ವಾರದೊಳಗೆ ಗ್ರಾಮಗಳ ಸ್ವಚ್ಛತೆಗೆ ಡಿಸಿ ಸೂಚನೆ
ಕ.ಪ್ರ.ವಾರ್ತೆ ಮೈಸೂರು ಮೇ 26
ಸಾಂಕ್ರಾಮಿಕ ರೋಗಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಇನ್ನೂ ಒಂದು ವಾರದೊಳಗೆ ಜಿಲ್ಲೆಯ ಎಲ್ಲಾ ಗ್ರಾಮಗಳ ರಸ್ತೆ, ಚರಂಡಿಗಳನ್ನು ಸ್ವಚ್ಛಗೊಳಿಸಲು ತುರ್ತು ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಸಿ. ಶಿಖಾ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ತಾಲೂಕಿನ ಡಿ.ಸಾಲುಂಡಿ ಗ್ರಾಮದಲ್ಲಿ ಡೆಂಘೀಗೆ ನಾಲ್ಕು ಮಕ್ಕಳು ಬಲಿಯಾಗಿ, ಸಾಕಷ್ಟು ಮಂದಿ ಅಸ್ವಸ್ಥರಾಗಿರುವ ಸಂಬಂಧ ಭಾನುವಾರ ಜಿಪಂ ಸಭಾಂಗಣದಲ್ಲಿ ಅಧಿಕಾರಿಗಳ ಸಭೆ ನಡೆಸಿದ ಅವರು, ಅಧಿಕಾರಿಗಳಿಗೆ ಈ ಸೂಚನೆ ನೀಡಿದ್ದಾರೆ.
ಜೂನ್ ವೇಳೆಗೆ ಮುಂಗಾರು ಪ್ರವೇಶಿಸಲಿದ್ದು, ಅದು ಸಾಂಕ್ರಾಮಿಕ ರೋಗಗಳಿಗೆ ಪೂರಕವಾಗಿರುತ್ತದೆ. ಇಂತಹ ಸಂದರ್ಭದಲ್ಲಿ ಸ್ವಚ್ಛತೆ ಕಾಪಾಡುವ ಅಗತ್ಯವಿದೆ. ಚರಂಡಿ, ರಸ್ತೆಗಳಲ್ಲಿ ತ್ಯಾಜ್ಯ ವಿಲೇವಾರಿ ಮಾಡುವುದು, ಗ್ರಾಮದ ಹಳ್ಳಿ- ಕೊಳ್ಳಗಳಲ್ಲಿ ಮಳೆ ನೀರು ನಿಲ್ಲದಂತೆ ಸಮತಟ್ಟು ಮಾಡುವುದು, ಟ್ಯಾಂಕರ್ ಬಳಸಿ ಶುದ್ಧ ಕುಡಿಯುವ ನೀರನ್ನು ಒದಗಿಸುವ ಕಡೆಗೆ ಗಮನ ನೀಡಬೇಕು ಎಂದರು.
ಈಗಾಗಲೇ ಗ್ರಾಮ ಆರೋಗ್ಯ ಮತ್ತು ನೈರ್ಮಲ್ಯ ಸಮಿತಿ ರಚಿಸಲಾಗಿದ್ದು, ಈ ಸಮಿತಿಯ ಮೂಲಕ ಸಾಂಕ್ರಾಮಿಕ ರೋಗಗಳ ಕುರಿತು ಜನರಲ್ಲಿ ಅರಿವು ಮೂಡಿಸಬೇಕು. ಕುಡಿಯುವ ನೀರು ಮತ್ತು ಸ್ವಚ್ಛತೆಗೆ ಆದ್ಯತೆ ನೀಡಬೇಕು ಎಂದು ತಿಳಿಸಿದರು.
ಜಿಪಂ ಸಿಇಒ ಗೋಪಾಲ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಎಸ್.ಎಂ. ಮಾಲೇಗೌಡ, ಏಳು ತಾಲೂಕುಗಳ ಗ್ರಾಪಂ ಪಿಡಿಒಗಳು, ತಾಪಂ ಇಒಗಳು ಹಾಗೂ ತಾಲೂಕು ಆರೋಗ್ಯಾಧಿಕಾರಿಗಳು ಈ ಸಭೆಯಲ್ಲಿ ಭಾಗವಹಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

