ವಂದೇ ಮಾತರಂ ಸ್ಲಂ ನಿವಾಸಿಗಳ ಪ್ರತಿಭಟನೆ
ಕ.ಪ್ರ.ವಾರ್ತೆ ಮೈಸೂರು ಅ. 1
ಬನ್ನಿಮಂಟಪದ ವಂದೇ ಮಾತರಂ ಕೊಳೆಗೇರಿ ನಿವಾಸಿಗಳು ತಮ್ಮ ವಿವಿಧ ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ ಕರ್ನಾಟಕ ಕೊಳಗೇರಿ ನಿವಾಸಿಗಳ ಸಂಯುಕ್ತ ಸಂಘಟನೆ ನೇತೃತ್ವದಲ್ಲಿ ಮಂಗಳವಾರ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟಿಸಿದರು.
ವಂದೇ ಮಾತರಂ ಸ್ಲಂನಲ್ಲಿ ಸಮುದಾಯ ಭವನ ನಿರ್ಮಿಸಬೇಕು. ಅಂಗನವಾಡಿ ಕೇಂದ್ರ, ನ್ಯಾಯಬೆಲೆ ಅಂಗಡಿ ಮಂಜೂರು ಮಾಡಬೇಕು. ವಂದೇ ಮಾತರಂ ಸ್ಲಂ ಬಿ ಬ್ಲಾಕ್ನಲ್ಲಿ ವಾಸವಾಗಿರುವ ಕುಟುಂಬಗಳಿಗೆ ಕೊಳೆಗೇರಿ ಅಭಿವೃದ್ಧಿ ಮಂಡಳಿಯಿಂದ ಮನೆಗಳನ್ನು ನೀಡಬೇಕು ಎಂದು ಅವರು ಒತ್ತಾಯಿಸಿದರು.
ಕುರಿಮಂಡಿ ಪಾರ್ಕ್ ಸ್ಲಂನಲ್ಲಿ ವಾಸವಾಗಿರುವ ಕಡುಬಡವರು, ಅಲ್ಪಸಂಖ್ಯಾತರು, ಹಿಂದುಳಿದ ವರ್ಗದವರಿಗೆ ಕೊಳೆಗೇರಿ ಅಭಿವೃದ್ಧಿ ಮಂಡಳಿ ವತಿಯಿಂದ ಮನೆ ನಿರ್ಮಿಸಿಕೊಡಬೇಕು. ಕುರಿಮಂಡಿ ಮತ್ತು ಕರುಮಾರಿಯಮ್ಮ ದೇವಸ್ಥಾನ ಬಳಿಯ ಗುಡಿಸಲು ನಿವಾಸಿಗಳಿಗೂ ಮನೆ ಮಂಜೂರು ಮಾಡಬೇಕು ಎಂದು ಅವರು ಆಗ್ರಹಿಸಿದರು.
ಅಲೀಂ ನಗರ(ಮಾರೇಗೌಡನಹಳ್ಳಿ) ನರ್ಮ್ ಮನೆಗಳ ಒಳಚರಂಡಿ ಸಮಸ್ಯೆ ಪರಿಹರಿಸಬೇಕು. ಇಲ್ಲಿಗೆ ಸಮುದಾಯ ಭವನ, ಪ್ರಾಥಮಿಕ ಆರೋಗ್ಯ ಕೇಂದ್ರ ಮಂಜೂರು ಮಾಡಬೇಕು. ನಗರದಲ್ಲಿರುವ ಎಲ್ಲ ಕೊಳಗೇರಿಗಳಲ್ಲಿ ಕೆ.ಆರ್. ಆಸ್ಪತ್ರೆ ವತಿಯಿಂದ ಪ್ರತಿ ತಿಂಗಳು ಆರೋಗ್ಯ ತಪಾಸಣೆ ಮಾಡಿಸಬೇಕು ಎಂದು ಅವರು ಒತ್ತಾಯಿಸಿದರು.
ಮುಖಂಡರಾದ ಬಿ. ರಾಜು, ಎನ್. ಕೃಷ್ಣಪ್ಪ, ರಂಗಪ್ಪ, ಎಂ. ರಸೂಲ್, ಸೈಯದ್ ಎಕ್ಬಾಲ್, ಎ. ಚಂದ್ರಕುಮಾರ್, ಅಯೂಬ್ ಖಾನ್, ಏಜಾಜ್, ಸಲೀಂ ಪಾಷ, ರಾಜ ಮಾಣಿಕ್ಯಂ, ಭಾಗ್ಯ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

