ವಿದೇಶಿ ಹೂಡಿಕೆಗೆ ಸಾಥ್
ಕ.ಪ್ರ.ವಾರ್ತೆ ಮೈಸೂರು ಮೇ 30
ಇಲ್ಲಿನ ವಾಣಿಜ್ಯ ವ್ಯವಹಾರಗಳಿಗೆ ಸಂಬಂಧಿಸಿದಂತೆ ಹೂಡಿಕೆ ಮಾಡಲು ಬರುವ ವಿದೇಶಿ ಬಂಡವಾಳಗಾರರಿಗೆ ಅಗತ್ಯ ಸಹಕಾರ ನೀಡುವುದಾಗಿ ಮೈಸೂರು ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆ ಅಧ್ಯಕ್ಷ ಸುಧಾಕರ್ ಎಸ್. ಶೆಟ್ಟಿ ಹೇಳಿದರು.
ಮೈಸೂರು ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಗೆ ಆಸ್ಟ್ರೇಲಿಯನ್ ವಾಣಿಜ್ಯ ಆಯೋಗದ ಕರ್ನಾಟಕ ಮುಖ್ಯಸ್ಥರು ಗುರುವಾರ ಭೇಟಿ ನೀಡಿದ್ದ ಹಿನ್ನೆಲೆಯಲ್ಲಿ ಏರ್ಪಡಿಸಿದ್ದ ಸಮಾಲೋಚನಾ ಸಭೆಯಲ್ಲಿ ಅವರು ಮಾತನಾಡಿದರು.
ಕೇಂದ್ರ ಸರ್ಕಾರ ವಿದೇಶಿ ಬಂಡವಾಳಗಾರರನ್ನು ಸೆಳೆಯುವ ಸಲುವಾಗಿ ಅನೇಕ ಯೋಜನೆ ಹಮ್ಮಿಕೊಂಡಿದೆ. ಅಂತೆಯೇ ವಿದೇಶಿ ಬಂಡವಾಳ ಹೂಡಿಕೆದಾರರ ಸಮಾವೇಶ ನಡೆಸಲಾಯಿತು.
ಅದರಲ್ಲಿ ಭಾಗವಹಿಸಿ ಒಪ್ಪಂದ ಮಾಡಿಕೊಂಡಿರುವ ಉದ್ಯಮಿಗಳು ಮೈಸೂರಿಗೆ ಆಗಮಿಸಿ ಸಹಭಾಗಿತ್ವದಲ್ಲಿ ಉದ್ಯಮ ಸ್ಥಾಪಿಸಲು ಮುಂದಾದರೆ ಅಗತ್ಯ ನಿವೇಶನ, ವಿದ್ಯುತ್, ನೀರು ಮುಂತಾದ ಸೌಲಭ್ಯ ಒದಗಿಸಲು ಸಹಕಾರ ನೀಡುವುದಾಗಿ ತಿಳಿಸಿದರು.
ಆಸ್ಟ್ರೇಲಿಯನ್ ವಾಣಿಜ್ಯ ಆಯೋಗದ ಕರ್ನಾಟಕ ವಿಭಾಗದ ಮುಖ್ಯಸ್ಥೆ ರೂಪಾ, ಕೈಗಾರಿಕಾ ಉದ್ಯಮದಲ್ಲಿ ಅಂತಾರಾಷ್ಟ್ರೀಯ ಸಹಭಾಗಿತ್ವ, ಉದ್ಯಮದ ಅಭಿವೃದ್ಧಿಗೆ ಲಭ್ಯವಿರುವ ಅವಕಾಶ, ಆಕಾಶಯಾನ, ಆರೋಗ್ಯ ರಕ್ಷಣೆ, ಜೈವಿಕ ತಂತ್ರಜ್ಞಾನ, ಮಾಹಿತಿ ತಂತ್ರಜ್ಞಾನ ಹಾಗೂ ಶಿಕ್ಷಣ ಈ ಮುಂತಾದ ಕ್ಷೇತ್ರದಲ್ಲಿ ಇರುವ ಅವಕಾಶ ಹಾಗೂ ವ್ಯವಹಾರಗಳ ಕುರಿತು ಉದ್ಯಮಿಗಳೊಂದಿಗೆ ಸಮಾಲೋಚನೆ ನಡೆಸಿದರು.
ಸಂಸ್ಥೆ ಉಪಾಧ್ಯಕ್ಷ ಎ.ಎಸ್. ಸತೀಶ್, ಕಾರ್ಯದರ್ಶಿ ಎಂ.ಸಿ. ಬನ್ಸಾಲಿ ಹಾಗೂ ಮೈಸೂರು ರಫ್ತು ಕೇಂದ್ರದ ಸಲಹಾ ಮಂಡಳಿ ಅಧ್ಯಕ್ಷ ಆರ್. ಕೃಷ್ಣ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

