ಸಹಾಯ ಸಂಘಗಳ ಒಕ್ಕೂಟ ಉದ್ಘಾಟನೆ
ಕ.ಪ್ರ.ವಾರ್ತೆ ಟಿ.ನರಸೀಪುರ ಮೇ 30
ಸಹಕಾರ ಹಾಗೂ ಸ್ವ ಸಹಾಯ ತತ್ವದಡಿ ಆರಂಭವಾದ ಮಹಿಳಾ ಸಂಘಟನೆಯ ಕಾರ್ಯಚಟುವಟಿಕೆಗಳು ಪ್ರಸ್ತುತ ದಿನಗಳಲ್ಲಿ ಆರ್ಥಿಕವಾಗಿ ಬಲಿಷ್ಠಗೊಳ್ಳುತ್ತಿವೆ ಎಂದು ತಾಲೂಕು ಪಂಚಾಯಿತಿ ಅಧ್ಯಕ್ಷ ತುಂಬಲ ಅಂದಾನಿ ಹೇಳಿದರು.
ತಾಲೂಕಿನ ಕುಪ್ಯ ಗ್ರಾಮದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಪ್ರಗತಿಬಂಧು ಸ್ವ ಸಹಾಯ ಸಂಘಗಳ ಒಕ್ಕೂಟವನ್ನು ಉದ್ಘಾಟಿಸಿ ಮಾತನಾಡಿ, ಮನೆಯಲ್ಲಿ ಕುಟುಂಬ ನಿರ್ವಹಣೆಯ ನಡುವೆಯೂ ಬಿಡುವು ಮಾಡಿಕೊಂಡು ಅಲ್ಪ ಸಮಯವನ್ನು ಸ್ವ ಸಹಾಯ ಸಂಘಟನೆಗಾಗಿ ಮೀಸಲಿಡುತ್ತಿರುವ ಮಹಿಳೆಯರು ವಿವಿಧ ಹಂತಗಳಲ್ಲಿ ಆರ್ಥಿಕ ಪ್ರಗತಿ ಸಾಧಿಸುತ್ತಿದ್ದಾರೆ ಎಂದರು.
ಎಸ್.ಎಂ. ಕೃಷ್ಣ ಅವರ ಸರ್ಕಾರದ ಸಚಿವ ಸಂಪುಟದಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವರಾಗಿದ್ದ ಮೋಟಮ್ಮ ಅವರು ಬಡ ಕುಟುಂಬಗಳ ಆರ್ಥಿಕ ಸಬಲತೆ ಚಿಂತನೆಯನ್ನಿಟ್ಟುಕೊಂಡು ಮಹಿಳಾ ಸಂಘಟನೆಗಳನ್ನು ಆರಂಭಿಸಿದರು ಎಂದು ತಿಳಿಸಿದರು.
ಅಧ್ಯಕ್ಷರಾಗಿ ಶಾರದ, ಉಪಾಧ್ಯಕ್ಷರಾಗಿ ನಾಗಮ್ಮ, ಕಾರ್ಯದರ್ಶಿಯಾಗಿ ರಾಧ, ಸಹ ಕಾರ್ಯದರ್ಶಿಯಾಗಿ ರಾಣಿ, ಕೋಶಾಧಿಕಾರಿಯಾಗಿ ಶೃತಿ ಅವರನ್ನು ನೇಮಕ ಮಾಡಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಾಡಿಕೆಯಂತೆ ನೂತನ ಪದಾಧಿಕಾರಿಗಳಿಗೆ ಫಲ ತಾಂಬೂಲ ನೀಡಿ ಒಕ್ಕೂಟದ ಕಾರ್ಯಚಟುವಟಿಕೆಗಳಿಗೆ ವಿದ್ಯುಕ್ತವಾಗಿ ಚಾಲನೆ ನೀಡಲಾಯಿತು. ಯೋಜನೆ ತಾಲೂಕು ಸಂಯೋಜಕ ಮೋಹನ್ ಮಾತನಾಡಿದರು.
ಗ್ರಾಪಂ ಅಧ್ಯಕ್ಷೆ ಕುಪ್ಯ ಭಾಗ್ಯಮ್ಮ ಅಧ್ಯಕ್ಷತೆ ವಹಿಸಿದ್ದರು. ಸದಸ್ಯೆ ನಾಗಮ್ಮ, ಸರ್ಕಾರಿ ಶಾಲೆಯ ಮುಖ್ಯ ಶಿಕ್ಷಕ ಪುಟ್ಟಸ್ವಾಮಿ, ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಚಂದ್ರಶೇಖರ್, ಬನ್ನೂರು ಪೊಲೀಸ್ ಠಾಣೆಯ ಪಿಎಸ್ಐ ಎಸ್.ಡಿ. ಸುರೇಶ್ಕುಮಾರ್, ಗ್ರಾಮಾಭಿವೃದ್ಧಿ ಯೋಜನೆಯ ಮೇಲ್ವಿಚಾರಕರಾದ ರಾಮಚಂದ್ರ, ಯೋಗೇಶ್, ಕೇಶವ, ಸೇವಾ ಪ್ರತಿನಿಧಿ ಪದ್ಮಾವತಿ, ಕನ್ನಡಸೇನೆ ಕಾರ್ಯಾಧ್ಯಕ್ಷ ರಾಜು, ಛಲವಾಧಿ ಮಹಾಸಭಾದ ಅಧ್ಯಕ್ಷ ಚನ್ನರಾಜು, ನೀರು ಬಳಕೆದಾರರ ಸಂಘದ ಅಧ್ಯಕ್ಷ ಮಹದೇವ, ಮುಖಂಡ ಚಿನ್ನಸ್ವಾಮಿ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

