ಮೈಸೂರು

ಕನ್ನಡ ಬೆಳೆಸುವ ಪ್ರಾಮಾಣಿಕ ಕೆಲಸವಾಗಲಿ

Published On :

ಕ.ಪ್ರ.ವಾರ್ತೆ  ಟಿ. ನರಸೀಪುರ  ನ. 3
ದೇಶದಲ್ಲಿ ಹೆಚ್ಚು ಜ್ಞಾನಪೀಠ ಪ್ರಶಸ್ತಿಗಳನ್ನು ಪಡೆದ ಹಿರಿಮೆ ಕನ್ನಡ ನಾಡಿಗೆ ಸಲ್ಲುವ ಹಿನ್ನೆಲೆ, ಕನ್ನಡ ಭಾಷೆಯನ್ನು ಬೆಳೆಸುವ ಪ್ರಾಮಾಣಿಕ ಕೆಲಸವಾಗಬೇಕು ಎಂದು ವಿಧಾನ ಪರಿಷತ್ ಸದಸ್ಯ ಆರ್. ಧರ್ಮಸೇನ ಹೇಳಿದರು.
ತಾಪಂ ಆವರಣದಲ್ಲಿ ಶುಕ್ರವಾರ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಹಾಗೂ ಕನ್ನಡ ಸಾಹಿತ್ಯ ಪರಿಷತ್‌ನಿಂದ ಸಂಯುಕ್ತವಾಗಿ ಹಮ್ಮಿಕೊಂಡಿದ್ದ 58ನೇ ವರ್ಷದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ರಾಜ್ಯದ ಪ್ರತಿ 150 ಕಿ.ಮೀ ಅಂತರದಲ್ಲಿ ಭಾಷೆಯ ಶೈಲಿ, ಆಹಾರ ಪದ್ಧತಿ, ಸಂಸ್ಕೃತಿ ಸೇರಿದಂತೆ ವಿವಿಧ ರೀತಿಯ ವೈಶಿಷ್ಟ ಹೊಂದಿರುವ ಈ ನಾಡು ಬಹಳ ವಿಶೇಷವಾಗಿದೆ. ಸಮೃದ್ಧ ಕರ್ನಾಟಕ ನಿರ್ಮಾಣ ಹಾಗೂ ನಾಡು, ನುಡಿ ಸಂರಕ್ಷಣೆಗಾಗಿ ಯುವಪೀಳಿಗೆ ಸನ್ನದ್ಧರಾಗಬೇಕು ಎಂದು ಅಭಿಪ್ರಾಯಪಟ್ಟರು.
ಪ್ರಗತಿಪರ ರೈತ ಬನ್ನೂರು ಕೃಷ್ಣಪ್ಪ, ಯುವ ಸಾಹಿತಿ ಬೈರಾಪುರ ಎಂ.ಜವರಾಜು, ಪತ್ರಕರ್ತ ಅಕ್ರಂಪಾಷ, ರಂಗಭೂಮಿ ಕಲಾವಿದ ಚೌಡಶೆಟ್ಟಿ ಹಾಗೂ ಶಿಕ್ಷಣ ಇಲಾಖೆಯಲ್ಲಿ ಸೇವೆ ಸಲ್ಲಿಸಿರುವ ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ ಸಂಪತ್ ದೊರೈರಾಜ್ ಅವರನ್ನು ಸನ್ಮಾನಿಸಲಾಯಿತು.
ಕನ್ನಡದಲ್ಲಿ ಅತಿ ಹೆಚ್ಚು ಅಂಕಗಳನ್ನು ಪಡೆದ ವಿದ್ಯಾರ್ಥಿಗಳಾದ ವಿಶ್ವಾಸ್, ಅರುಣ್, ಸಿದ್ದರಾಜಮ್ಮ, ರಘು ಮತ್ತು ಪ್ರದೀಪ್ ಅವರನ್ನು ಕೂಡ ಅಭಿನಂದಿಸಲಾಯಿತು. ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನೀಡಿದ ಪಟ್ಟಣದ ವಿವಿಧ ಶಾಲಾ ವಿದ್ಯಾರ್ಥಿಗಳಿಗೂ ಪ್ರಶಸ್ತಿ ಪತ್ರ ವಿತರಿಸಲಾಯಿತು. ತಹಸೀಲ್ದಾರ್ ಎಚ್.ಎಸ್. ಅರುಣಪ್ರಭಾ ಧ್ವಜಾರೋಹಣ ನೆರವೇರಿಸಿದರು. ಎಪಿಎಂಸಿ ಅಧ್ಯಕ್ಷ ಎಂ.ರಾಜು, ತಾಪಂ ಮಾಜಿ ಅಧ್ಯಕ್ಷ ತುಂಬಲ ಅಂದಾನಿ, ಕಾರ್ಯನಿರ್ವಾಹಕ ಅಧಿಕಾರಿ ಜೈಕೃಷ್ಣ, ಕಸಾಪ ಅಧ್ಯಕ್ಷ ಮು.ರು. ನಾಗೇದ್ರಕುಮಾರ್, ಬಿಇಒ ಮರಿಸ್ವಾಮಿ, ತಾಪಂ ಸದಸ್ಯರಾದ ಬಸವರಾಜು, ಗುರುಮೂರ್ತಿ, ಪಿ.ಗಿರೀಶ್, ಶಿವಮ್ಮಮಹದೇವ, ಜಯಲಕ್ಷ್ಮೀಕುಮಾರ್, ರೂಪಶ್ರೀ ಪರಮೇಶ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.