ಹುಣಸೂರು ಕ್ಲಬ್ಗೆ ಆಯ್ಕೆ
ಹುಣಸೂರು: ಹುಣಸೂರು ಕ್ಲಬ್ನ ನೂತನ ಅಧ್ಯಕ್ಷರಾಗಿ ಎಂ.ಬಿ. ಚರಮಣ್ಣ ಹಾಗೂ ಗೌರವ ಕಾರ್ಯದರ್ಶಿಯಾಗಿ ಎಚ್.ಎಂ. ಚಂದ್ರಶೇಖರ್ ಆಯ್ಕೆಯಾಗಿದ್ದಾರೆ. ಕ್ಲಬ್ ಕಚೇರಿಯಲ್ಲಿ ನಡೆದ 2013- 14ನೇ ಸಾಲಿನ ವಾರ್ಷಿಕ ಮಹಾಸಭೆಯಲ್ಲಿ ನಡೆದ ಚುನಾವಣೆಯಲ್ಲಿ ನಿರ್ದೇಶಕರಾಗಿ ಜೆ.ಎಸ್. ಕೃಷ್ಣ, ಎಂ.ಕೆ. ಶ್ರೀನಿವಾಸ್, ಎಂ.ಎಸ್. ರಾಜಶೇಖರ್, ಕೆ. ದಯಾನಂದ್, ಕೆ.ಎಸ್. ವಿಶ್ವನಾಥ್ ಆಯ್ಕೆಯಾಗಿದ್ದಾರೆಂದು ಕಾರ್ಯದರ್ಶಿ ಎಚ್.ಎಂ. ಚಂದ್ರಶೇಖರ್ ತಿಳಿಸಿದ್ದಾರೆ.
ವಿದ್ಯಾರ್ಥಿನಿಲಯ ಪ್ರವೇಶಕ್ಕೆ ಅರ್ಜಿ
ಟಿ. ನರಸೀಪುರ: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು ಜಿಲ್ಲೆಯ ಟಿ. ನರಸೀಪುರ ತಾಲೂಕಿನಲ್ಲಿ ನಡೆಸುತ್ತಿರುವ ಮೆಟ್ರಿಕ್ಪೂರ್ವ ಬಾಲಕರ ವಿದ್ಯಾರ್ಥಿನಿಲಯದ ಪ್ರವೇಶಕ್ಕೆ ಅರ್ಜಿ ಆಹ್ವಾನಿಸಿದೆ. 5ನೇ ತರಗತಿಯಿಂದ 10ನೇ ತರಗತಿ ವರೆಗೆ ವ್ಯಾಸಂಗ ಮಾಡುತ್ತಿರುವ ವರ್ಗ 1, 2ಎ, 2ಬಿ, 3ಎ, 3ಬಿ, ಪ.ಜಾತಿ, ಪ.ವರ್ಗಗಳ ಅರ್ಹ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು. ಟಿ. ನರಸೀಪುರ ಪಟ್ಟಣ, ಮೂಗೂರು, ರಂಗಸಮುದ್ರ ಮತ್ತು ಬನ್ನೂರು ಗ್ರಾಮಗಳಲ್ಲಿನ ವಿದ್ಯಾರ್ಥಿನಿಲಯಗಳ ಮೇಲ್ವಿಚಾರಕರಿಂದ ಅರ್ಜಿ ಪಡೆದು ಜೂ. 10ರ ಸಂಜೆ 4ರೊಳಗೆ ಭರ್ತಿ ಮಾಡಿದ ಅರ್ಜಿಯನ್ನು ಮೇಲ್ವಿಚಾರಕರಿಗೆ ಸಲ್ಲಿಸಬೇಕು. ಪ್ರವೇಶ ಪಡೆದ ವಿದ್ಯಾರ್ಥಿಗಳಿಗೆ ಉಚಿತ ಊಟ, ವಸತಿ, ಸೋಪು, ಸಮವಸ್ತ್ರ, ನೋಟ್ ಪುಸ್ತಕ ನೀಡಲಾಗುವುದು. ಹೆಚ್ಚಿನ ಮಾಹಿತಿಗೆ ತಾಲೂಕು ಹಿಂದುಳಿದ ವರ್ಗಗಳ ವಿಸ್ತರಣಾಧಿಕಾರಿಗಳನ್ನು ಕಚೇರಿ ವೇಳೆ ಸಂಪರ್ಕಿಸಬಹುದು.
ತಿರುಪತಿಯಲ್ಲಿ ಅಪಘಾತ: ಸಾವಿನ ಸಂಖ್ಯೆ 3ಕ್ಕೆ ಏರಿಕೆ
ಮೈಸೂರು: ಆಂಧ್ರಪ್ರದೇಶ ತಿರುಪತಿ ಬಳಿ ಕೆಎಸ್ಆರ್ಟಿಸಿ ಬಸ್ಸು ಮತ್ತು ಲಾರಿ ಅಪಘಾತದಲ್ಲಿ ಮೃತಪಟ್ಟವರ ಸಂಖ್ಯೆ ಮೂರಕ್ಕೆ ಏರಿಕೆಯಾಗಿದೆ. ಮೈಸೂರಿನ ಪಡುವಾರಹಳ್ಳಿ ನಿವಾಸಿ ಗೋವಿಂದಸ್ವಾಮಿ ಎಂಬವರ ಪತ್ನಿ ರಾಜೇಶ್ವರಿ (32) ಮೃತಪಟ್ಟವರು. ಇವರು ಪತಿ ಮತ್ತು ಮಕ್ಕಳೊಂದಿಗೆ ತಿರುಪತಿಗೆ ಹೋಗಿದ್ದು, ಬಸ್ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿದ್ದರು. ಇದೇ ಅಪಘಾತದಲ್ಲಿ ಬಸ್ ಚಾಲಕ ಮತ್ತು ನಿರ್ವಾಹಕರಾದ ಕ್ಯಾತಮಾರನಹಳ್ಳಿ ನಿವಾಸಿ ನಾಗರಾಜ್ (52) ಮತ್ತು ಆಲನಹಳ್ಳಿ ನಿವಾಸಿ ನಾಗರಾಜು (50) ಸ್ಥಳದಲ್ಲೇ ಮೃತಪಟ್ಟಿದ್ದರು.
ಕಾರಿನ ಮೇಲೆ ಬಿದ್ದ ಮರ
ಮೈಸೂರು: ಮುಂಭಾಗದ ಚಕ್ರ ಸ್ಫೋಟಗೊಂಡು ಕಾರು ಮರಕ್ಕೆ ಡಿಕ್ಕಿಯಾಗಿ ಮಾಜಿ ಶಾಸಕ ಎಚ್.ಎಸ್. ಶಂಕರಲಿಂಗೇಗೌಡ ಅವರ ಅಳಿಯ ಡಾ. ಸುರೇಶ್ ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಹುಣಸೂರು ರಸ್ತೆಯಲ್ಲಿರುವ ಜಲದರ್ಶಿನಿ ಬಳಿ ಮಂಗಳವಾರ ಬೆಳಗ್ಗೆ ನಡೆದಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

