ಮೈಸೂರು

ಅಕ್ಟೋಬರ್ ತಿಂಗಳ ಪಡಿತರ ಬಿಡುಗಡೆ

Published On :

ಕ.ಪ್ರ.ವಾರ್ತೆ  ಮೈಸೂರು  ಅ. 6
ಜಿಲ್ಲೆಯ ಪಡಿತರ ಚೀಟಿದಾರರಿಗೆ ಅನ್ನಭಾಗ್ಯ ಯೋಜನೆ ಅಡಿಯಲ್ಲಿ ಅಕ್ಟೋಬರ್ ತಿಂಗಳ ಅಂತ್ಯೋದಯ ಕಾರ್ಡುದಾರರಿಗೆ 29 ಕೆಜಿ ಅಕ್ಕಿ, 6 ಕೆಜಿ ಗೋಧಿ 1 ರು. ದರದಲ್ಲಿ, ಬಿಪಿಎಲ್ ಏಕಸದಸ್ಯ ಪಡಿತರ ಕಾರ್ಡಿಗೆ 9 ಕೆಜಿ ಅಕ್ಕಿ, 1 ಕೆ.ಜಿ ಗೋಧಿಯನ್ನು 1 ರು. ದರದಲ್ಲಿ, ದ್ವಿ ಸದಸ್ಯರಿಗೆ 18 ಕೆ.ಜಿ. ಅಕ್ಕಿ, 2 ಕೆ.ಜಿ. ಗೋಧಿಯನ್ನು 1 ರು. ದರದಲ್ಲಿ ತ್ರಿ ಸದಸ್ಯ ಮತ್ತು ಅದಕ್ಕಿಂತ ಹೆಚ್ಚಿನ ಸದಸ್ಯರಿರುವ ಕುಟುಂಬಕ್ಕೆ 27 ಕೆ.ಜಿ ಅಕ್ಕಿ, 3 ಕೆ.ಜಿ ಗೋಧಿಯನ್ನು 1 ರು. ದರದಲ್ಲಿ ನೀಡಲಾಗುತ್ತದೆ.
ಪ್ರತಿ ಎಎವೈ ಮತ್ತು ಬಿಪಿಎಲ್ ಪಡಿತರ ಚೀಟಿಗೆ 1 ಕೆಜಿಯಂತೆ 13.50 ರು. ದರದಲ್ಲಿ ಸಕ್ಕರೆಯನ್ನು ಬಿಡುಗಡೆ ಮಾಡಲಾಗಿದೆ. ಅಕ್ಟೋಬರ್‌ನಲ್ಲಿ ಎಪಿಎಲ್ ಪಡಿತರ ಚೀಟಿದಾರರಿಗೆ ಹಂಚಿಕೆ ಬಿಡುಗಡೆ ಮಾಡಿಲ್ಲ. ಈ ಪಡಿತರವನ್ನು ಅ.19 ರೊಳಗೆ ಪಡೆಯಬೇಕು. ಜಿಲ್ಲೆಯಲ್ಲಿ ಪಡಿತರ ವಿತರಣೆಗೆ ಸಂಬಂಧಿಸಿದಂತೆ ಯಾವುದೆ ದೂರುಗಳಿದ್ದರೂ ಕಾರ್ಡುದಾರರು ಸಂಬಂಧಿಸಿದ ಗ್ರಾಪಂ, ತಾಲೂಕು ಮಟ್ಟದ ಅಧಿಕಾರಿಗಳು ಅಥವಾ ತಹಸೀಲ್ದಾರ್ ಅವರನ್ನು ಸಂಪರ್ಕಿಸಬಹುದು ಅಥವಾ ಇಲಾಖೆಯ ಹಿರಿಯ ಉಪ ನಿರ್ದೇಶಕ ಡಾ.ಕೆ. ರಾಮೇಶ್ವರಪ್ಪ ಅವರ ದೂ.0821- 2422107 ಅಥವಾ ಇಲಾಖೆಯ ಬೆಂಗಳೂರು ಕಚೇರಿ ಸಹಾಯವಾಣಿ ಸಂಖ್ಯೆ 1800- 425- 9339ಗೆ ದೂರು ಸಲ್ಲಿಸಬಹುದು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.