ಕಂಪ್ಲಾಪುರದಲ್ಲಿ ರಾಜ್ಯೋತ್ಸವ
ಪಿರಿಯಾಪಟ್ಟಣ: ಕನ್ನಡ ನಾಡು ಕಲೆ, ಸಾಹಿತ್ಯ, ಶಿಲ್ಪಕಲೆ ಹಾಗೂ ಪ್ರವಾಸಿ ತಾಣಗಳ ತವರೂರಾಗಿದ್ದು, ಅದನ್ನು ಉಳಿಸಿ ಬೆಳೆಸುವುದು ನಮ್ಮೆಲ್ಲರ ಕರ್ತವ್ಯ ಎಂದು ಪ್ರೌಢಶಾಲಾ ಪ್ರಭಾರ ಮುಖ್ಯ ಶಿಕ್ಷಕ ಶಿವರಾಜ್ ಹೇಳಿದರು. ತಾಲೂಕಿನ ಕಂಪಲಾಪುರ ಗ್ರಾಮದ ಏರ್ಪಡಿಸಿದ್ದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಭಾಷಾವಾರು ಪ್ರಾಂತ್ಯಗಳಿಂದ ಹರಿದು ಹಂಚಿ ಹೋಗಿದ್ದ ರಾಜ್ಯಗಳು ಒಂದುಗೂಡಿ ಮೈಸೂರು ರಾಜ್ಯವಾಗಿ ನಂತರದ ವರ್ಷಗಳಲ್ಲಿ ರಾಜ್ಯದ ಮುಖ್ಯಮಂತ್ರಿಗಳಾಗಿದ್ದ ದೇವರಾಜ ಅರಸು ಅವರು ರಾಜ್ಯಕ್ಕೆ ಕರ್ನಾಟಕ ಎಂದು ನಾಮಕರಣ ಮಾಡಿದರು. ರಾಜ್ಯದ ಏಕೀಕರಣಕ್ಕಾಗಿ ದುಡಿದವರ ಬಗ್ಗೆ ಹಾಗೂ ನಾಡು ನುಡಿಯ ಬಗ್ಗೆ ಅಭಿಮಾನ ಇಟ್ಟುಕೊಳ್ಳಬೇಕು ಎಂದು ತಿಳಿಸಿದರು. ಎಸ್ಡಿಎಂಸಿ ಅಧ್ಯಕ್ಷ ಕೆ.ಎಂ. ಲಕ್ಷ್ಮಣ್, ಉಪಾಧ್ಯಕ್ಷೆ ಸವಿತಾ, ಕಸಾಪ ತಾಲೂಕು ಕಾರ್ಯದರ್ಶಿ ಗೋಪಾಲ್, ಮುಖಂಡರಾದ ಐ.ಎಸ್. ಸುಬ್ರಹ್ಮಣ್ಯ, ಕುಮಾರ, ಸಂಗೀತ ಶಿಕ್ಷಕ ಯಶ್ವಂತ್, ಜಗದೀಶ್, ಪೂರ್ಣಿಮಾ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

