ತಿರುಪತಿಯಲ್ಲಿ ಅಪಘಾತ: ಮೈಸೂರಿನ ಇಬ್ಬರು ಸಾವು
ಮೈಸೂರು: ತಿರುಪತಿಯಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಮೈಸೂರಿನ ಕೆಎಸ್ಆರ್ಟಿಸಿ ಬಸ್ ಚಾಲಕ ಮತ್ತು ನಿರ್ವಾಹಕ ಇಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಭಾನುವಾರ ಮುಂಜಾನೆ ನಡೆದಿದೆ.
ಮೈಸೂರಿನ ಕ್ಯಾತಮಾರನಹಳ್ಳಿ ನಿವಾಸಿ ನಾಗರಾಜ್ (52) ಮತ್ತು ಆಲನಹಳ್ಳಿ ನಿವಾಸಿ ನಾಗರಾಜು (50) ಮೃತಪಟ್ಟವರು. ಈ ಇಬ್ಬರು ಕೆಎಸ್ಆರ್ಟಿಸಿ ಬಸ್ಸಿನ ಚಾಲಕ ಮತ್ತು ನಿರ್ವಾಹಕರು. ಶನಿವಾರ ರಾತ್ರಿ ಮೈಸೂರಿನಿಂದ ತಿರುಪತಿಗೈ ಹೊರಟಿದ್ದು, ತಿರುಪತಿ ಸಮೀಪದ ಚಂದ್ರಗಿರಿ ಬಳಿ ಲಾರಿ ಮತ್ತು ಬಸ್ ನಡುವೆ ಅಪಘಾತ ಸಂಭವಿಸಿ ಈ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಹಲವು ಪ್ರಯಾಣಿಕರು ಗಾಯಗೊಂಡಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಾಗಿದ್ದಾರೆ. ಕ್ಯಾತಮಾರನಹಳ್ಳಿಯ ನಾಗರಾಜ್ ಅವರು ಶನಿವಾರವಷ್ಟೇ ವಿವಾಹ ವಾರ್ಷಿಕೋತ್ಸವ ಆಚರಿಸಿಕೊಂಡು ಕರ್ತವ್ಯಕ್ಕೆ ಹಾಜರಾಗಿದ್ದರು ಎಂದು ತಿಳಿದು ಬಂದಿದೆ.
ಶಾಲೆಯಲ್ಲಿ ಕಂಪ್ಯೂಟರ್ ಉಪಕರಣ ಕಳವು
ಮೈಸೂರು: ಕೆಆರ್ಎಸ್ ರಸ್ತೆ ಮಾಂಡೋವಿ ಮೋಟಾರ್ಸ್ ಪಕ್ಕದಲ್ಲಿರುವ ರೋಟರಿ ಪ್ರೌಢಶಾಲೆಯಲ್ಲಿ 1.30 ಲಕ್ಷ ಮೌಲ್ಯದ ಕಂಪ್ಯೂಟರ್ ಉಪಕರಣಗಳು ಕಳವಾಗಿವೆ. ಶಾಲೆಗೆ ಬೇಸಿಗೆ ರಜೆಯಿದ್ದು, ಇತ್ತೀಚೆಗಷ್ಟೇ ಪ್ರವೇಶ ಪ್ರಕ್ರಿಯೆ ಆರಂಭವಾಗಿತ್ತು. ಶಾಲಾ ಕೊಠಡಿಗಳನ್ನು ಪರಿಶೀಲಿಸಿದಾಗ ಕಂಪ್ಯೂಟರ್ ಉಪಕರಣಗಳು ಕಳವಾಗಿರುವುದು ಪತ್ತೆಯಾಗಿದೆ. ಶಾಲೆಯ 8 ಕೊಠಡಿಗಳಲ್ಲಿರುವ ಕಂಪ್ಯೂಟರ್ಗಳಲ್ಲಿದ್ದ ಹಾರ್ಡ್ ಡಿಸ್ಕ್, ರ್ಯಾಮ್ ಇನ್ನಿತರ ಉಪಕರಣಗಳು ಕಳವಾಗಿವೆ. ಶಾಲೆಯ ನೌಕರರು ಯಾರಾದರೋ ಈ ಕೃತ್ಯ ಎಸಗಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ. ಈ ಸಂಬಂಧ ದೇವರಾಜ ಠಾಣೆ ಇನ್ಸ್ಪೆಕ್ಟರ್ ಎಚ್.ಎಂ. ಕಾಂತರಾಜು ಮತ್ತು ಸಿಬ್ಬಂದಿ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.
ಮಹಿಳೆ ಕೊಲೆ: ಮೂವರು ವಶಕ್ಕೆ
ಮೈಸೂರು: ಮಹಿಳೆ ಕೊಲೆ ಮಾಡಿ ತಾಲೂಕಿನ ವರಕೋಡು ಬಳಿ ಕೆರೆಗೆ ಚೀಲದಲ್ಲಿ ಕಟ್ಟಿ ಹಾಕಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮೂವರು ಆರೋಪಿಗಳನ್ನು ಭಾನುವಾರ ರಾತ್ರಿ ವಶಕ್ಕೆ ತೆಗೆದುಕೊಂಡು ವಿಚಾರಣೆ ನಡೆಸುತ್ತಿದ್ದಾರೆ. ಮೈಸೂರು ತಾಲೂಕು ಮೆಲ್ಲಹಳ್ಳಿ ನಿವಾಸಿ ಲೇ. ಸಾಕಯ್ಯ ಎಂಬವರ ಪತ್ನಿ ಗೀತಾ (26) ಅವರ ಶವ ಬುಧವಾರ ವರಕೊಡು ಬಳಿಯ ಗೊರಮ ಕೆರೆಯಲ್ಲಿ ಪತ್ತೆಯಾಗಿತ್ತು. ಈ ಸಂಬಂಧ ಕೊಲೆ ಪ್ರಕರಣ ದಾಖಲಿಸಿಕೊಂಡಿರುವ ಮೈಸೂರು ದಕ್ಷಿಣ ಠಾಣೆ ಪೊಲೀಸರು ಪ್ರಸಾದ್ ಸೇರಿದಂತೆ ಮೂವರನ್ನು ವಶಕ್ಕೆ ತೆಗೆದುಕೊಂಡು ತೀವ್ರ ವಿಚಾರಣೆ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

