ಸಮರ್ಥ ಪ್ರತಿಪಕ್ಷಕ್ಕಾಗಿ ಜೆಡಿಎಸ್ ಗೆಲ್ಲಿಸಿ: ಸಿಂಧ್ಯಾ
ಕ.ಪ್ರ.ವಾರ್ತೆ ಪಿರಿಯಾಪಟ್ಟಣ ಮೇ 25
ಕನಕಪುರ ಕ್ಷೇತ್ರದಲ್ಲಿನ ತಮ್ಮ ಸೋಲು ವೈಯಕ್ತಿಕ. ಅದು ಪಕ್ಷದ ಸೋಲಲ್ಲ ಎಂದು ಮಾಜಿ ಸಚಿವ ಹಾಗೂ ಜೆಡಿಎಸ್ ಪಕ್ಷದ ರಾಜ್ಯ ಕಾರ್ಯಾಧ್ಯಕ್ಷ ಪಿ.ಜಿ.ಆರ್. ಸಿಂದ್ಯಾ ಹೇಳಿದರು.
ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ತಮ್ಮ ಕ್ಷೇತ್ರದ ಚುನಾವಣೆಯಲ್ಲಿ ಅನೇಕ ಅಕ್ರಮಗಳು ನಡೆದಿದ್ದು, ಚುನಾವಣೆ ಆಯೋಗ ಹಲ್ಲಿಲ್ಲದ ಹಾವಾಗಿದೆ ಎಂದು ಆರೋಪಿಸಿದರು. ಆಡಳಿತ ಪಕ್ಷ ಸಮರ್ಥವಾಗಿ ಕಾರ್ಯ ನಿರ್ವಹಿಸಬೇಕಾದರೆ ಸಮರ್ಥ ಪ್ರತಿಪಕ್ಷದ ಅವಶ್ಯಕತೆ ಇದ್ದು, ಪಕ್ಷದ ಅಭ್ಯರ್ಥಿ ಕೆ. ಮಹದೇವ್ ಅವರನ್ನು ಗೆಲ್ಲಿಸಿಕೊಡುವಂತೆ ಮನವಿ ಮಾಡಿದರು.
ವಿಧಾನ ಪರಿಷತ್ನ ಜೆಡಿಎಸ್ ನಾಯಕ ಎಂ.ಸಿ. ನಾಣಯ್ಯ ಮಾತನಾಡಿ, ಬಿಜೆಪಿ ಸರ್ಕಾರ ಅಧಿಕಾರದಲ್ಲಿದ್ದಾಗ ಪ್ರಬಲ ಪ್ರತಿಪಕ್ಷವಾಗಿ ಕೆಲಸ ಮಾಡಿದ್ದು, ಬಿಜೆಪಿ ಸರ್ಕಾರ ಮಾಡಿದ ಅಭಿವೃದ್ಧಿ ಎಂದರೆ ಶಾಸಕರ ಮತ್ತು ಸಚಿವರ ವೈಯಕ್ತಿಕ ಅಭಿವೃದ್ಧಿಯೇ ಹೊರತು ರಾಜ್ಯದ ಅಭಿವೃದ್ಧಿ ಅಲ್ಲ ಎಂದು ಟೀಕಿಸಿದರು.
ಕ್ಷೇತ್ರದ ಜನತೆ ಪಕ್ಷದ ಅಭ್ಯರ್ಥಿ ಕೆ. ಮಹದೇವ್ ಅವರನ್ನು ಗೆಲ್ಲಿಸುವ ಮೂಲಕ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರ ಕೈ ಬಲಪಡಿಸುವಂತೆ ಮನವಿ ಮಾಡಿದರು.
ಪಕ್ಷದ ರಾಜ್ಯ ಉಪಾಧ್ಯಕ್ಷ ಎ.ಎಂ. ಶಾಂತು ಅಪ್ಪಯ್ಯ, ಮೈಸೂರಿನ ನಗರಪಾಲಿಕೆ ಸದಸ್ಯರಾದ ಆರ್. ಲಿಂಗಪ್ಪ, ಚೆಲುವೇಗೌಡ, ಪಪಂ ಸದಸ್ಯರಾದ ವೇಣುಗೋಪಾಲ್, ಮಂಜುನಾಥ್ಸಿಂಗ್ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

