ಗೊಬ್ಬರ ಮಾರಾಟ ಮಾಡುತ್ತಿರುವುದು ಆತಂಕಕಾರಿಯಾಗಿದ್ದು, ಈ ಬಗ್ಗೆ ತನಿಖೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳುವ ಬಗ್ಗೆ ಚಿಂತನೆ ನಡೆಸಲಾಗುವುದು ಎಂದು ತಿಳಿಸಿದರು.
ಶಾಸಕರ ವಿಶ್ವಾಸ: ಬೈರೇಗೌಡರು ಕೃಷಿಯಲ್ಲಿ ಕ್ರಾಂತಿ ಮಾಡಿದ್ದು, ಅದೇ ಮಾದರಿಯಲ್ಲಿ ಪುತ್ರ ಕೃಷ , ಬೈರೇಗೌಡರು ಕೆಲಸ ಮಾಡುವ ವಿಶ್ವಾಸವಿದೆ. ಇವರ ಅವಧಿಯು ಈ ಕ್ಷೇತ್ರದಲ್ಲಿ ಹೊಸ- ಹೊಸ ಕಾರ್ಯಕ್ರಮ ರೂಪಿಸಿ, ರೈತರ ಮನ ಗೆಲ್ಲಲಿದ್ದಾರೆಂದು ಶಾಸಕ ಎಚ್.ಪಿ. ಮಂಜುನಾಥ್ ವಿಶ್ವಾಸ ವ್ಯಕ್ತಪಡಿಸಿದರು.
ಜಿಪಂ ಸದಸ್ಯೆ ಡಾ. ಪುಷ್ಪಾವತಿ ಅಮರನಾಥ್ ಅವರು ಸಚಿವರಿಗೆ ಗಿಡ ನೀಡುವ ಮೂಲಕ ಪರಿಸರ ಪ್ರೇಮ ಮೆರೆದರು. ಶಾಸಕರು ಸನ್ಮಾನಿಸಿದರು.
ಎಐಸಿಸಿ ಸದಸ್ಯ ಎಚ್.ಎನ್. ಪ್ರೇಮ್ಕುಮಾರ್, ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷ ರಿಜ್ವಾನ್, ತಾ. ಕಾಂಗ್ರೆಸ್ ಅಧ್ಯಕ್ಷ ಬಸವರಾಜು, ಯುವ ಅಧ್ಯಕ್ಷ ಲೋಕೇಶ್, ಮಾಜಿ ಅಧ್ಯಕ್ಷ ಧರ್ಮಾಪುರ ರಮೇಶ್, ಜಿಪಂ ಸದಸ್ಯ ರಮೇಶ್, ಮಾಜಿ ಸದಸ್ಯ ಡಿ.ಕೆ. ಕುನ್ನೇಗೌಡ, ಪುರಸಭಾ ಸದಸ್ಯರಾದ ಶಿವರಾಜ್, ಸುನಿತ ಜಯರಾಮೇಗೌಡ, ಶ್ರೀನಿವಾಸ್, ನಿವೃತ್ತ ಅಧಿಕಾರಿ ಪಾಪಣ , ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

