ಖಾಸಗಿ ಶಿಕ್ಷಣ ಸಂಸ್ಥೆಸುಲಿಗೆ ವಿರುದ್ಧ ಕ್ರಮಕ್ಕೆ ಆಗ್ರಹ
ಕೆ.ಆರ್. ನಗರ: ತಾಲೂಕಿನ ಕೆಲವು ಖಾಸಗಿ ಮತ್ತು ಅನುದಾನಿತ ಶಿಕ್ಷಣ ಸಂಸ್ಥೆಗಳಲ್ಲಿ ನಿಗದಿಗಿಂತ ಹೆಚ್ಚು ಶುಲ್ಕ ಪಡೆಯುತ್ತಿದ್ದು, ವಿದ್ಯಾರ್ಥಿಗಳಿಗೆ ಮತ್ತು ಪೋಷಕರಿಗೆ ತೊಂದರೆಯಾಗುತ್ತಿದ್ದು, ಈ ಬಗ್ಗೆ ಶಿಕ್ಷಣ ಇಲಾಖೆಯವರು ಯಾವುದೇ ಕ್ರಮ ಕೈಗೊಳ್ಳದೆ ನಿರ್ಲಕ್ಷ್ಯ ವಹಿಸುತ್ತಿದ್ದಾರೆ ಎಂದು ತಾ. ಛಲವಾದಿ ಮಹಾ ಸಭಾದ ಕಾರ್ಯದರ್ಶಿ ಹೊಸಕೋಟೆ ಚಲುವರಾಜ್ ಆರೋಪಿಸಿದ್ದಾರೆ. ಸರ್ಕಾರದ ಆದೇಶದಂತೆ ಪ್ರಕಟಣಾ ಫಲಕದಲ್ಲಿ ಶುಲ್ಕ ಪ್ರದರ್ಶಿಸಿ ವಿದ್ಯಾರ್ಥಿಗಳಿಂದ ಪಡೆದ ಹಣಕ್ಕೆ ಸಮರ್ಪಕವಾದ ರಸೀದಿ ನೀಡದೆ ವಂಚಿಸುತ್ತಿದ್ದು, ಶಿಕ್ಷಣ ಇಲಾಖೆಯ ನಿಯಮಗಳನ್ನು ಗಾಳಿಗೆ ತೂರುತ್ತಿದ್ದಾರೆ ಎಂದು ಹೇಳಿದ್ದಾರೆ. ಸಮಸ್ಯೆಯ ಬಗ್ಗೆ ಗೊತ್ತಿದ್ದರೂ ಇಲಾಖೆಯವರು ಮೌನ ವಹಿಸಿದ್ದು, ಕೂಡಲೇ ಇಲಾಖೆಯ ಮೇಲಧಿಕಾರಿಗಳು ತುರ್ತು ಕ್ರಮ ಕೈಗೊಂಡು ತಾಲೂಕಿನಲ್ಲಿ ಹೆಚ್ಚುವರಿಯಾಗಿ ಶುಲ್ಕ ಪಡೆಯುತ್ತಿರುವ ಶಿಕ್ಷಣ ಸಂಸ್ಥೆಗಳ ವಿರುದ್ಧ ಕಾನೂನು ಕ್ರಮ ಕೈಗೊಂಡು ವಿದ್ಯಾರ್ಥಿಗಳಿಗೆ ಅನುಕೂಲ ಕಲ್ಪಿಸಬೇಕು ಎಂದು ಒತ್ತಾಯಿಸಿದ್ದಾರೆ.
ತನ್ವೀರ್ ಸೇಠ್ಗೆ ಸಚಿವ ಸ್ಥಾನ ನೀಡಲು ಆಗ್ರಹ
ಕೆ.ಆರ್. ನಗರ: ಶಾಸಕ ತನ್ವೀರ್ ಸೇಠ್ ಅವರಿಗೆ ಸಿದ್ದರಾಮಯ್ಯ ಅವರ ಸಂಪುಟದಲ್ಲಿ ಸಚಿವ ಸ್ಥಾನ ನೀಡಬೇಕೆಂದು ಶಹೀದ್ ಟಿಪ್ಪು ಸುಲ್ತಾನ್ ಟ್ರಸ್ಟ್ನ ತಾಲೂಕು ಅಧ್ಯಕ್ಷ ಸೈಯದ್ ಜಾಬೀರ್ ಒತ್ತಾಯಿಸಿದ್ದಾರೆ. ಇವರು ನಾಲ್ಕು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದು, ಹಳೆ ಮೈಸೂರು ಭಾಗದಿಂದ ಚುನಾಯಿತರಾಗಿರುವ ಏಕೈಕ ಅಲ್ಪ ಸಂಖ್ಯಾತ ಶಾಸಕರಾಗಿದ್ದು, ಇವರಿಗೆ ಅವಕಾಶ ನೀಡಬೇಕು ಎಂದು ಕಾಂಗ್ರೆಸ್ ವರಿಷ್ಠರು ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯನವರಲ್ಲಿ ಮನವಿ ಮಾಡಿದ್ದಾರೆ.
ಶಾಸಕರಿಗೆ ಅನಾರೋಗ್ಯ
ಕೆ.ಆರ್. ನಗರ: ಶಾಸಕ ಸಾ.ರಾ. ಮಹೇಶ್ ಅನಾರೋಗ್ಯದ ನಿಮಿತ್ತ ವಿಶ್ರಾಂತಿಯಲ್ಲಿದ್ದು, 4 ದಿನಗಳ ಕಾಲ ಸಾರ್ವಜನಿಕರ ಭೇಟಿಗೆ ಲಭ್ಯವಿರುವುದಿಲ್ಲ. ಈ ಅನಾನುಕೂಲಕ್ಕೆ ಸಾರ್ವಜನಿಕರು ಸಹಕಾರ ನೀಡಬೇಕು ಎಂದು ಶಾಸಕರ ಆಪ್ತ ಸಹಾಯಕ ಹೇಳಿದ್ದಾರೆ. 4 ದಿನಗಳ ನಂತರ ಎಂದಿನಂತೆ ಸಾರ್ವಜನಿಕರನ್ನು ಭೇಟಿ ಮಾಡಲಿದ್ದು, ಕುಂದುಕೊರತೆ ಆಲಿಸಲಿದ್ದಾರೆ ಎಂದು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

