ಯುವಮೋರ್ಚಾ ಅಧ್ಯಕ್ಷ ನಂದೀಶ್
ಮೈಸೂರು: ಬಿಜೆಪಿ ಜಿಲ್ಲಾ ಘಟಕದ ಯುವ ಮೋರ್ಚಾ ಅಧ್ಯಕ್ಷರಾಗಿ ಬಿ. ಮಹದೇವ ನಂದೀಶ್ ಅವರನ್ನು ನೇಮಕ ಮಾಡಲಾಗಿದೆ ಎಂದು ಜಿಲ್ಲಾಧ್ಯಕ್ಷ ಎ. ಹೇಮಂತ್ಕುಮಾರ್ ಗೌಡ ತಿಳಿಸಿದ್ದಾರೆ.
ವಿವಿಧ ಹುದ್ದೆಗೆ ಅರ್ಜಿ ಆಹ್ವಾನ
ಮೈಸೂರು: ಸಮಗ್ರ ಮಕ್ಕಳ ರಕ್ಷಣಾ ಯೋಜನೆಯ ಮಾರ್ಗಸೂಚಿಯಂತೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಅಧೀನದಲ್ಲಿನ ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಹಾಗೂ ಸುಧಾರಣಾ ಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಹೊರಗುತ್ತಿಗೆ ಆಧಾರದಲ್ಲಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಅ.20ರೊಳಗೆ ಅರ್ಜಿಗಾಗಿ 100 ಡಿ.ಡಿ.ಯನ್ನು ಜಿಲ್ಲಾ ರಕ್ಷಣಾ ಘಟಕ ಇವರ ಹೆಸರಲ್ಲಿ ಪಡೆದು, ಜಿಲ್ಲಾ ರಕ್ಷಣಾಧಿಕಾರಿ(ಡಿಸಿಪಿಒ), ನಂ.88, ಒಂದೆನೆ ಮಹಡಿ, 3ನೇ ಕ್ರಾಸ್, 9ನೇ ಮೇನ್, ಸರಸ್ವತಿಪುರಂ, ಮೈಸೂರು- 09 ಇವರಿಗೆ ಸಲ್ಲಿಸಲು ಸೂಚಿಸಿದೆ. ವಿವರಕ್ಕೆ ಕಚೇರಿ ಸಂಪರ್ಕಿಸಬಹುದು.
ಕೆ- ಸೆಟ್ ಪರೀಕ್ಷೆಗೆ ತರಬೇತಿ
ಮೈಸೂರು: ಜ್ಞಾನಬುತ್ತಿ ಸಂಸ್ಥೆಯು ಮೈಸೂರು ವಿವಿ ನಡೆಸಲಿರುವ ರಾಜ್ಯಮಟ್ಟದ ಕಾಲೇಜು ಉಪನ್ಯಾಸಕರ ಅರ್ಹತಾ ಪರೀಕ್ಷೆ (ಕೆ-ಸೆಟ್) ಹಾಗೂ ಯುಜಿಸಿ ನಡೆಸುವ ಕಿರಿಯ ಶಿಷ್ಯವೇತನ ಸಂಶೋಧನ ಸಹಾಯಕರ ಹಾಗೂ ಕಾಲೇಜು ಉಪನ್ಯಾಸಕರ ರಾಷ್ಟ್ರಮಟ್ಟದ ಅರ್ಹತಾ ಪರೀಕ್ಷೆಗೆ 45 ದಿನಗಳ ವಿಶೇಷ ತರಬೇತಿ ಶಿಬಿರ ಏರ್ಪಡಿಸಿದೆ. ಅ.5 ರೊಳಗಾಗಿ ಪ್ರತಿದಿನ ಸಂಜೆ 6 ರಿಂದ 8 ರವರೆಗೆ ನಾರಾಯಣಶಾಸ್ತ್ರೀ ರಸ್ತೆಯಲ್ಲಿನ ಮಹಾರಾಣಿ ಎನ್ಟಿಎಂ ಶಾಲೆಯಲ್ಲಿ ತರಬೇತಿ ಶಿಬಿರದ ಸಂಯೋಜಕರ ಬಳಿ ಹೆಸರು ನೋಂದಾಯಿಸಬೇಕು. ಆಸಕ್ತರು ಹೆಚ್ಚಿನ ಮಾಹಿತಿಗೆ ಮೊ. 9448117455 ಅಥವಾ 9480166274 ಸಂಪರ್ಕಿಸಬೇಕು ಎಂದು ಸಂಸ್ಥೆ ಕಾರ್ಯದರ್ಶಿ ರಾ. ರಾಮಕೃಷ್ಣ ತಿಳಿಸಿದ್ದಾರೆ.
ಸಂಗೀತ ವಿದ್ವಾನ್ ಪ್ರಶಸ್ತಿ
ಬೆಂಗಳೂರು: ರಾಜ್ಯ ಮಟ್ಟದ ಸಂಗೀತ ವಿದ್ವಾನ್ ಪ್ರಶಸ್ತಿಯನ್ನು ಮೈಸೂರಿನ ಡಾ. ವಿ.ಎಸ್. ಸಂಪತ್ಕುಮಾರಾಚಾರ್ಯ ಅವರಿಗೆ ನೀಡಲಾಗಿದೆ ಎಂದು ಸರ್ಕಾರದ ಪ್ರಕಟಣೆ ತಿಳಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

