ಲಲಿತಕಲೆಗಳಿಗೆ ಪ್ರೋತ್ಸಾಹ ಅವಶ್ಯಕ: ಸಿಎಂ
ಮೈಸೂರು: ನಾಡಿನ ಲಲಿತ ಕಲೆಗಳಿಗೆ ಹೆಚ್ಚಿನ ಪ್ರೋತ್ಸಾಹ ನೀಡುವುದು ಅವಶ್ಯಕ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ವಿಶ್ವಮಾನವ ವಿದ್ಯಾರ್ಥಿ ವೇದಿಕೆ ಮೈಸೂರು ದಸರಾ ಮಹೋತ್ಸವ ಲಲಿತಕಲೆ ಮತ್ತು ಕರಕುಶಲ ಉಪಸಮಿತಿ ಸಹಯೋಗದಲ್ಲಿ ಮೆಟ್ರೋಪೋಲ್ ವೃತ್ತದಲ್ಲಿ ಭಾನುವಾರ ಏರ್ಪಡಿಸಿದ್ದ ರಾಷ್ಟ್ರ ಮಟ್ಟದ ಕಲಾಕೃತಿಗಳ ಪ್ರದರ್ಶನ ಹಾಗೂ ಮಾರಾಟ ಮೇಳ ಚಿತ್ರಸಂತೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು. ರಾಜ್ಯ ಹಾಗೂ ದೇಶದಲ್ಲಿ ಅದ್ಭುತ ಕಲಾವಿದರಿದ್ದಾರೆ. ಅವರಿಂದ ಈ ಕಲಾರಂಗ ಶ್ರೀಮಂತಗೊಂಡಿದೆ. ಲಲಿತಕಲೆಗಳಿಂದ ನಾಡಿನ ಸಂಸ್ಕೃತಿ ಬಹಳ ಎತ್ತರಕ್ಕೆ ಬೆಳದಿದೆ. ಆದ್ದರಿಂದ ಕಲೆ, ಸಂಸ್ಕೃತಿ ಅಭಿವೃದ್ಧಿಗಾಗಿ ಲಲಿತ ಕಲೆಗಳಿಗೆ ಹೆಚ್ಚಿನ ಪ್ರೋತ್ಸಾಹ ಅವಶ್ಯಕ. ಸರ್ಕಾರ ಇದಕ್ಕಾಗಿ ಅಗತ್ಯ ನೆರವು ನೀಡಲಿದೆ ಎಂದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

