ಮೈಸೂರು

ಹೆಸರಿಗಷ್ಟೆ ಕನ್ನಡಕ್ಕೆ ಶಾಸ್ತ್ರೀಯ ಸ್ಥಾನ

Published On :

ಸಾಲಿಗ್ರಾಮ: ಕನ್ನಡ ಭಾಷೆಗೆ ಹೆಸರಿಗೆ ಮಾತ್ರ ಶಾಸ್ತ್ರೀಯ ಸ್ಥಾನಮಾನ ಸಿಕ್ಕಿರುವುದು ಸರಿಯಲ್ಲ ಎಂದು ಪ್ರಾಂಶುಪಾಲ ಗಂಗಾಧರ್ ಅಭಿಪ್ರಾಯ ಪಟ್ಟರು. ಸಾಲಿಗ್ರಾಮದ ಮಹಿಳಾ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಶುಕ್ರವಾರ ಏರ್ಪಡಿಸಿದ್ದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.
ಕನ್ನಡ ಭಾಷೆಗೆ ಈ ವರೆಗೆ ಸ್ಥಾನ ಮಾತ್ರ ಸಿಕ್ಕಿದ್ದು ಮಾನ ಸಿಕ್ಕಿಲ್ಲ ಎಂದು ವಿಷಾದ ವ್ಯಕ್ತಪಡಿಸಿದ ಅವರು ಶಾಸ್ತ್ರೀಯ ಭಾಷಾ ಸ್ಥಾನಮಾನಕ್ಕಾಗಿ ಬಿಡುಗಡೆಯಾಗಿದ್ದ ಅನುದಾನವು ಸಕಾಲಕ್ಕೆ ಸರಿಯಾದ ಮಾಹಿತಿ ನೀಡದ ಕಾರಣ ಹಿಂದಕ್ಕೆ ಹೋಗಿದೆ. ಪ್ರತಿಯೊಬ್ಬರೂ ತಮ್ಮಲ್ಲಿನ ಕೀಳರಿಮೆ ಬಿಟ್ಟು ಮಾತೃ ಭಾಷೆಯ ಬಗ್ಗೆ ಅಭಿಮಾನ ಬೆಳೆಸಿಕೊಳ್ಳಬೇಕು. ಕನ್ನಡವನ್ನು ಪ್ರಥಮ ಭಾಷೆಯಾಗಿ ಪರಿಗಣಿಸಿ ಕಲಿಯಬೇಕು ಜೊತೆಗೆ ಎಲ್ಲರಿಗೂ ಕನ್ನಡವನ್ನು ಕಲಿಸಬೇಕು ಎಂದರು. ಒಂದು ನಾಡಿನ ಸರ್ವಾಂಗೀಣ ಬೆಳವಣಿಗೆಗೆ ಆ ಭಾಗದ ಭಾಷೆ ಪ್ರಮುಖ ಪಾತ್ರ ವಹಿಸುತ್ತದೆ. ಇಂತಹ ಸಂದರ್ಭದಲ್ಲಿ ನಾವು ಕನ್ನಡ ಭಾಷೆಯ ಬಗ್ಗೆ ನಮ್ಮದು ಎಂಬ ಸ್ವಾರ್ಥದೊಂದಿಗೆ ಭಾಷೆಯನ್ನು ರೂಢಿಸಿಕೊಳ್ಳಬೇಕು ಎಂದ ವಿದ್ಯಾರ್ಥಿಗಳಿಗೆ ಕರೆ ನೀಡಿದರು.
ಕಾರ್ಯಕ್ರಮದಲ್ಲಿ ಡಾ. ರಾಜ್ಕುಮಾರ್ ವೇದಿಕೆ ಸಂಚಾಲಕ ಎಸ್.ಬಿ. ಗುಣಚಂದ್ರ ಕುಮಾರ್, ಉಪನ್ಯಾಸಕರಾದ ಡಿ. ಹರೀಶ್, ಎ.ಜಿ. ಕುಮಾರ್, ವಿಜಯ್ಕುಮಾರ್, ಲಕ್ಷ್ಮಣ, ಮುರುಳಿ, ವೆಂಕಟರಾಮು, ವೈ. ಜಯಂತಿ, ನಾಗರತ್ನಮ್ಮ ಮತ್ತು ವಿದ್ಯಾರ್ಥಿಗಳು ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.