ಮೈಸೂರು

ದಸರಾ ಉದ್ಘಾಟನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಜರು

Published On :

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದ ಉದ್ಘಾಟನೆ ವಿಷಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೂ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಅವರು ಹಾಕಿದ ಸಂಪ್ರದಾಯ ಪಾಲನೆಗೆ ಮುಂದಾಗಿದ್ದಾರೆ. ಸಾಮಾನ್ಯವಾಗಿ ವಿಜಯದಶಮಿಯಂದು ನಡೆಯುವ ಜಂಬೂಸವಾರಿಯಲ್ಲಿ ಮುಖ್ಯಮಂತ್ರಿ ಭಾಗವಹಿಸುತ್ತಿದ್ದರು. ಅರಮನೆಯ ಬಲರಾಮ ದ್ವಾರದಲ್ಲಿ ನಂದಿ ಧ್ವಜಕ್ಕೆ ಪೂಜೆ ಸಲ್ಲಿಸಿ, ನಂತರ ಅರಮನೆಯ ಒಳಾವರಣದಲ್ಲಿ ನಿರ್ಮಿಸುವ ವಿಶೇಷ ವೇದಿಕೆಯಲ್ಲಿ ನಿಂತು 750 ಕೆ.ಜಿ. ತೂಕದ ಚಿನ್ನದ ಅಂಬಾರಿಯಲ್ಲಿರುವ ಶ್ರೀ ಚಾಮುಂಡೇಶ್ವರಿ ವಿಗ್ರಹಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಮೆರವಣಿಗೆಗೆ ಚಾಲನೆ ನೀಡುತ್ತಿದ್ದರು. ರಾಜ್ಯಪಾಲರು ಸಂಜೆ ಬನ್ನಿಮಂಟಪದಲ್ಲಿ ನಡೆಯುವ ಪಂಜಿನ ಕವಾಯತಿನಲ್ಲಿ ಮುಖ್ಯ ಅತಿಥಿಯಾಗಿ, ಗೌರವ ವಂದನೆ ಸ್ವೀಕರಿಸುತ್ತಿದ್ದರು.  ಚುನಾಯಿತ ಸರ್ಕಾರಗಳು ಇಲ್ಲದಿದ್ದಾಗ ರಾಷ್ಟ್ರಪತಿ ಆಡಳಿತದಲ್ಲಿ ರಾಜ್ಯಾಧಿಕಾರ ನಡೆಸುವ ರಾಜ್ಯಪಾಲರೇ ಜಂಬೂ ಸವಾರಿಗೆ ಚಾಲನೆ ನೀಡುವುದು ಹಾಗೂ ಪಂಜಿನ ಕವಾಯತಿನಲ್ಲಿ ಗೌರವ ವಂದನೆ ಸ್ವೀಕರಿಸುತ್ತಾರೆ.

ಬಿಎಸ್ ವೈರಿಂದ ಹೊಸ ಸಂಪ್ರದಾಯ: ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಿದ್ದಾಗ ದಸರೆಯ ಉದ್ಘಾಟನೆಯಲ್ಲಿ ಭಾಗವಹಿಸುವ ಮೂಲಕ ಹೊಸ ಸಂಪ್ರದಾಯವೊಂದಕ್ಕೆ ನಾಂದಿ ಹಾಡಿದ್ದರು. ಮೆರವಣಿಗೆಯಲ್ಲೂ ಭಾಗವಹಿಸಿದ್ದರು. ನಂತರ ಎಸ್.ಎ. ರಾಮದಾಸ್ ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದಾಗಲೂ ಆರಂಭಿಸಿದ ಸಂಪ್ರದಾಯವನ್ನು ಮುಂದುವರಿಸಿದ್ದರು. ಅವರ ಉತ್ತರಾಧಿಕಾರಿಯಾಗಿದ್ದ ಡಿ.ವಿ. ಸದಾನಂದಗೌಡರು, ನಂತರ ಸಿಎಂ ಆದ ಜಗದೀಶ್ ಶೆಟ್ಟರ್ ಅವರೂ ದಸರೆ ಉದ್ಘಾಟನೆಯಲ್ಲೂ ಭಾಗವಹಿಸಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.