'ಕಾಂಗ್ರೆಸ್ನಿಂದ ಬಡತನ ನಿರ್ಮೂಲನೆ'
ರಾವಂದೂರು: ಕಾಂಗ್ರೆಸ್ನಿಂದ ಬಡತನ ನಿರ್ಮೂಲನೆ ಕಾರ್ಯಕ್ರಮಗಳು ರಾಜ್ಯದಲ್ಲಿ ಜಾರಿಯಾಗಲಿವೆ ಎಂದು ಛಲವಾದಿ ಮಹಾಸಭಾ ಸಂಸ್ಥಾಪಕ ಅಧ್ಯಕ್ಷ ಕೆ. ಶಿವರಾಂ ಹೇಳಿದರು.
ತಾಲೂಕಿನ ರಾವಂದೂರು ಗ್ರಾಮದಲ್ಲಿ ಮತಯಾಚನೆ ಮಾಡಿ ಮಾತನಾಡಿ, ಸಿದ್ದರಾಮಯ್ಯ ಮುಖ್ಯಮಂತ್ರಿಯಾಗುತ್ತಿದ್ದಂತೆ ದಲಿತರ ಸಾಲ ಮನ್ನಾ ಮಾಡಿರುವುದು, ದಲಿತರ ಪರವಾದ ಸರ್ಕಾರವಿದೆ ಎಂಬದನ್ನು ತೋರಿಸಿದೆ. ಅಲ್ಲದೆ, ಹಿರಿಯ ದಲಿತ ಮುಖಂಡರಿಗೆ ಪ್ರಮುಖ ಖಾತೆ ನೀಡಿ ಗೌರವಿಸಿದೆ. ಅಲ್ಲದೆ, ಮುಂದಿನ ದಿನಗಳಲ್ಲಿ ದಲಿತರ ಪರವಾದ ಅನೇಕ ಯೋಜನೆಗಳು ಜಾರಿಯಾಗಲಿದ್ದು, ಇದಕ್ಕಾಗಿ ಜನರು ಕಾಂಗ್ರೆಸ್ ಬೆಂಬಲಿಸುವಂತೆ ಮನವಿ ಮಾಡಿದರು.
ಲೋಕೋಪಯೋಗಿ ಸಚಿವ ಎಚ್.ಸಿ. ಮಹದೇವಪ್ಪ ಮಾತನಾಡಿ, ದಲಿತರನ್ನು ಮುಖ್ಯಮಂತ್ರಿ ಮಾಡುವ ಅವಕಾಶ ಇದ್ದದ್ದು ಕಾಂಗ್ರೆಸ್ಗಿಂತ ಮೊದಲು ಜೆಡಿಎಸ್ಗೆ, ಆದರೆ ಅವರು ಉದ್ದೇಶ ಪೂರ್ವಕವಾಗಿ ಖರ್ಗೆಗೆ ಮುಖ್ಯಮಂತ್ರಿ ಪಟ್ಟ ತಪ್ಪಿಸಿ, ಧರಂಸಿಂಗ್ ನೀಡಿದರು. ಆದರೆ, ಇಂದು ಕೇಂದ್ರದ ಮಂತ್ರಿ ಸ್ಥಾನದಲ್ಲಿರುವ ಖರ್ಗೆಯವರಿಗೆ ಮುಖ್ಯಮಂತ್ರಿ ಸ್ಥಾನ ನೀಡಲಿಲ್ಲ ಎಂಬ ಸತ್ಯಕ್ಕೆ ದೂರವಾದ ಆರೋಪ ಮಾಡುತ್ತಿದೆ ಎಂದು ಹೇಳಿದರು. ಎಸ್ಸಿ ಘಟಕದ ಜಿಲ್ಲಾಧ್ಯಕ್ಷ ಡಿ. ಪದ್ಮನಾಭ್, ಛಲವಾದಿ ಮಹಾಸಭಾ ರಾಜ್ಯಾಧ್ಯಕ್ಷ ಕೆ.ಸಿ. ಬಸವರಾಜ್, ಜಿಪಂ ಮಾಜಿ ಅಧ್ಯಕ್ಷೆ ಜಯಲಕ್ಷ್ಮಿ ಛಲವಾದಿ ಮಹಾಸಭಾ ತಾ. ಅಧ್ಯಕ್ಷ ಪಿ.ಪಿ. ಮಹದೇವ್, ತಾ. ಎಸ್ಸಿ ಘಟಕದ ಅಧ್ಯಕ್ಷ ಪಿ. ಮಹದೇವ್, ತಾಪಂ ಸದಸ್ಯ ಮಹದೇವ್, ಆರ್.ಸಿ. ಚಂದ್ರು, ಆರ್.ಆರ್. ಶಿವರಾಂ, ಚಂದ್ರು ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

