ತರಣಿಮುಂಟಿಯಲ್ಲಿ ಹತ್ತಿ ಬೆಳೆ ಕ್ಷೇತ್ರೋತ್ಸವ
ಕ.ಪ್ರ.ವಾರ್ತೆ ಎಚ್.ಡಿ.ಕೋಟೆ ಅ. 1
ಹತ್ತಿಯನ್ನು ವೈಜ್ಞಾನಿಕವಾಗಿ ಬೆಳೆಯಲು ಸುತ್ತೂರಿನ ಜೆಎಸ್ಎಸ್ ಕೃಷಿ ವಿಜ್ಞಾನ ಕೇಂದ್ರದಿಂದ ಹತ್ತಿ ಬೆಳೆಯಲ್ಲಿ ರೈತ ಕ್ಷೇತ್ರ ಪಾಠಶಾಲೆ ಹಾಗೂ ಸದರಿ ಕಾರ್ಯಕ್ರಮದ ಕೊನೆಯ ಹಂತವಾಗಿ ಹತ್ತಿ ಬೆಳೆ ಕ್ಷೇತ್ರೋತ್ಸವ ಕಾರ್ಯಕ್ರಮವು ತಾಲೂಕಿನ ಅಂತರ ಸಂತೆಯ ಹೋಬಳಿಯ ತರಣಿಮುಂಟಿ ಗ್ರಾಮದಲ್ಲಿ ನಡೆಯಿತು.
ಕೃಷಿ ಇಲಾಖೆಯ ಸಹಾಯ ಕೃಷಿ ನಿರ್ದೇಶಕ ಜಯರಾಮಯ್ಯ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ರೈತರು ವೈಜ್ಞಾನಿಕ ಕ್ರಮಗಳ ಬಗ್ಗೆ ಕೃಷಿ ತಜ್ಞರಲ್ಲಿ ಮಾರ್ಗದರ್ಶನ ಪಡೆದು, ಅನುಸರಿಸಿ ಹೆಚ್ಚಿನ ಇಳುವರಿ ಪಡೆಯಬೇಕೆಂದು ಸಲಹೆ ನೀಡಿದರು.
ಮುಖ್ಯ ಅತಿಥಿಯಾಗಿ ತಾಪಂ ಸದಸ್ಯ ಸುನಂದಕುಮಾರ್ ಮಾತನಾಡಿ, ರೈತರು ಹೆಚ್ಚು ಕೃಷಿ ತರಬೇತಿ ಕಾರ್ಯಕ್ರಮಗಳಲ್ಲಿ ಭಾಗವಹಿಸಿ ಹೊಸ ತಂತ್ರಜ್ಞಾನಗಳನ್ನು ಹಾಗೂ ಕ್ರಮಗಳನ್ನು ಅನುಸರಿಸಬೇಕೆಂದು ತಿಳಿಸಿದರು.
ಜೆಎಸ್ಎಸ್ ಕೃಷಿ ವಿಜ್ಞಾನ ಕೇಂದ್ರದ ಸಸ್ಯ ಸಂರಕ್ಷಣೆ ವಿಷಯ ತಜ್ಞ ಸತೀಶ್ ಅಧ್ಯಕ್ಷತೆ ವಹಿಸಿ ಮಾತನಾಡಿ, ಪ್ರಾಯೋಗಿಕ ಹಾಗೂ ಅನುಭವಗಳ ಮುಖಾಂತರ ವೈಜ್ಞಾನಿಕ ಮನೋಭಾವನೆ ಬೆಳೆಸಿಕೊಂಡು, ಬೆಳೆಯಲ್ಲಿ ಬರುವ ಹಾನಿಕಾರಕ ಕೀಟಗಳ ನಿಯಂತ್ರಣ ಹಾಗೂ ಮಿತ್ರ ಕೀಟಗಳ ಸಂರಕ್ಷಣೆಯನ್ನು ಮಾಡುವುದರ ಮುಖಾಂತರ, ಉತ್ಪಾದನಾ ವೆಚ್ಚ ಕಡಿಮೆಯಾಗುವುದರ ಜೊತೆಗೆ ಹೆಚ್ಚಿನ ಇಳುವರಿಯನ್ನು ಸಹ ಪಡೆಯಬಹುದು ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಸುಮಾರು 70ಕ್ಕೂ ಹೆಚ್ಚು ರೈತರು ಭಾಗವಹಿಸಿದರು, ರೈತ ಕ್ಷೇತ್ರ ಪಾಠಶಾಲೆಯ ಶಿಬಿರಾರ್ಥಿಗಳು ಸ್ವಾಗತಿಸಿ, ವಂದಿಸಿದರು. ಶ್ರೀನಿವಾಸ್ ಮಂಕಣಿ ನಿರೂಪಿಸಿದರು. ಜಿಲ್ಲೆಯಲ್ಲಿ ಹತ್ತಿ ಪ್ರಮುಖ ಬೆಳೆಯಾಗಿದ್ದು, ಸುಮಾರು 50 ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ಬೆಳೆಯಲಾಗುತ್ತಿದೆ. ಹತ್ತಿಯ ಸರಾಸರಿ ಇಳುವರಿ ಎಕರೆಗೆ 650 ಕೆ.ಜಿ ಇದ್ದು ಬೆಳೆಯ ಸಾಮರ್ಥ್ಯಕ್ಕಿಂತ(10 ಕ್ವಿಂಟಲ್) ಕಡಿಮೆ ಇದೆ. ಇದಕ್ಕೆ ಕೀಟ ನಿಯಂತ್ರಣ ಮತ್ತು ರೋಗ ನಿರ್ವಹಣೆ ಮಾಡದಿರುವುದು ಪ್ರಮುಖ ಕಾರಣವಾಗಿದೆ. ಆದಕಾರಣ ಹತ್ತಿ ಬೆಳೆಯನ್ನು ವೈಜ್ಞಾನಿಕವಾಗಿ ಬೆಳೆಯಲು ಜೆಎಸ್ಎಸ್ ಕೃಷಿ ವಿಜ್ಞಾನ ಕೇಂದ್ರದಿಂದ ಹತ್ತಿ ಬೆಳೆಯಲ್ಲಿ ರೈತ ಕ್ಷೇತ್ರ ಪಾಠಶಾಲೆಯನ್ನು ಹಮ್ಮಿಕೊಳ್ಳಲಾಗಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

