'ಮಹಿಳೆಯರು ಸಂಘಟಿತರಾಗಿ ಆರ್ಥಿಕವಾಗಿ ಸಬಲರಾಗಲಿ'
ಹುಣಸೂರು: ಗ್ರಾಮೀಣ ಪ್ರದೇಶದಲ್ಲಿ ಮಹಿಳೆಯರು ಸಂಘಟಿತರಾಗುವ ಮೂಲಕ ಆರ್ಥಿಕವಾಗಿ ಸಬಲರಾಗಲು ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಸಹಕಾರಿಯಾಗಿದೆ ಎಂದು ಶಾಸಕ ಎಚ್.ಪಿ. ಮಂಜುನಾಥ್ ಶ್ಲಾಘಿಸಿದರು.
ತಾಲೂಕಿನ ಗಾವಡಗೆರೆಯ ಕಲ್ಯಾಣ ಮಂಟಪದಲ್ಲಿ ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ವಲಯದ ಐದು ಒಕ್ಕೂಟಗಳನ್ನು ಹೊಂಬಾಳೆ ಬಿಡಿಸುವ ಮೂಲಕ ಉದ್ಘಾಟಿಸಿ ಮಾತನಾಡಿದ ಅವರು, ಈ ಯೋಜನೆ ಜಾರಿಗೆ ಬಂದ ನಂತರ ಆರ್ಥಿಕ ಚಟುವಟಿಕೆ ಹೆಚ್ಚಿದೆ. ರೈತರು ಹಾಗೂ ವಿದ್ಯಾರ್ಥಿಗಳಿಗಾಗಿ ಅನೇಕ ತರಬೇತಿ, ಮಾಹಿತಿ ಹಾಗೂ ನಮ್ಮ ಸಂಸ್ಕೃತಿ, ಹಬ್ಬ ಹರಿ ದಿನಗಳ ಮಹತ್ವದ ಕುರಿತು ಅರಿವನ್ನು ಮೂಡಿಸುವ ಮೂಲಕ ಜನರನ್ನು ಜಾಗೃತಿಗೊಳಿಸುತ್ತಿರುವುದು ಅಭಿನಂದನೀಯ ಎಂದರು.
ಗ್ರಾಮಾಭಿವೃದ್ಧಿ ಯೋಜನೆಯ ಜಿಲ್ಲಾ ನಿರ್ದೇಶಕ ಮಹಾಬಲ ಕುಲಾಲ್ ಮಾತನಾಡಿ, ಗಾವಡಗೆರೆ ಭಾಗದಲ್ಲಿ 315 ಸ್ವಸಹಾಯ ಸಂಘಗಳಿವೆ. 15 ಪುರುಷ ಪ್ರಗತಿ ಬಂಧು ತಂಡಗಳು ಉತ್ತಮ ರೀತಿಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದು ಒಟ್ಟು 1.75 ಕೋಟಿ ನಷ್ಟು ಪ್ರಗತಿ ನಿಧಿ ಸಾಲವನ್ನು ವಿವಿಧ ಉದ್ದೇಶಗಳಿಗೆ ಪಾಲುದಾರ ಕುಟುಂಬಗಳಿಗೆ ವಿತರಿಸಲಾಗಿದೆ. 121 ಕುಟುಂಬಗಳು ಹೊಸದಾಗಿ ಶೌಚಾಲಯ ನಿರ್ಮಿಸಿಕೊಂಡಿದ್ದು 1.20 ಲಕ್ಷ ಅನುದಾನ ವಿತರಿಸಲಾಗಿದೆ. ದೀನಬಂಧು ಗೋಬರ್ ಗ್ಯಾಸ್ ಹಾಗೂ ಬಾಳೆ ಕೃಷಿ ಮಾಡಿದ ಕುಟುಂಬಗಳಿಗೆ 15 ಸಾವಿರ ಸಹಾಯಧನ ವಿತರಿಸಲಾಗಿದೆ ಎಂದರು.
ಅಧ್ಯಕ್ಷತೆ ವಹಿಸಿದ್ದ ಗ್ರಾಪಂ ಅಧ್ಯಕ್ಷೆ ಸೀತಮ್ಮ ಮಾತನಾಡಿದರು. ಜಿಪಂ ಸದಸ್ಯ ದೇವರಾಜ್, ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷೆ ಕೃಷ್ಣಬಾಯಿ, ಮುಳ್ಳೂರು ಗ್ರಾಪಂ ಅಧ್ಯಕ್ಷ ಬಸವಾರಾಜು, ಮುಖಂಡರಾದ ಸ್ವಾಮಿನಾಯ್ಕ, ತಾಲೂಕು ಯೋಜನಾಧಿಕಾರಿ ರಾಮು, ಗ್ರಾಪಂ ಸದಸ್ಯ ಪ್ರಮೋದ್ ಮಾತನಾಡಿದರು
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

