ನಗರದ ವಿವಿಧೆಡೆ ನಾಗರಿಕ ಪ್ರಜ್ಞಾ ಅಭಿಯಾನ
ಕ.ಪ್ರ.ವಾರ್ತೆ ಮೈಸೂರು ಅ. 5
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಡಿ ನಗರದ ವಿವಿಧೆಡೆ ನಾಗರಿಕ ಪ್ರಜ್ಞಾ ಅಭಿಯಾನ ಏರ್ಪಡಿಸಲಾಗಿತ್ತು.
ಬೃಂದಾವನ ಬಡಾವಣೆಯಲ್ಲಿ ಏರ್ಪಡಿಸಿದ್ದ ನಾಗರಿಕ ಪ್ರಜ್ಞಾ ಕಾರ್ಯಕ್ರಮದಲ್ಲಿ ಮೇಲ್ವಿಚಾರಕ ಸಂತೋಷ್ ಪೂಜಾರ್ ಮಾತನಾಡಿ, ಗಾಂಧಿ ಜಯಂತಿ ಅಂಗವಾಗಿ ಎಲ್ಲೆಡೆ ಸ್ವಚ್ಛತೆ, ಪ್ಲಾಸ್ಟಿಕ್ ನಿಯಂತ್ರಣಕ್ಕೆ ಕಡಿವಾಣ ಹಾಕುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಶ್ರಮದಾನದ ಮೂಲಕ ಹಾಗೂ ಸದಸ್ಯರಿಗೆ ನಾಗರಿಕ ಪ್ರಜ್ಞಾ ಸೂತ್ರಗಳ ಬಗ್ಗೆ ಮಾಹಿತಿ ನೀಡುವ ಕಾರ್ಯಕ್ರಮ ನಡೆಸಲಾಯಿತು. ನಾಗರಿಕರಾದ ನಾವು ದುಶ್ಚಟಗಳಿಗೆ ಬಲಿಯಾಗದೆ ಸಮುದಾಯವನ್ನು ಸ್ವಚ್ಛವಾಗಿಟ್ಟುಕೊಳ್ಳಬೇಕು ಎಂದು ಹೇಳಿದರು.
ರೋಟರಿ ಕ್ಲಬ್ ಅಧ್ಯಕ್ಷೆ ಶ್ರೀನಿಧಿ ಕರಪತ್ರ ವಿತರಿಸಿದರು. ಪಾಲಿಕೆ ಸದಸ್ಯೆ ಅನುಸೂಯ, ಸರೋಜ ಇದ್ದರು.
ಕುವೆಂಪುನಗರ ಮತ್ತು ಅಗ್ರಹಾರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಯೋಜನೆಯ ಜಿಲ್ಲಾ ಪ್ರಬಂಧಕ ಅರುಣ್ಕುಮಾರ್ ಮಾತನಾಡಿ, ದುಶ್ಚಟದ ಪರಿಣಾಮ ಮತ್ತು ಮದ್ಯವರ್ಜನ ಶಿಬಿರದ ಕುರಿತು ಮಾಹಿತಿ ನೀಡಿದರು. ಶಿಕ್ಷಕಿ ವೀಣಾ ಗಾಂಧೀಜಿಯ ಜೀವನ ಚರಿತ್ರೆ ತಿಳಿಸಿಕೊಟ್ಟರು.
ಮಂಡಿ ಮೊಹಲ್ಲಾದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪಾಲಿಕೆ ಮಾಜಿ ಸದಸ್ಯ ಕುಶಲ್ಕುಮಾರ್ ಮಾತನಾಡಿ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆ ಮೂಲಕ ಸ್ವಾವಲಂಬಿಗಳಾಗಬೇಕಾದರೆ ಸಮಾಜದಲ್ಲಿ ಉತ್ತಮ ರೀತಿಯ ಜೀವನ ಮೌಲ್ಯ ಅಳವಡಿಸಿಕೊಳ್ಳಬೇಕು ಎಂದು ತಿಳಿಸಿದರು.
ಉದ್ಬೂರು ವಲಯದಲ್ಲಿ ನಡೆದ ಕಾರ್ಯಕ್ರಮದಲ್ಲಿ ತಾಲೂಕು ಯೋಜನಾಧಿಕಾರಿ ಎಂ.ಚೇತನಾ ಮಾತನಾಡಿ, ಇದೊಂದು ವಿಶೇಷ ಕಾರ್ಯಕ್ರಮವಾಗಿದ್ದು, ಪ್ರತಿಯೊಬ್ಬರೂ ತಮ್ಮ ತಮ್ಮ ಕರ್ತವ್ಯದ ಬಗ್ಗೆ ಕಾಳಜಿ ಇದ್ದರೆ ಮಾತ್ರ ತಮ್ಮ ಮಕ್ಕಳಿಗೆ ಮಾಹಿತಿ ನೀಡಬಹುದು. ಇಂದು ಸಾಮೂಹಿಕ ಕಾರ್ಯಕ್ರಮದಲ್ಲಿ ತೊಡಗಿದ್ದೀರಿ. ಇದರಿಂದ ಪ್ರತಿ ಮನೆ ಮನೆಯು ಸ್ವಚ್ಛತೆಯ ಬಗ್ಗೆ ಕಾಳಜಿ ವಹಿಸಿದಂತೆ ಆಗುತ್ತದೆ ಎಂದರು.
ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ್ದ ಗ್ರಾಪಂ ಸದಸ್ಯ ನಾರಾಯಣ, ಮೇಲ್ವಿಚಾರಕಿ ಸುಮಲತಾ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

