ಜಿಲ್ಲಾ ಪತ್ರಕರ್ತರ ಸಂಘದಿಂದ ಮೂವರು ವಜಾ
ಮೈಸೂರು: ಜಿಲ್ಲಾ ಪತ್ರಕರ್ತರ ಸಂಘವು ತನ್ನ ಮೂವರು ಸದಸ್ಯರನ್ನು ವಜಾಗೊಳಿಸಿದೆ.
ಹುಣಸೂರು ತಾಲೂಕು ಪತ್ರಕರ್ತರ ಸಂಘದಲ್ಲಿ ಸಂಘ ವಿರೋಧಿ ಚಟುವಟಿಕೆ ನಡೆಸಿ ಪತ್ರಕರ್ತರ ಸಮುದಾಯಕ್ಕೆ ಮುಜುಗರ ಹಾಗೂ ಸಂಘದ ಘನತೆಗೆ ಧಕ್ಕೆ ತಂದ ಹಿನ್ನೆಲೆಯಲ್ಲಿ ಸದಸ್ಯರಾದ ಎಚ್.ಕೆ. ಕೃಷ್ಣ, ಕೆ. ಕೃಷ್ಣ ಹಾಗೂ ಪ್ರತಾಪ್ ಅವರನ್ನು ಸಂಘದ ಸದಸ್ಯತ್ವದಿಂದ ಶಾಶ್ವತವಾಗಿ ವಜಾಗೊಳಿಸಿ ಜಿಲ್ಲಾ ಸಂಘ ಸರ್ವಾನುಮತದ ನಿರ್ಣಯ ಕೈಗೊಂಡಿದೆ.
ಇವರು ಹುಣಸೂರು ತಾಲೂಕು ಸಂಘದ ನಿಯಮ ಉಲ್ಲಂಘಿಸಿ ಪ್ರತ್ಯೇಕ ಸಂಘ ಸ್ಥಾಪಿಸಿ, ಮೂಲ ಸಂಘದ ಕಟ್ಟಡವನ್ನು ಅಕ್ರಮವಾಗಿ ವಶಕ್ಕೆ ಪಡೆದು, ಅಲ್ಲಿಯ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ್ದು, ಈ ಬಗ್ಗೆ ಪೊಲೀಸ್ ಠಾಣೆಯಲ್ಲೂ ದೂರು ದಾಖಲಾಗಿದೆ. ಅಲ್ಲದೆ ಅಲ್ಲಿನ ಪತ್ರಕರ್ತರ ಮೇಲೆ ಜಾತಿ ನಿಂದನೆಯ ಸುಳ್ಳು ಆರೋಪ ಮಾಡಿ ಬೆದರಿಕೆ ತಂತ್ರ ಅನುಸರಿಸಿದ್ದರು.
ಈ ಬಗ್ಗೆ ತಾಲೂಕು ಸಂಘವು ಈ ಮೂವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾ ಸಂಘಕ್ಕೆ ಮನವಿ ಮಾಡಿತ್ತು. ಸೋಮವಾರ ಜಿಲ್ಲಾ ಸಂಘದ ಕಾರ್ಯಕಾರಿಣಿ ಸಭೆಯಲ್ಲಿ ಈ ಬಗ್ಗೆ ಚರ್ಚಿಸಿ ಸಂಘದ ಸದಸ್ಯತ್ವದಿಂದ ಶಾಶ್ವತವಾಗಿ ವಜಾಗೊಳಿಸಲಾಗಿದೆ ಎಂದು ಸಂಘದ ಪ್ರಧಾನ ಕಾರ್ಯದರ್ಶಿ ಕೆ. ದೀಪಕ್ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

