3 ತಿಂಗಳಿಗೊಮ್ಮೆ ಎಲ್ಲ ಜಿಲ್ಲೆಗಳಲ್ಲೂ ಜನತಾ ದರ್ಶನ
ಮೈಸೂರು: ಕನಿಷ್ಠ ಮೂರು ತಿಂಗಳಿಗೊಮ್ಮೆಯಾದರೂ ಜಿಲ್ಲಾ ಉಸ್ತುವಾರಿ ಸಚಿವರು ಆಯಾ ಜಿಲ್ಲೆಗಳಲ್ಲಿ ಜನತಾ ದರ್ಶನ ನಡೆಸಲು ಸೂಚಿಸಿರುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಮೈಸೂರಿನ ನಜರ್ಬಾದ್ ಸರ್ಕಾರಿ ಅತಿಥಿಗೃಹದಲ್ಲಿ ಭಾನುವಾರ ನಡೆದ ಜನತಾ ದರ್ಶನ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಸಹ ವಿವಿಧ ಜಿಲ್ಲೆಗಳಿಗೆ ಭೇಟಿ ನೀಡುವ ಸಂದರ್ಭದಲ್ಲಿ ಜನತಾ ದರ್ಶನ ಮಾಡುತ್ತಿದ್ದೇನೆ. ಕೋಲಾರ, ಮೈಸೂರು ಇನ್ನಿತರ ಜಿಲ್ಲೆಗಳಲ್ಲಿ ಜನತಾ ದರ್ಶನ ಮಾಡಿದ್ದೇನೆ. ಸೋಮವಾರ ಚಾಮರಾಜನಗರದಲ್ಲೂ ಜನತಾ ದರ್ಶನ ನಡೆಸಲಾಗುವುದು ಎಂದರು.
ಅಧಿಕಾರಿಗಳಿಗೆ ಜನರ ಸಮಸ್ಯೆಗಳನ್ನು ತಿಳಿಸಿಕೊಡಲು, ನಾನೇ ಖುದ್ದಾಗಿ ಆದೇಶ ನೀಡಿದರೆ ಅಧಿಕಾರಿಗಳು ಪಾಲಿಸುತ್ತಾರೆಂಬ ಕಾರಣಕ್ಕಾಗಿ ಜನತಾ ದರ್ಶನ ಮಾಡುತ್ತಿದ್ದೇನೆ. ಸಾರ್ವಜನಿಕರ ಸಮಸ್ಯೆಗಳನ್ನು ಕೇಳಿ ಪರಿಹಾರ ನೀಡುವುದು ಬಹಳ ಮುಖ್ಯ ಎಂದು ತಿಳಿಸಿದರು.
ಪ್ರಮುಖವಾಗಿ ಕಂದಾಯ, ಜಿಲ್ಲಾಧಿಕಾರಿ, ಜಿಪಂ ಸಿಇಒಗಳ ವ್ಯಾಪ್ತಿಗೆ ಸಂಬಂಧಿಸಿದಂತೆ ಅಲ್ಲದೆ, ಕೆಲಸ ಕೊಡಿಸಿ, ಅಂಗವಿಕಲರು ಉದ್ಯೋಗ ಇಲ್ಲದಿರುವುದು, ಆರೋಗ್ಯ ಸಮಸ್ಯೆ ಸೇರಿದಂತೆ ಹಲವಾರು ಮನವಿಗಳು ಬರುತ್ತಿವೆ. ಜನರ ಸಮಸ್ಯೆಗಳಿಗೆ ಕೆಲವುಅಧಿಕಾರಿಗಳು ಸ್ಪಂದಿಸುತ್ತಾರೆ. ಇನ್ನೂ ಕೆಲವು ಅಧಿಕಾರಿಗಳು ಅರ್ಜಿ ಕೊಟ್ಟರೂ ಸ್ಪಂದಿಸುವುದಿಲ್ಲ. ಹೀಗಾಗಿ ಬಹಳ ಜನ ಮುಖ್ಯಮಂತ್ರಿಯವರ ಬಳಿ ಹೋದರೆ ಸಮಸ್ಯೆ ಬೇಗ ಇತ್ಯರ್ಥವಾಗುತ್ತದೆ ಎಂಬ ಕಾರಣಕ್ಕಾಗಿ ಜನತಾ ದರ್ಶನಕ್ಕೆ ಬರುತ್ತಾರೆ ಎಂದು ಹೇಳಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

