ದಸರಾ ದಶಮಾನೋತ್ಸವಕ್ಕೆ ಡಿ.ರವಿಶಂಕರ್ ಚಾಲನೆ
ಕ.ಪ್ರ.ವಾರ್ತೆ ಕೆ.ಆರ್. ನಗರ ಅ. 4
ಕಾಗಿನೆಲೆ ಕನಕಗುರು ಪೀಠದ ವತಿಯಿಂದ ನಡೆಸುತ್ತಿರುವ ದಸರಾ ದಶಮಾನೋತ್ಸವ ಕಾರ್ಯಕ್ರಮ ಮತ್ತು ಚಾಮುಂಡೇಶ್ವರಿಯ ಪೂಜಾ ಮಹೋತ್ಸವದ ಕಾರ್ಯಕ್ರಮದ ಮೆರವಣಿಗೆಗೆ ಜಿಲ್ಲಾ ಕಾಂಗ್ರೆಸ್ ಕಾರ್ಯದರ್ಶಿ ಡಿ.ರವಿಶಂಕರ್ ಚಾಲನೆ ನೀಡಿದರು.
ಅಂಬೇಡ್ಕರ್ ಪ್ರತಿಮೆಯಿಂದ ನಂದಿಧ್ವಜಕ್ಕೆ ಪೂಜೆ ಸಲ್ಲಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ನಂತರ ಮೆರವಣಿಗೆ ಗರುಡಗಂಭ ವೃತ್ತ, ಪುರಸಭಾ ವೃತ್ತ ಮೂಲಕ ಶ್ರೀ ಕಾಗಿನೆಲೆ ಮಠದವರೆಗೆ ನಡೆಯಿತು. ಗಾರುಡಿ ಗೊಂಬೆ, ಡೊಳ್ಳು ಕುಣಿತ, ಪೂಜಾ ಕುಣಿತ, ವೀರಗಾಸೆ ಮತ್ತಿತರ ಜಾನಪದ ಕುಣಿತಗಳು ಸಾರ್ವಜನಿಕರ ಗಮನ ಸೆಳೆದವು.
ಅ.4 ರಿಂದ 14 ರವರೆಗೆ ಮಠದಲ್ಲಿ ವಿವಿಧ ಧಾರ್ಮಿಕ ಸಾಂಸ್ಕೃತಿಕ ಮತ್ತು ಇತರೆ ಕಾರ್ಯಕ್ರಮಗಳು ನಡೆಯಲಿದ್ದು, ಕಳೆದ 10 ವರ್ಷಗಳಿಂದ ಶ್ರೀ ಮಠವು ವೈವಿಧ್ಯಮಯವಾಗಿ ದಸರಾ ಕಾರ್ಯಕ್ರಮಗಳನ್ನು ನಡೆಸುತ್ತಿದೆ.
ಕನಕ ಪೀಠದ ಶಿವಾನಂದಪುರಿ ಶ್ರೀಗಳು, ತಾಲೂಕು ಕುರುಬರ ಸಂಘದ ಅಧ್ಯಕ್ಷ ಜಿ.ಎನ್. ಮಲ್ಲೇಗೌಡ, ಬಿಇಒ ಎಸ್.ಟಿ. ಜವರೇಗೌಡ, ಜಿಪಂ ಮಾಜಿ ಸದಸ್ಯ ಜಿ.ಆರ್. ರಮೇಗೌಡ, ಜಯರಾಮೇಗೌಡ, ಅಹಿಂದ ಸಂಚಾಲಕ ಪ್ರಕಾಶ್, ಕಾಳಿದಾಸ ಯುವ ಸೇನೆ ಕಾರ್ಯದರ್ಶಿ ಜಗದೀಶ, ಎಪಿಎಂಸಿ ಮಾಜಿ ನಿರ್ದೇಶಕ ರಾಜಶೇಖರ್, ಹಿಂದುಳಿದ ವರ್ಗದ ಒಕ್ಕೂಟದ ಅಧ್ಯಕ್ಷ ಜಿ.ಎಂ. ಹೇಮಂತ್, ಬಸವರಾಜು, ಚೀರ್ನಹಳ್ಳಿ ಶ್ರೀನಿವಾಸ್, ಶಿವಣ್ಣ, ಕೃಷ್ಣೇಗೌಡ ಮೆರವಣಿಗೆಯಲ್ಲಿ ಭಾಗವಹಿಸಿದ್ದರು
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

