ಮೈಸೂರು

ನಾನಾ ತರಬೇತಿ, ಶಿಬಿರಕ್ಕೆ ಅಭ್ಯರ್ಥಿಗಳಿಂದ ಅರ್ಜಿ

Published On :

ಕ.ಪ್ರ.ವಾರ್ತೆ   ಮೈಸೂರು   ಮೇ 30
ಕರ್ನಾಟಕ ರಾಜ್ಯ ಸರ್ಕಾರಿ ನಿವೃತ್ತ ನೌಕರರ ಸಂಘದಿಂದ ಜೂ. 2ರ ಬೆಳಗ್ಗೆ 10 ರಿಂದ ಮಧ್ಯಾಹ್ನ 1 ರವರೆಗೆ ಧನ್ವಂತ್ರಿ ರಸ್ತೆಯಲ್ಲಿರುವ ನೌಕರರ ಭವನದಲ್ಲಿ ಆರೋಗ್ಯ ತಪಾಸಣಾ ಶಿಬಿರ ಏರ್ಪಡಿಸಲಾಗಿದ್ದು, ಮೊ. 9141119651 ಸಂಪರ್ಕಿಸಬಹುದು. ನ್ಯೂ ಸಯ್ಯಾಜಿರಾವ್ ರಸ್ತೆಯಲ್ಲಿರುವ ಗುರುರಾಘವೇಂದ್ರ ಕಂಪ್ಯೂಟರ್ ಟ್ರೈನಿಂಗ್ ಸೆಂಟರ್ನಲ್ಲಿ 101 ಸ್ವಯಂ ಉದ್ಯೋಗ ಮಾಹಿತಿ ಕಾರ್ಯಕ್ರಮ ಏರ್ಪಡಿಸಲಾಗಿದ್ದು, ಆಸಕ್ತರು ಜೂ. 2 ರೊಳಗೆ ಹೆಸರು ನೋಂದಾಯಿಸಬಹುದು. ಮೊ. 7760240575 ಸಂಪರ್ಕಿಸಬಹುದು. ಜೆ.ಪಿ. ನಗರ ಬ್ರಾಹ್ಮಣ ಸಂಘದಲ್ಲಿ ಜೂ. 2ರ ಬೆಳಗ್ಗೆ 6 ರಿಂದ 7 ರವರೆಗೆ ಯೋಗ, ಪ್ರಾಣಾಯಾಮ ಮತ್ತು ಧ್ಯಾನ ಶಿಬಿರ ಏರ್ಪಡಿಸಲಾಗಿದ್ದು, ಆಸಕ್ತರು ಮೊ. 9945259397 ಸಂಪರ್ಕಿಸಬಹುದು. ಚಾಮರಾಜ ಮೊಹಲ್ಲಾದಲ್ಲಿರುವ ನವೋದಯ ಫೌಂಡೇಷನ್ನಿಂದ ಮೈಸೂರು ವಿವಿಯ ಸ್ನಾತಕೋತ್ತರ ಎಂಎ, ಎಂಎಸ್ಸಿ, ಎಂಕಾಂ, ಪಿಜಿ ಸಿಇಟಿ, ಅರ್ಹತಾ ಪರೀಕ್ಷೆಗೆ ತರಬೇತಿ ನೀಡಲಿದ್ದು, ಆಸಕ್ತರು ಜೂ. 5 ರೊಳಗೆ ಹೆಸರು ನೋಂದಾಯಿಸಿಕೊಳ್ಳಬಹುದು. ಮೊ. 9741869722 ಸಂಪರ್ಕಿಸಬಹುದು.
ಜಗನ್ಮೋಹನ ಅರಮನೆ ಹತ್ತಿರವಿರುವ ನೇತಾಜಿ ಎಜುಕೇಷನ್ ಫೌಂಡೇಷನ್ನಲ್ಲಿ ಎಲ್ಐಸಿ ಸಹಾಯಕ ಮತ್ತು ರಾಷ್ಟ್ರೀಕೃತ ಬ್ಯಾಂಕುಗಳ ಹುದ್ದೆಗಳಿಗೆ ತರಬೇತಿ ನೀಡಲಿದ್ದು, ಆಸಕ್ತರು ಮೊ. 9980639953 ಸಂಪರ್ಕಿಸಬಹುದು. ಗುರು ಪುಟ್ಟರಾಜ ತಬಲ ವಿದ್ಯಾಲಯದ ವತಿಯಿಂದ ಸರಸ್ವತಿಪುರಂನಲ್ಲಿರುವ ರೋಟರಿ ಶಾಲೆಯಲ್ಲಿ ಪ್ರತಿ ಶನಿವಾರ ಸಂಜೆ 5 ರಿಂದ ರಾತ್ರಿ 8 ಹಾಗೂ ಭಾನುವಾರ ಬೆಳಗ್ಗೆ 9 ರಿಂದ ಮಧ್ಯಾಹ್ನ 12 ರವರೆಗೆ ತಬಲಾ ತರಗತಿ ನಡೆಸಲಿದ್ದು, ಮೊ. 9945047633 ಸಂಪರ್ಕಿಸಬಹುದು. ಚಾಮರಾಜ ಜೋಡಿ ರಸ್ತೆಯಲ್ಲಿರುವ ಕರ್ನಾಟಕ ಇನ್ಸ್ಟಿಟ್ಯೂಟ್ ಆಫ್ ಕೋ- ಆಪರೇಟಿವ್ ಮ್ಯಾನೇಜ್ಮೆಂಟ್ ವತಿಯಿಂದ ಸಹಕಾರ ಡಿಪ್ಲೊಮಾ ಕೋರ್ಸಿಗೆ ಅರ್ಜಿ ಆಹ್ವಾನಿಸಿದ್ದು, 34 ವಾರಗಳ ತರಬೇತಿ ನೀಡಲಾಗುತ್ತದೆ. ತರಬೇತಿಗೆ ಪ್ರವೇಶ ಪಡೆದವರಿಗೆ 200 ಮಾಸಿಕ ಶಿಷ್ಯವೇತನ, ಎಸ್ಸಿ, ಎಸ್ಟಿ ಅಭ್ಯರ್ಥಿಗಳಿಗೆ 300 ಶಿಷ್ಯವೇತನ ನೀಡಲಾಗುತ್ತದೆ. ಎಸ್ಸೆಸ್ಸೆಲ್ಸಿಯಲ್ಲಿ ಉತ್ತೀರ್ಣರಾದವರು ಜೂ. 3 ರೊಳಗೆ ಅರ್ಜಿ ಸಲ್ಲಿಸಬಹುದು. ಮೊ. 9449075746, ದೂ. 0821- 2520563 ಸಂಪರ್ಕಿಸಬಹುದು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.