ನಗರದಲ್ಲಿ ಧಾರಾಕಾರವಾಗಿ ಸುರಿದ ಮಳೆ
ಕ.ಪ್ರ.ವಾರ್ತೆ ಮೈಸೂರು ಮೇ 26
ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಭಾನುವಾರ ಸಂಜೆ ಜೋರು ಮಳೆ ಬಿತ್ತು.
ಮಳೆಯಿಂದಾಗಿ ಯಾವುದೇ ಅನಾಹುತ ಸಂಭವಿಸಿಲ್ಲ. ಕೆಲವೆಡೆ ಮಾತ್ರ ಮರದ ಕೊಂಬೆಗಳು ಮುರಿದು ಬಿದ್ದಿವೆ. ತಗ್ಗು ಪ್ರದೇಶಕ್ಕೆ ನೀರು ನುಗ್ಗಿದೆ. ರಜೆ ದಿನವಾದ ಭಾನುವಾರ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ನಗರಕ್ಕೆ ಆಗಮಿಸಿದರು. ಮಳೆಯಿಂದಾಗಿ ಕೆಲಕಾಲ ಅರಮನೆ ಸುತ್ತಮುತ್ತ ಸಂಚಾರ ಅಸ್ತವ್ಯಸ್ತಗೊಂಡಿತು.
ಮಳೆಯಿಂದಾಗಿ ರಸ್ತೆ ಬದಿ ಪಾಲಿಕೆಯವರು ವಿವಿಧ ಕಾಮಗಾರಿಗಳಾಗಿ ಅಗೆದಿರುವ ಗುಂಡಿಗಳಲ್ಲಿ ನೀರು ತುಂಬಿಕೊಂಡಿತ್ತು. ಕೆಲವು ಕಡೆ ಮಣ್ಣು ಕುಸಿದಿತ್ತು. ಇದರಿಂದ ಸಾರ್ವಜನಿಕರು ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ.
ಛತ್ತೀಸ್ಗಡದಲ್ಲಿ ನಕ್ಸಲರ ಅಟ್ಟಹಾಸಕ್ಕೆ ಖಂಡನೆ
ಕ.ಪ್ರ.ವಾರ್ತೆ ಮೈಸೂರು ಮೇ 26
ಛತ್ತೀಸ್ಗಡದಲ್ಲಿ ಕಾಂಗ್ರೆಸ್ ಪಕ್ಷದ ಪರಿವರ್ತನಾ ರ್ಯಾಲಿ ಮೇಲೆ ನಕ್ಸಲರು ದಾಳಿ ನಡೆಸಿರುವುದನ್ನು ಖಂಡಿಸಿ ಎಬಿವಿಪಿ ಕಾರ್ಯಕರ್ತರು ಗಾಂಧಿಚೌಕದಲ್ಲಿ ಭಾನುವಾರ ಪ್ರತಿಭಟಿಸಿದರು.
ಛತ್ತೀಸ್ಗಡದ ಜಗದಲಾಪುರದಲ್ಲಿ ಕಾಂಗ್ರೆಸ್ ಪರಿವರ್ತನಾ ರ್ಯಾಲಿ ಮೇಲೆ ನಕ್ಸಲರು ದಾಳಿ ನಡೆಸಿರುವುದು ಪ್ರಜಾಪ್ರಭುತ್ವ, ಭಾರತೀಯರ ಸ್ವಾಭಿಮಾನ ಮೇಲಾದ ದಾಳಿಯಾಗಿದೆ.
ದೇಶದ ಆಂತರಿಕ ಭದ್ರತೆಗೆ ಧಕ್ಕೆ ತರುತ್ತಿರುವ ವಿಕೃತ ಮನಸ್ಸಿನ ನಕ್ಸಲರ ಕೃತ್ಯವನ್ನು ಎಲ್ಲರೂ ಒಗ್ಗೂಡಿ ಬಗ್ಗು ಬಡಿಯಬೇಕಾಗಿದೆ ಎಂದು ಆಗ್ರಹಿಸಿದರು.
ಮೃತರ ಆತ್ಮಕ್ಕೆ ಶಾಂತಿ ಸಿಗಲಿ. ಪ್ರಜಾಪ್ರಭುತ್ವದ ಮಹತ್ವ ಉಳಿಸಲು ನಕ್ಸಲರನ್ನು ಮಟ್ಟಹಾಕಲು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಮುಂದಾಗಬೇಕು ಎಂದು ಒತ್ತಾಯಿಸಿದರು.
ಎಬಿವಿಪಿ ನಗರ ಕಾರ್ಯದರ್ಶಿ ವೆಂಕಟೇಶ್, ವಿಭಾಗ ಸಂಘಟನಾ ಕಾರ್ಯದರ್ಶಿ ನಾಗೇಂದ್ರಸ್ವಾಮಿ, ನಗರ ಸಂಘಟನಾ ಕಾರ್ಯದರ್ಶಿ ಶಿವಕುಮಾರ್, ಮುಖಂಡರಾದ ಅಖಿಲ, ವಿಕಾಸ್, ರಾಕೇಶ್, ಬಾಲಕೃಷ್ಣ, ಕಾರ್ತಿಕ್, ಶರತ್, ವಿಲಾಸ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

