ಮೈಸೂರು

ಕೈಮಗ್ಗ, ಜವಳಿ ಡಿಪ್ಲೊಮಾ ಕೋರ್ಸ್‌ಗೆ ಅರ್ಜಿ

Published On :

ಕ.ಪ್ರ. ವಾರ್ತೆ ,   ಮೈಸೂರು ,   ಮೇ 28
ಕೈಮಗ್ಗ ಮತ್ತು ಜವಳಿ ಇಲಾಖೆಯಿಂದ 2013-14ನೇ ಶೈಕ್ಷಣಿಕ ಸಾಲಿನಲ್ಲಿ ಕೈಮಗ್ಗ ಮತ್ತು ಜವಳಿ ತಂತ್ರಜ್ಞಾನದ ಡಿಪ್ಲೊಮಾ ಕೋರ್ಸಿಗಾಗಿ ಅರ್ಹ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಪ್ರತಿ ವಿದ್ಯಾರ್ಥಿಗೆ ಪ್ರತಿ ತಿಂಗಳು 400 ರಿಂದ 500 ರವರೆಗೆ ಶಿಷ್ಯವೇತನ ನೀಡಲಾಗುವುದು. ವಸತಿ ನಿಲಯದ ಸೌಲಭ್ಯ ಹಣ ಪಾವತಿಸುವ ಆಧಾರದ ಮೇಲೆ ಕಲ್ಪಿಸಲಾಗುವುದು.
ಕರ್ನಾಟಕ ಕೈಮಗ್ಗ ತಂತ್ರಜ್ಞಾನ ಸಂಸ್ಥೆ ಗದಗ- ಬೆಟಗೇರಿ (ಕರ್ನಾಟಕ)- 22 ಅಭ್ಯರ್ಥಿಗಳು, ಎಸ್‌ಪಿಕೆಎಂ ಭಾರತೀಯ ಕೈಮಗ್ಗ ತಂತ್ರಜ್ಞಾನ ಸಂಸ್ಥೆ, ವೆಂಕಟಗಿರಿ (ನೆಲ್ಲೂರು ಜಿಲ್ಲೆ, ಆಂಧ್ರಪ್ರದೇಶ)- 3, ಭಾರತೀಯ ಕೈಮಗ್ಗ ತಂತ್ರಜ್ಞಾನ ಸಂಸ್ಥೆ, ಸೇಲಂ (ತಮಿಳುನಾಡು)- 15, ಭಾರತೀಯ ಕೈಮಗ್ಗ ತಂತ್ರಜ್ಞಾನ ಸಂಸ್ಥೆ ಕಣ್ಣೂರು (ಕೇರಳ)- 2 ಅಭ್ಯರ್ಥಿಗಳಿಗೆ ಪ್ರವೇಶಾವಕಾಶ ಇದೆ.
ಮೆರಿಟ್ ಆಧಾರದ ಮೇಲೆ ಅರ್ಹ ಅಭ್ಯರ್ಥಿಗಳನ್ನು ಆಯಾ ಡಿಪ್ಲೊಮಾ ಸಂಸ್ಥೆಗಳಲ್ಲಿ ಕೋರ್ಸ್ ಪ್ರವೇಶ ಕುರಿತಂತೆ ಕೌನ್ಸೆಲಿಂಗ್ ಕರೆಯಲಾಗುವುದು. ಆಸಕ್ತರು ಹೆಚ್ಚಿನ ಮಾಹಿತಿಗಾಗಿ ದೂ.08372- 218696 ಸಂಪರ್ಕಿಸಬಹುದು. ಆಯಾ ಜಿಲ್ಲೆಯ ಕೈಮಗ್ಗ ಮತ್ತು ಜವಳಿ ಇಲಾಖೆಯ ಉಪನಿರ್ದೇಶಕರು/ ಸಹಾಯಕ ನಿರ್ದೇಶಕರನ್ನು ಸಂಪರ್ಕಿಸಿ ಅರ್ಜಿ ಪಡೆಯಬಹುದು.
ಅಗತ್ಯ ದಾಖಲಾತಿಗಳೊಂದಿಗೆ ಜೂ.10 ರೊಳಗೆ ಪ್ರಾಂಶುಪಾಲರು, ಕರ್ನಾಟಕ ಕೈಮಗ್ಗ ತಂತ್ರಜ್ಞಾನ ಸಂಸ್ಥೆ, ನರಸಾಪೂರ, ಗದಗ- 582102 ಕಚೇರಿಗೆ ಸಲ್ಲಿಸಬೇಕು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.