ಮೈಸೂರು

ಬಂಧಿತ ಇಬ್ಬರು ಶಂಕಿತರ ತೀವ್ರ ವಿಚಾರಣೆ

Published On :

ಮೈಸೂರು: ಮೈಸೂರಿನ ರಾಜೀವ್‌ನಗರ ಬಡಾವಣೆಯ ಮನೆಯೊಂದರಲ್ಲಿ ಬಂಧಿಸಲಾಗಿರುವ ಉತ್ತರ ಪ್ರದೇಶ ಮೂಲದ ಇಬ್ಬರ ವಿಚಾರಣೆಯನ್ನು ಪೊಲೀಸರು ತೀವ್ರಗೊಳಿಸಿದ್ದಾರೆ. ಉತ್ತರಪ್ರದೇಶ ದಾಬೋಹಿ ಗ್ರಾಮದ ಅಫ್ಜಲ್ ಮತ್ತು ಭಜನ್ ಬಂಧಿತರು. ಮೂರು ದಿನಗಳ ಹಿಂದೆಯಷ್ಟೇ ಈ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಇವರ ಬಳಿ ಪಿಸ್ತೂಲ್ ಹಾಗೂ ಜೀವಂತ ಗುಂಡುಗಳು ಹೊಂದಿರುವ ಹಿನ್ನೆಲೆಯಲ್ಲಿ ನ್ಯಾಯಾಲಯಕ್ಕೆ ಹಾಜರುಪಡಿಸಿ, ನಂತರ ತಮ್ಮ ವಶಕ್ಕೆ ತೆಗೆದುಕೊಂಡು ವಿಚಾರಣೆ ನಡೆಸಲು ಪೊಲೀಸರು ನಿರ್ಧರಿಸಿದ್ದಾರೆ ಎಂದು ತಿಳಿದು ಬಂದಿದೆ.
ಉಗ್ರರ ಭಾವಚಿತ್ರ: ಮೈಸೂರು ನಗರ ಪೊಲೀಸರು ನಾಲ್ಕು ಮಂದಿ ಮೋಸ್ಟ್ ವಾಂಟೆಂಡ್ ಉಗ್ರರು ಬೇಕಾಗಿದ್ದಾರೆ ಎಂಬ ಪೋಸ್ಟರ್‌ಗಳನ್ನು ಬಸ್ ನಿಲ್ದಾಣಗಳಲ್ಲಿ ಅಂಟಿಸಿದ್ದರು. ಈ ಉಗ್ರರನ್ನು ಆಂಧ್ರಪ್ರದೇಶದ ಪುತ್ತೂರಿನಲ್ಲಿ ಆಂಧ್ರ ಮತ್ತು ತಮಿಳುನಾಡು ಪೊಲೀಸರು ಜಂಟಿ ಕಾರ್ಯಚರಣೆ ನಡೆಸಿ ಬಂಧಿಸಿದ್ದಾರೆ ಎಂದು ತಿಳಿದು ಬಂದಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.