ಮೈಸೂರು

ಏಕೀಕರಣಕ್ಕೆ ಶ್ರಮಿಸಿದವರ ಸ್ಮರಿಸುವ ಕೆಲಸವಾಗಲಿ

Published On :

ಪಿರಿಯಾಪಟ್ಟಣ: ನಾಡು ನುಡಿಯ ಸಂರಕ್ಷಣೆಗಾಗಿ ಮತ್ತು ಕರ್ನಾಟಕದ ಏಕೀಕರಣಕ್ಕಾಗಿ ದುಡಿದ ಮಹನೀಯರನ್ನು ಸ್ಮರಿಸುವ ಹಾಗೂ ಅವರ ಆದರ್ಶ ತತ್ವಗಳನ್ನು ಪಾಲಿಸುವ ಕೆಲಸವಾಗಬೇಕು ಎಂದು ಉತ್ತರ ಕನ್ನಡ ಜಿಲ್ಲೆಯ ಕರ್ನಾಟಕ ವಿದ್ಯುತ್ ನಿಗಮ ಮಂಡಳಿಯ ಮುಖ್ಯ ಎಂಜಿನಿಯರ್ ಶಂಕರ್ ದೇವನೂರು ಹೇಳಿದರು.
ಪಟ್ಟಣದ ಸರ್ಕಾರಿ ಬಾಲಕರ ಪದವಿ ಪೂರ್ವ ಕಾಲೇಜು ಮೈದಾನದಲ್ಲಿ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಶುಕ್ರವಾರ ಏರ್ಪಡಿಸಿದ್ದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಮುಖ್ಯ ಭಾಷಣಕಾರರಾಗಿ ಮಾತನಾಡಿದ ಅವರು, ಪ್ರತಿಯೊಬ್ಬರೂ ಏತಕ್ಕಾಗಿ, ಯಾರಿಗಾಗಿ ಯಾವ ಸೇವೆಯನ್ನು ಮಾಡಿದ್ದೇವೆ ಎಂಬ ಬಗ್ಗೆ ಯೋಚಿಸಬೇಕು. ಕನ್ನಡ ನಾಡು ನುಡಿ ರಕ್ಷಣೆಯ ಜವಾಬ್ದಾರಿ ಪ್ರತಿಯೊಬ್ಬರದು. ಕನ್ನಡ ಮಾತನಾಡುವ ಎಲ್ಲರಿಗೂ ಕನ್ನಡದ ಬಗ್ಗೆ ಅಭಿಮಾನವಿರಬೇಕು. ಮಕ್ಕಳಿಗೆ ಕನ್ನಡ ಕಲಿಸದ ಪೋಷಕರು ಅಪರಾಧಿಗಳಿದ್ದಂತೆ. ಕನ್ನಡವನ್ನು ಮೊದಲು ಮಕ್ಕಳಿಗೆ ಕಲಿಸಬೇಕು. ಈ ನಿಟ್ಟಿನಲ್ಲಿ ಪ್ರತಿಯೊಬ್ಬ ಪೋಷಕರೂ ಕಾರ್ಯೋನ್ಮುಖರಾಗಬೇಕು ಎಂದು ತಿಳಿಸಿದರು.
ಇದೇ ವೇಳೆ ಎಸ್ಸೆಸ್ಸೆಲ್ಸಿ ಹಾಗೂ ಪಿಯುಸಿಯಲ್ಲಿ ಕನ್ನಡ ಭಾಷೆಯಲ್ಲಿ ಅತಿ ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳನ್ನು ಹಾಗೂ ತಾಲೂಕಿನ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಗಣ್ಯರನ್ನು ಸನ್ಮಾನಿಸಲಾಯಿತು. ರಾವಂದೂರು ಸರ್ಕಾರಿ ಶಾಲೆಯ ಸಂಗೀತ ಶಿಕ್ಷಕ ಮೋಹನ್ ಮೇರ್ವಾಡೀಸ್ ಅವರ ಶಿಕ್ಷಕ ವೃಂದ ಗೀತಗಾಯನ ನಡೆಸಿಕೊಟ್ಟರು. ವಿವಿಧ ಶಾಲಾ ಕಾಲೇಜುಗಳ ವಿದ್ಯಾರ್ಥಿಗಳು ಕಾರ್ಯಕ್ರಮ ನಡೆಸಿಕೊಟ್ಟರು.
ಅದ್ಧೂರಿ ಮೆರವಣಿಗೆ: ಕಾರ್ಯಕ್ರಮಕ್ಕೂ ಮುನ್ನ ಪಟ್ಟಣದ ತಾಲೂಕು ಆಡಳಿತ ಭವನದ ಮುಂಭಾಗದಿಂದ ವಿವಿಧ ಬಗೆಯ 11 ಸ್ತಬ್ಧಚಿತ್ರಗಳು, ಜಾನಪದ ನೃತ್ಯ ತಂಡಗಳ, ಶಾಲಾ ಮಕ್ಕಳ ಬ್ಯಾಂಡ್ಗಳೊಂದಿಗೆ ಸರ್ಕಾರಿ ಬಾಲಕರ ಪದವಿ ಪೂರ್ವ ಕಾಲೇಜು ಮೈದಾನದವರೆಗೆ ಮೆರವಣಿಗೆ ನಡೆಯಿತು.
ತಾಪಂ ಉಪಾಧ್ಯಕ್ಷ ಪ್ರಕಾಶ್ ಅಧ್ಯಕ್ಷತೆ ವಹಿಸಿದ್ದರು. ಅತ್ತರ್ಮತಿನ್, ಲಕ್ಷ್ಮಣೇಗೌಡ, ಎಂ.ಕೆ. ಪ್ರಕಾಶ್, ಗೋರಳ್ಳಿ ಜಗದೀಶ್, ಇಒ ಮಹದೇವಸ್ವಾಮಿ, ಬಿಒ ರಾಮಲಿಂಗು, ತಾಪಂ ಸದಸ್ಯರಾದ ಬಿ.ವಿ. ಅನಿತಾ, ರಘುನಾಥ್ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.