ಮೈಸೂರು

'ಕಾರ್ಮಿಕರ ಉತ್ತೇಜನಕ್ಕೆ ಅಗತ್ಯ ನೆರವು'

Published On :

ಕ.ಪ್ರ.ವಾರ್ತೆ ಮೈಸೂರು ಮೇ 26
ಕಾರ್ಮಿಕರನ್ನು ಉತ್ತೇಜಿಸಲು ಅಗತ್ಯ ನೆರವು ನೀಡಲಾಗುವುದು ಎಂದು ಮೈಸೂರು ವಿಭಾಗದ ಸಹಾಯಕ ಕಾರ್ಮಿಕ ಆಯುಕ್ತ ವೆಂಕಟೇಶ್ ಅಪ್ಪಯ್ಯ ಸಂಧಿಹಟ್ಟಿ ಹೇಳಿದರು.
ಅಖಿಲ ಭಾರತ ಟ್ರೇಡ್ ಯೂನಿಯನ್ ಕಾಂಗ್ರೆಸ್ ಹಾಗೂ ಇಪ್ಟಾ ಮೈಸೂರು ಜಿಲ್ಲಾ ಸಮಿತಿಯು ಕಾರ್ಮಿಕ ಕಲ್ಯಾಣ ಮಂಡಳಿಯ ಸಹಯೋಗದಲ್ಲಿ ಇಲ್ಲಿನ ವಿಜಯನಗರದಲ್ಲಿರುವ ಕನ್ನಡ ಸಾಹಿತ್ಯ ಪರಿಷತ್ ಭವನದಲ್ಲಿ ಭಾನುವಾರ ಏರ್ಪಡಿಸಿದ್ದ ಬಹುಮಾನ ವಿತರಣಾ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಶ್ರಮ ವಹಿಸಿ ದುಡಿಯುವ ಕಾರ್ಮಿಕರಿಗೆ ಕ್ರೀಡೆ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳು ಅವಶ್ಯಕ. ಇವುಗಳು ಮನಸ್ಸಿಗೆ ಮನರಂಜನೆ ನೀಡುವುದರ ಜತೆಗೆ ಕಾರ್ಮಿಕರ ಆರೋಗ್ಯ ವೃದ್ಧಿಗೂ ತುಂಬ ಸಹಾಯಕವಾಗಲಿದೆ. ಇಂತಹ ಕ್ರೀಡಾ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಅಗತ್ಯ ಸಹಾಯ ಹಾಗೂ ನೆರವು ನೀಡಲಾಗುವುದು ಎಂದರು.  
ಕಾರ್ಮಿಕ ಕಲ್ಯಾಣ ಮಂಡಳಿಯು ಅನೇಕ ಸವಲತ್ತುಗಳನ್ನು ಕಾರ್ಮಿಕರ ಹಿತಕ್ಕಾಗಿ ಮತ್ತು ಅವರ ಕುಟುಂಬ ವರ್ಗಕ್ಕಾಗಿ ಅನುಷ್ಠಾನಗೊಳಿಸಿದ್ದು, ಅದರ ಸದುಪಯೋಗ ಪಡೆದು ತಮ್ಮ ಹಾಗೂ ತಮ್ಮ ಮಕ್ಕಳ ಭವಿಷ್ಯವನ್ನು ಉಜ್ವಲಗೊಳಿಸಿಕೊಳ್ಳುವಂತೆ ಕರೆ ನೀಡಿದ ಅವರು, ಕಾರ್ಮಿಕ ಸಂಘಟನೆಗಳು ಹೋರಾಟದ ಜತೆಗೆ ಕ್ರೀಡಾ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳಿಗೂ ಹೆಚ್ಚಿನ ಒತ್ತು ನೀಡಬೇಕು ಎಂದು ತಿಳಿಸಿದರು.
ಬಹುಮಾನ ವಿತರಣೆ: ಕಾರ್ಮಿಕ ದಿನಾಚರಣೆ ಅಂಗವಾಗಿ ಕಾರ್ಮಿಕರು ಹಾಗೂ ಅವರ ಕುಟುಂಬ ವರ್ಗದವರಿಗೆ ಏರ್ಪಡಿಸಿದ್ದ ಓಟದ ಸ್ಪರ್ಧೆ, ವಾಲಿಬಾಲ್, ಕ್ರಿಕೆಟ್ ಮುಂತಾದ ಕ್ರೀಡಾಗಳು ಹಾಗೂ ಭಾವಗೀತೆ, ಜನಪದ ಗೀತೆ, ಚಿತ್ರಗೀತೆ, ನೃತ್ಯ ಮುಂತಾದ ಸಾಂಸ್ಕೃತಿಕ ಸ್ಪರ್ಧೆಯಲ್ಲಿನ ಪ್ರತಿ ವಿಭಾಗದಲ್ಲಿ ವಿಜೇತರಾದ ತಲಾ ಮೂವರಿಗೆ ಬಹುಮಾನಗಳನ್ನು ಗಣ್ಯರು ವಿತರಿಸಿದರು. ಎಐಟಿಯುಸಿ ಜಿಲ್ಲಾ ಸಮಿತಿ ಪ್ರಧಾನ ಕಾರ್ಯದರ್ಶಿ ಎಚ್.ಆರ್. ಶೇಷಾದ್ರಿ ಅಧ್ಯಕ್ಷತೆ ವಹಿಸಿದ್ದರು. ಸಿಪಿಐ ರಾಜ್ಯ ಸಮಿತಿ ಕಾರ್ಯದರ್ಶಿ ಪಿ.ವಿ. ಲೋಕೇಶ್, ಇಪ್ಟಾ ರಾಜ್ಯ ಸಮಿತಿ ಸಂಚಾಲಕ ಪ್ರಸನ್ನಕುಮಾರ್, ಮೈಸೂರು ಸಮಿತಿ ಕಾರ್ಯದರ್ಶಿ ಎಚ್.ಬಿ. ರಾಮಕೃಷ್ಣ, ಮುಖಂಡರಾದ ಕೆ.ಎಸ್. ರೇವಣ್ಣ, ಕೇಶವಮೂರ್ತಿ ಹಾಗೂ ಎಂ.ಜಿ. ಪ್ರಸಾದ್ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.