ಮೈಸೂರು

ಯುವತಿಯರಿಗೆ ಹೊಲಿಗೆ ತರಬೇತಿ

Published On :

ನಂಜನಗೂಡು: ಲೋಕಶಿಕ್ಷಣ ನಿರ್ದೇಶನಾಲಯವು ತಾಲೂಕಿನ ಗ್ರಾಮೀಣ ಪ್ರದೇಶದಲ್ಲಿ ವಾಸಿಸುವ ಆರ್ಥಿಕವಾಗಿ ಹಿಂದುಳಿದ ಯುವತಿಯರಿಗೆ ಹೊಲಿಗೆ ತರಬೇತಿ ನೀಡುವ ಸಂಬಂಧ ಆಸಕ್ತರಿಂದ ಅರ್ಜಿ ಆಹ್ವಾನಿಸಿದೆ. ತರಬೇತಿಯು 5 ತಿಂಗಳ ಅವಧಿಯದ್ದಾಗಿದ್ದು, 18 ರಿಂದ 35 ವರ್ಷದೊಳಗಿನವರು ಅರ್ಜಿ ಸಲ್ಲಿಸಬಹುದು. ಕನಿಷ್ಠ 7ನೇ ತರಗತಿ ಓದಿರಬೇಕು. ಕುಟುಂಬದ ವಾರ್ಷಿಕ ವರಮಾನ 32 ಸಾವಿರ ಮೀರಿರಬಾರದು. ಒಟ್ಟು 40 ಮಂದಿಗೆ ಅವಕಾಶ ಕಲ್ಪಿಸಲಾಗಿದ್ದು, ಆಸಕ್ತರು ಜೂ. 11 ರೊಳಗೆ ಅರ್ಜಿ ಸಲ್ಲಿಸಬಹುದು. ಜೂ. 12ರ ಬೆಳಗ್ಗೆ 11ಕ್ಕೆ ನಂಜನಗೂಡು ಮಹಿಳಾ ವಿದ್ಯಾಪೀಠದಲ್ಲಿ ಸಂದರ್ಶನ ನಡೆಯಲಿದೆ. ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 500 ಶಿಷ್ಯ ವೇತನ ನೀಡಲಾಗುವುದು. ಅರ್ಹ ಅಭ್ಯರ್ಥಿಗಳು 10 ಸಲ್ಲಿಸಿ ಕಚೇರಿ ವೇಳೆಯಲ್ಲಿ ಅರ್ಜಿ ಪಡೆದು, ಭರ್ತಿಗೊಳಿಸಿ ಇತ್ತೀಚಿನ ಪಾಸ್ಪೋರ್ಟ್ ಅಳತೆಯ 2 ಭಾವಚಿತ್ರ, ಆದಾಯ, ಜಾತಿ ಪ್ರಮಾಣ ಪತ್ರ, ವಿದ್ಯಾರ್ಹತೆಯ ದೃಢೀಕರಣ ಪತ್ರದ ಒಂದು ಸೆಟ್ ಜೆರಾಕ್ಸ್ ಪ್ರತಿಯನ್ನು ಅರ್ಜಿಯೊಂದಿಗೆ ಸಲ್ಲಿಸಬಹುದು.
ಆಟಗಾರರ ಆಯ್ಕೆ
ಮೈಸೂರು: ಕೆಎಸ್ಸಿಎ ಮೈಸೂರು ವಲಯವು ವಿವಿಧ ವಯೋವಾನದ ಕ್ರಿಕೆಟ್ ಪಟುಗಳನ್ನು ಜೂ. 3ರಿಂದ 5 ರವರೆಗೆ ಆಯ್ಕೆ ಮಾಡುತ್ತಿದೆ. ಎಸ್ಜೆಸಿಇ ಮೈದಾನದಲ್ಲಿ 14, 16 ಮತ್ತು 19 ವರ್ಷದೊಳಗಿನ ಕ್ರಿಕೆಟ್ ಪಟುಗಳ ಆಯ್ಕೆ ಪ್ರಕ್ರಿಯೆ ನಡೆಯಲಿದೆ. ಆಯ್ಕೆಯಾದವರ ಹೆಸರನ್ನು ಗಂಗೋತ್ರಿ ಪೆವಿಲಿಯನ್ ಮೈದಾನದ ಕೆಎಸ್ಸಿಎ ಕಚೇರಿಯಲ್ಲಿ ಪ್ರಕಟಿಸಲಾಗುತ್ತದೆ. ಹೆಚ್ಚಿನ ಮಾಹಿತಿಗೆ ವಿನಯ್ ಮೊ. 9880230855 ಸಂಪರ್ಕಿಸಬಹುದು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.