ಮೈಸೂರು

ಮಹದೇಶ್ವರ ಜಾತ್ರೆಗೆ ಚಾಲನೆ

Published On :

ಕ.ಪ್ರ.ವಾರ್ತೆ  ಪಿರಿಯಾಪಟ್ಟಣ  ನ. 3
ಪಟ್ಟಣಕ್ಕೆ ಸಮೀಪವಿರುವ ಮಹದೇಶ್ವರ ಸ್ವಾಮಿಯ ನಾಲ್ಕು ದಿನಗಳ ಜಾತ್ರಾ ಮಹೋತ್ಸಕ್ಕೆ ಭಾನುವಾರ ಚಾಲನೆ ನೀಡಲಾಯಿತು.
ಶನಿವಾರ ರಾತ್ರಿ ಸ್ವಾಮಿಯ ಮಠದಿಂದ ಉದ್ಭವ ಸ್ಥಾನಕ್ಕೆ ಮೆರವಣಿಗೆ ಮೂಲಕ ತರಲಾಯಿತು. ಭಾನುವಾರ ಸಂಪ್ರದಾಯದಂತೆ ಹೆಣ್ಣು ಮಕ್ಕಳಿಂದ ಹಾಲರವಿ ಸೇವೆಯ ಮೂಲಕ ದೇವರಿಗೆ ಸಂಬಂಧಿಸಿದ ಛತ್ರಿ, ಚಾಮರಕ್ಕೆ ಪೂಜೆ ಸಲ್ಲಿಸಿ ಮಂಗಳವಾದ್ಯ ಹಾಗೂ ನಂದಿ ಧ್ವಜದೊಂದಿಗೆ ದೇವಸ್ಥಾನದವರೆಗೆ ಮೆರವಣಿಗೆ ನಡೆಸಲಾಯಿತು.  ನ.4ರಂದು ದೇವಸ್ಥಾನದ ಆವರಣದಲ್ಲಿ ರಥೋತ್ಸವ ನಡೆಯಲಿದ್ದು, ಅಂದು ರಾತ್ರಿ ಅಗ್ನಿಕೊಂಡ ಜರುಗಲಿದೆ. ನ.5ರಂದು ಹಗಲು ಪಂಜಿನ ಸೇವೆ ಹಾಗೂ ರಾತ್ರಿ ಪಟ್ಟಣದ ಪ್ರಮುಖ ಬೀದಿಗಳಲ್ಲಿ ವಿವಿಧ ಜಾನಪದ ಕಲಾತಂಡಗಳೊಂದಿಗೆ ದೇವರ ಮೆರವಣಿಗೆ ನಡೆಯಲಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.