ಮೈಸೂರು

ಸರ್ಕಾರಿ ಸವಲತ್ತು ಹಿರಿಯ ನಾಗರಿಕರಿಗೆ ತಲುಪಲಿ

Published On :

ಕ.ಪ್ರ.ವಾರ್ತೆ     ಹುಣಸೂರು     ಅ. 1
ಸರ್ಕಾರದ ವಿವಿಧ ಸ್ಥಳಗಳಲ್ಲಿ ಹಿರಿಯ ನಾಗರಿಕರಿಗೆ ಇರುವ ಸವಲತ್ತು ಹಾಗೂ ಕಾನೂನು ಬೆಂಬಲಗಳನ್ನು ಅರಿತು ಅವುಗಳ ಸದುಪಯೋಗ ಪಡಿಸಿಕೊಳ್ಳಬೇಕೆಂದು ಸಿವಿಲ್ ನ್ಯಾಯಾಧೀಶ ಸಿ. ವೀರಭದ್ರಯ್ಯ ಕರೆ ನೀಡಿದರು.
ಪಟ್ಟಣದ ನ್ಯಾಯಾಲಯಗಳ ಆವರಣದಲ್ಲಿ ಮಂಗಳವಾರ ತಾಲೂಕು ಕಾನೂನು ಸೇವಾ ಸಮಿತಿ, ಅಭಿಯೋಜಕ ಇಲಾಖೆ ಹಾಗೂ ವಕೀಲರ ಸಂಘದ ಸಂಯುಕ್ತಾಶ್ರಯದಲ್ಲಿ ಹಿರಿಯ ನಾಗರಿಕರಿಗೆ ಕಾನೂನು ಅರಿವು ಹಾಗೂ ಗಾಂಧಿ ಜಯಂತಿ ದಿನಾಚರಣೆ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು.
65 ವರ್ಷ ಮೇಲ್ಪಟ್ಟ ಸಮಾಜದ ಹಿರಿಯರಿಗಾಗಿ ಪ್ರವಾಸ ದರದಲ್ಲಿ ರಿಯಾಯಿತಿ ಸೇರಿದಂತೆ ಹಲವಾರು ಸೌಲಭ್ಯಗಳನ್ನು ಕಲ್ಪಿಸಿದೆ. ನ್ಯಾಯಾಂಗದಲ್ಲೂ ಅನಿವಾರ್ಯ ಕಾರಣಗಳಿಂದ ಮೊಕದ್ದಮೆಗಳನ್ನು ಹೊಂದಿರುವ ಹಿರಿಯ ನಾಗರಿಕರ ಪ್ರಕರಣಗಳನ್ನು ಶೀಘ್ರವಾಗಿ ವಿಲೇವಾರಿ ಮಾಡುವ ವ್ಯವಸ್ಥೆ ಕಲ್ಪಿಸಲಾಗಿದೆ.
ಹಿರಿಯ ವಕೀಲ ಎನ್. ಜಯರಾಂ ಚವ್ಹಾಣ್ ಅಧ್ಯಕ್ಷತೆ ವಹಿಸಿ ಮಾತನಾಡಿ, ಸಮಾನತೆಗಾಗಿ ಹೋರಾಡಿದ ಗಾಂಧೀಜಿಯವರ ಜೀವನಾದರ್ಶಗಳನ್ನು ವಕೀಲರು ಅಳವಡಿಸಿಕೊಳ್ಳಬೇಕು ಎಂದು ಹೇಳಿದರು.
ಹಿರಿಯ ಸಿವಿಲ್ ನ್ಯಾಯಾಧೀಶೆ ಬಿ.ಎಂ. ಶೈಲಾ, ವಕೀಲರ ಸಂಘದ ಅಧ್ಯಕ್ಷ ಸಿ.ಎಸ್. ಶ್ರೀಧರ್ ಮಾತನಾಡಿದರು. ವಕೀಲರ ಸಂಘದ ಉಪಾಧ್ಯಕ್ಷ ಆರ್. ಶ್ರೀನಿವಾಸಮೂರ್ತಿ, ಕಾರ್ಯದರ್ಶಿ ಎಂ. ಭಾಸ್ಕರ್, ಸಹಾಯಕ ಸರ್ಕಾರಿ ಅಭಿಯೋಜಕ ಸುರೇಶ್, ವಕೀಲ ಕೆ. ಅಶೋಕ್, ಸಿದ್ದಾರ್ಥ, ಎಚ್.ವಿ. ವೆಂಕಟೇಶ್ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.