ಮೈಸೂರು

ಗಾಂಧೀಜಿ ತತ್ವ ಆದರ್ಶಗಳ ಪಾಲನೆಗೆ ಕರೆ

Published On :

ಕ.ಪ್ರ.ವಾರ್ತೆ  ಮೈಸೂರು  ಅ. 4
ಪ್ರತಿಯೊಬ್ಬರು ಮಹಾತ್ಮ ಗಾಂಧೀಜಿ ಅವರ ತತ್ವ ಹಾಗೂ ಆದರ್ಶಗಳನ್ನು ಪಾಲಿಸುವ ಅಗತ್ಯವಿದೆ ಎಂದು ಜೆಎಸ್ಎಸ್ ಪದವಿಪೂರ್ವ ಮಹಿಳಾ ಕಾಲೇಜಿನ ರಾಜ್ಯಶಾಸ್ತ್ರ ಉಪನ್ಯಾಸಕ ಎಸ್. ನಾಗೇಂದ್ರ ಹೇಳಿದರು. ಸರಸ್ವತಿಪುರಂನ ಜೆಎಸ್ಎಸ್ ಮಹಿಳಾ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ವತಿಯಿಂದ ಏರ್ಪಡಿಸಿದ್ದ ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಅವರು ಮಾತನಾಡಿದರು.  ಪ್ರಾಂಶುಪಾಲೆ ಎಂ.ಪಿ. ರಾಜೇಶ್ವರಿ ಮಾತನಾಡಿದರು. ಲಾಲ್ ಬಹದ್ದೂರ್ ಶಾಸ್ತ್ರಿ ಅವರ ವಿಚಾರಧಾರೆ ಕುರಿತು ವಿದ್ಯಾರ್ಥಿನಿ ಕಾವ್ಯಾ ಹಾಗೂ ಗಾಂಧೀಜಿ ವಿಚಾರಧಾರೆ ಕುರಿತು ಉಪನ್ಯಾಸಕ ಎಂ.ಪಿ. ಮಹದೇವಸ್ವಾಮಿ ಮಾತನಾಡಿದರು.
ಕೌಟಿಲ್ಯ ವಿದ್ಯಾಲಯ:  ರಾಮಕೃಷ್ಣನಗರದ ಕೌಟಿಲ್ಯ ವಿದ್ಯಾಲಯದಲ್ಲಿ ಮಹಾತ್ಮ ಗಾಂಧಿ ಜಯಂತಿ ಆಚರಿಸಲಾಯಿತು. ವಿದ್ಯಾಲಯದ ಸಮಾಜ ವಿಜ್ಞಾನ ಶಿಕ್ಷಕ ಜಯಂತ್ ಮಾತನಾಡಿ, ಗಾಂಧೀಜಿ ಅವರು ಸ್ವಾತಂತ್ರಕ್ಕಾಗಿ ನೀಡಿದ ಅಹಿಂಸಾ ಮತ್ತು ಸತ್ಯಾಗ್ರಹ ಹೋರಾಟದ ವಿವಿಧ ಮಜಲುಗಳನ್ನು ವಿವರಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.