ಮೈಸೂರು

ಕೆರೆ ಹೂಳು ತೆಗೆಯುವ ಕಾಮಗಾರಿಗೆ ಚಾಲನೆ

Published On :

ಕ.ಪ್ರ.ವಾರ್ತೆ    ಸಾಲಿಗ್ರಾಮ್ಣ ಅ. 2
ಗಾಂಧೀಜಿಯವರ ಮಹತ್ವಾಕಾಂಕ್ಷೆಯ ಗ್ರಾಮಾಭಿವೃದ್ಧಿ ಯೋಜನೆಗಳು ಯಶಸ್ವಿಯಾಗಲು ಸರ್ವರೂ ಪ್ರಾಮಾಣಿಕವಾಗಿ ತಮ್ಮ ಕರ್ತವ್ಯ ನಿರ್ವಹಿಸಬೇಕೆಂದು ಹೊನ್ನೇನಹಳ್ಳಿ ಗ್ರಾಪಂ ಅಭಿವೃದ್ಧಿ ಅಧಿಕಾರಿ ಎಸ್ಪಿ ರಾಮೇಗೌಡ ಹೇಳಿದರು.
ಕೆ.ಆರ್. ನಗರ ತಾಲೂಕು ಪಶುಪತಿ ಗ್ರಾಮದಲ್ಲಿ ಬುಧವಾರ ಕೆರೆಯ ಹೂಳನ್ನು ತೆಗೆಯುವ ಕಾರ್ಯಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಗಾಂಧಿ ಜಯಂತಿಯಂದು ಮಹತ್ಮಾಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆ ಅಡಿಯಲ್ಲಿ ನೀರಿನ ಸಂರಕ್ಷಣೆಗಾಗಿ ಗ್ರಾಮಗಳ ಕೆರೆ- ಕಟ್ಟೆಗಳಲ್ಲಿ ಹತ್ತಾರು ವರ್ಷಗಳಿಂದ ತುಂಬಿರುವ ಹೂಳನ್ನು ತೆಗೆಸಿ ಅವುಗಳನ್ನು ರಕ್ಷಿಸಿ ಜನ-ಜಾನುವಾರುಗಳಿಗೆ ಅನುಕೂಲ ಕಲ್ಪಿಸುವ ಕೆಲಸ ಮಾಡಲಾಗುತ್ತಿದೆ. ಇದೇ ರೀತಿ ಹೊನ್ನೇನಹಳ್ಳಿ ಗ್ರಾಪಂ ವ್ಯಾಪ್ತಿಯಲ್ಲಿ ಬರುವ ಗ್ರಾಮಗಳ ಸಮಗ್ರ ಅಭಿವೃದ್ಧಿಗಾಗಿ ಹಲವು ಕ್ರಿಯಾ ಯೋಜನೆಗಳನ್ನು ರೂಪಿಸಲಾಗಿದ್ದು, ಅವುಗಳನ್ನು ಹಂತ-ಹಂತವಾಗಿ ಅನುಷ್ಠಾನಗೊಳಿಸಲಾಗುವುದು ಎಂದು ತಿಳಿಸಿದರು.
ಗ್ರಾಪಂ ಅಧ್ಯಕ್ಷೆ ದೇವಮ್ಮಸಿದ್ದಯ್ಯ, ಮಾಜಿ ಅಧ್ಯಕ್ಷ ಪಿ.ಟಿ. ಸೋಮಶೇಖರ್, ಸದಸ್ಯ ಸ್ವಾಮೀಗೌಡ, ಬಿಲ್ ಕಲೆಕ್ಟರ್ ಗಣೇಶ್ ಹಾಗೂ ಗ್ರಾಮಸ್ಥರು ಭಾಗವಹಿಸಿದ್ದರು.


Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.