ಗಾಂಧಿ ಜಯಂತಿ ಅಂಗವಾಗಿ ಸ್ವಚ್ಛತೆ ಬಗ್ಗೆ ಅರಿವು
ಚಾಮರಾಜನಗರ: ಧರ್ಮಸ್ಥಳ ಮಂಜುನಾಥಸ್ವಾಮಿ ಗ್ರಾಮಾಭಿವೃದ್ಧಿ ಸಂಸ್ಥೆಯ ಶಿವಪುರ ವಲಯದಿಂದ ಸ್ವಸಹಾಯ ಸಂಘದ ಪದಾಧಿಕಾರಿಗಳು ತಾಲೂಕಿನ ಉತ್ತುವಳ್ಳಿಯಲ್ಲಿ ಸ್ವಚ್ಛತೆ ಬಗ್ಗೆ ಅರಿವು ಮೂಡಿಸುವ ಮೂಲಕ ಗಾಂಧಿ ಜಯಂತಿ ಆಚರಿಸಿದರು.
ಗ್ರಾಮದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಸಿ ಜನರಲ್ಲಿ ಸ್ವಚ್ಛತೆ ಕುರಿತು ಜಾಗೃತಿ ಮೂಡಿಸಿದರು. ನಂತರ ಶಾಲಾವರಣದಲ್ಲಿ ನಡೆದ ಕಾರ್ಯಕ್ರಮವನ್ನು ವಿಠಲ ಪೂಜಾರಿ ಉದ್ಘಾಟಿದರು. ಅವರು ಮಾತನಾಡಿ, ಗಾಂಧೀಜಿ ಅವರ ಆಶಯದಂತೆ ಗ್ರಾಮಗಳು ಅಭಿವೃದ್ಧಿಯಾದರೆ ದೇಶದ ಪ್ರಗತಿ ಸಾಧ್ಯ ಎಂಬ ಪರಿಕಲ್ಪನೆಯಂತೆ ನಮ್ಮ ಸಂಸ್ಥೆ ಶ್ರಮಿಸುತ್ತಿದೆ. ಗ್ರಾಮದ ಸ್ವಚ್ಛತೆ ಹಾಗೂ ಅಭಿವೃದ್ಧಿ ನಿಟ್ಟಿನಲ್ಲಿ ಪ್ರತಿಯೊಬ್ಬರೂ ಕಂಕಣ ಬದ್ಧರಾಗಬೇಕು ಎಂದರು.
ಗ್ರಾಪಂ ಅಧ್ಯಕ್ಷೆ ನಾಗಮ್ಮ, ಸೇವಾ ಪ್ರತಿನಿಧಿ ವಿಶಾಲಾಕ್ಷಿ, ಸಂಘದ ಮೇಲ್ವಿಚಾರಕ ಮಂಜುನಾಥ್, ಮುಖಂಡರಾದ ರಾಮು, ಯಡಪುರ ಹಾಗೂ ಉತ್ತುವಳ್ಳಿ ಸಂಘದ ಪ್ರತಿನಿಧಿಗಳು ಹಾಗೂ ಪದಾಧಿಕಾರಿಗಳು ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

