ಪತ್ರಕರ್ತರ ಸಂಪರ್ಕ, ಸಂಬಂಧ ದುರುಪಯೋಗ ಬೇಡ: ಶಾಸಕ
ಕ.ಪ್ರ.ವಾರ್ತೆ ಹುಣಸೂರು ಅ. 1
ಪತ್ರಕರ್ತರು ಸಮಾಜದ ಎಲ್ಲರೊಂದಿಗೂ ಸಂಪರ್ಕ, ಸಂಬಂಧ ಬೆಳೆಸಿಕೊಳ್ಳುವುರಲ್ಲಿ ತಪ್ಪಿಲ್ಲ. ಆದರೆ ಈ ಎಲ್ಲ ಸಂಬಂಧಗಳನ್ನು ಮಾರಾಟ ಮಾಡಿಕೊಳ್ಳುವ ಸ್ಥಿತಿಗೆ ತಲುಪದಿರಲಿ ಎಂದು ಶಾಸಕ ಎಚ್.ಪಿ. ಮಂಜುನಾಥ್ ಅಭಿಪ್ರಾಯಪಟ್ಟರು.
ರೋಟರಿ ಭವನದಲ್ಲಿ ಪತ್ರಿಕಾ ದಿನಾಚರಣೆಯ ಅಂಗವಾಗಿ ತಾಲೂಕು ಪತ್ರಕರ್ತರ ಸಂಘ ಆಯೋಜಿಸಿದ್ದ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಸಂವಿಧಾನದ ಮೂರು ಅಂಗಗಳನ್ನು ತಿದ್ದುವ ಪತ್ರಿಕಾಂಗದಲ್ಲಿ ಸಂಪಾದಕೀಯ ಬರಹಗಳು ಇತ್ತೀಚೆಗೆ ಮೌಲ್ಯ ಕಳೆದುಕೊಳ್ಳುತ್ತಿವೆ ಎಂದು ವಿಷಾದ ವ್ಯಕ್ತಪಡಿಸಿದರು.
ಜಿಲ್ಲಾ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಕೆ. ದೀಪಕ್ ಮಾತನಾಡಿ, ಪತ್ರಕರ್ತರು ಸಮಾಜದೊಂದಿಗೆ ಅವಿನಾಭಾವ ಸಂಬಂಧ ಹೊಂದಿದ್ದಲ್ಲಿ ಜ್ವಲಂತವಾಗಿರುವ ಸಾಮಾಜಿಕ ಸಮಸ್ಯೆಗಳನ್ನು ಅರಿಯಲು ಸಾಧ್ಯ ಎಂದು ಹೇಳಿದರು.
ಪ್ರಶಸ್ತಿ ಪ್ರದಾನ ಮಾಡಿದ ನಾಗರಹೊಳೆ ರಾಷ್ಟ್ರೀಯ ಉದ್ಯಾನದ ಹುಲಿ ಯೋಜನೆಯ ನಿರ್ದೇಶಕ ಆರ್. ಗೋಕುಲ್ ಮಾತನಾಡಿದರು. ದಿವಂಗತ ಎಚ್.ಎಸ್. ಶ್ರೀನಿವಾಸ್ ಸ್ಮರಣಾರ್ಥ ರೂಪಿಸಿರುವ ಜಿಲ್ಲಾಮಟ್ಟದ ಗ್ರಾಮೀಣಾಭಿವೃದ್ಧಿ ಲೇಖನ ಪ್ರಶಸ್ತಿಗೆ ಆಯ್ಕೆಯಾದ ಮಹಮದ್ ರಫೀಕ್ ಅವರನ್ನು ಹಾಗೂ ಸಂಘದ ಹಿರಿಯ ಪತ್ರಕರ್ತರಾದ ಧರ್ಮಾಪುರ ನಾರಾಯಣ್, ಎಂ.ಎ. ಶ್ರೀಕಾಂತ್, ದಾ.ರಾ. ಮಹೇಶ್, ಎಚ್.ಜೆ. ಯೋಗೇಂದ್ರ ಅವರನ್ನು ಮತ್ತು ಸಮಾಜದ ವಿವಿಧ ಕ್ಷೇತ್ರಗಳಲ್ಲಿ ಸೇವೆಗೈಯುತ್ತಿರುವ ರಾಷ್ಟ್ರಮಟ್ಟದ ಅಥ್ಲೆಟ್ ಬೀಬಿ ಸುಮಯಾ, ಇತ್ತೀಚೆಗೆ ವರ್ಗಾವಣೆಗೊಂಡಿರುವ ಎಸ್ಐ ಹರಿವರ್ಧನ್, ಪುರಸಭಾ ಮುಖ್ಯಾಧಿಕಾರಿ ಹರೀಶ್ ಅವರನ್ನು ಸನ್ಮಾನಿಸಲಾಯಿತು. ವಿಜೇತ ಕ್ರೀಡಾಪಟುಗಳಿಗೆ ಬಹುಮಾನ ವಿತರಿಸಲಾಯಿತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

