ಮೈಸೂರು

ಕಾಲೇಜು ವಿದ್ಯಾರ್ಥಿನಿ ನಾಪತ್ತೆ

Published On :

ಮೈಸೂರು: ಮೈಸೂರು ತಾಲೂಕು ಇಲವಾಲ ಜನತಾ ಕಾಲೋನಿ ನಿವಾಸಿ ಲೇ.ವೆಂಕಟೇಶ್ ಮತ್ತು ದೇವಿ ಎಂಬವರ ಪುತ್ರಿ ಶಶಿಕಲಾ (21) ನಾಪತ್ತೆಯಾಗಿದ್ದಾರೆ. ಶಶಿಕಲಾ ಮೈಸೂರಿನ ವಿವೇಕಾನಂದ ಕಾಲೇಜಿನಲ್ಲಿ ಅಂತಿಮ ಬಿಎ ಓದುತ್ತಿದ್ದು, ಶನಿವಾರ ಕಾಲೇಜಿಗೆ ಹೋದವರು ವಾಪಸ್ ಮನೆಗೆ ಬಂದಿಲ್ಲ. ಚಹರೆ- 5 ಅಡಿ ಎತ್ತರ, ಸಾಧಾರಣ ಮೈಕಟ್ಟು, ಕೋಲು ಮುಖ, ಎಣ್ಣೆಗೆಂಪು ಮೈಬಣ್ಣ, ಕನ್ನಡ ಮತ್ತು ಇಂಗ್ಲಿಷ್ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ಸಿಕ್ಕಲ್ಲಿ ದೂ. 0821- 2402222, 94808 05046 ಸಂಪರ್ಕಿಸಲು ಇಲವಾಲ ಠಾಣೆ ಎಸ್ಐ ಪುನೀತ್ ಕೋರಿದ್ದಾರೆ.


ಪರಿಪೂರ್ಣತೆಗೆ ಗುರುವಿನಮಾರ್ಗದರ್ಶನ ಅಗತ್ಯ: ಧರ್ಮಸೇನ
ಕೆ.ಆರ್. ನಗರ: ವ್ಯಕ್ತಿಯು ಪರಿಪೂರ್ಣ ಮನುಷ್ಯನಾಗಿ ಗುರಿ ಸಾಧಿಸಲು ಗುರುವಿನ ಮಾರ್ಗದರ್ಶನ ಅತ್ಯವಶ್ಯಕ ಎಂದು ವಿಧಾನಪರಿಷತ್ ಸದಸ್ಯ ಆರ್. ಧರ್ಮಸೇನ ಹೇಳಿದರು. ಕನಕ ಗುರುಪೀಠದಲ್ಲಿ ದಸರಾ ದಶಮಾನೋತ್ಸವ ಅಂಗವಾಗಿ ನಡೆದ ಜನಪದ ಮೇಳ ಉದ್ಘಾಟಿಸಿ ಮಾತನಾಡಿದ ಅವರು, ಆಧ್ಯಾತ್ಮಿಕ ಚಿಂತನೆಯಿಂದ ಮನುಷ್ಯ ಜೀವನದಲ್ಲಿ ಪರಿಪೂರ್ಣತೆ ಕಾಣಬಹುದು. ಆದ್ದರಿಂದ ಪ್ರತಿಯೊಬ್ಬರು ಆಧ್ಯಾತ್ಮದ ಚಿಂತನೆ ಮಾಡಬೇಕೆಂದು ಸಲಹೆ ನೀಡಿದರು.
ಪಾಂಡವಪುರ, ಚನ್ನಪಟ್ಟಣ ಸೇರಿದಂತೆ ವಿವಿಧ ತಾಲೂಕುಗಳಿಂದ ಬಂದಿದ್ದ ಜನಪದ ಕಲಾತಂಡಗಳು ಪ್ರದರ್ಶನ ನೀಡಿದವು. ರಾವಂದೂರು ಮಠದ ಮೋಕ್ಷಪತಿ ಸ್ವಾಮೀಜಿ, ಕಾಗಿನೆಲೆ ಮಠದ ಶಿವಾನಂದ ಪುರಿಸ್ವಾಮೀಜಿ, ಉಕ್ಕಿನಕಂತೆ ಮಠದ ಸಾಂಬಸದಾಶಿವ ಸ್ವಾಮೀಜಿ, ಲಾಳನಹಳ್ಳಿ ಮಠದ ಜಯದೇವಿ ತಾಯಿ, ತಾಲೂಕು ಕುರುಬರ ಸಂಘದ ಅಧ್ಯಕ್ಷ ಜಿ.ಎನ್. ಮಲ್ಲೇಗೌಡ, ಜಿಪಂ ಮಾಜಿ ಸದಸ್ಯ ಜಿ.ಆರ್. ರಾಮೇಗೌಡ, ಕಾಳಿದಾಸ ಯುವಸೇನ ಕಾರ್ಯದರ್ಶಿ ಕೆ.ಪಿ. ಜಗದೀಶ್, ಕನಕ ಯುವಕ ಸಂಘದ ಅಧ್ಯಕ್ಷ ಕೃಷ್ಣೇಗೌಡ, ತಾಲೂಕು ಹಿಂದುಳಿದ ವರ್ಗಗಳ ಒಕ್ಕೂಟದ ಅಧ್ಯಕ್ಷ ಜಿ.ಎಂ. ಹೇಮಂತ್ ಇದ್ದರು.


'ಕಾರ್ಯಕ್ರಮ ಯಶಸ್ಸಿಗೆ ಸಮುದಾಯ ಸಹಭಾಗಿತ್ವ ಅಗತ್ಯ'
ಸಾಲಿಗ್ರಾಮ: ಸರ್ಕಾರದ ಯೋಜನೆಗಳು ಯಶಸ್ವಿಯಾಗಲು ಸಮುದಾಯದ ಸಹಭಾಗಿತ್ವ ಮಹತ್ವದ್ದಾಗಿದೆ ಎಂದು ಕೆ.ಆರ್. ನಗರ ತಾಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಎಂ.ಎಸ್. ಯದುಗಿರೀಶ್ ಹೇಳಿದರು.
ಸಮೀಪದ ದೇವಿತಂದ್ರೆ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆಯಲ್ಲಿ ಸೋಮವಾರ ಕ್ಲಸ್ಟರ್ ಮಟ್ಟದ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಯ ಸದಸ್ಯರು ಆಯೋಜಿಸಿದ್ದ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದ ಅವರು, ಶಾಲೆಗಳಲ್ಲಿ ಶಿಕ್ಷಕರು ಕರ್ತವ್ಯವು ಎಷ್ಟು ಪ್ರಮುಖವಾಗಿರುತ್ತದೋ ಅದೇ ರೀತಿಯಲ್ಲಿ ಎಸ್ಡಿಎಂಸಿಯ ಕೆಲಸವು ಅಗತ್ಯವಾಗಿದ್ದು, ಸಮಿತಿಯವರು ಶಾಲೆಯ ಅಭಿವೃದ್ಧಿಗೆ ನಿರಂತರವಾಗಿ ಶ್ರಮಿಸಬೇಕು ಎಂದು ತಿಳಿಸಿದರು.
ಜಿಲ್ಲಾ ಶಿಕ್ಷಕರ ಸಂಘದ ಸಂಘಟನಾ ಕಾರ್ಯದರ್ಶಿ ಜಿ.ಟಿ. ಸತೀಶ್, ಬಿಆರ್ಪಿ ನವೀನ್ಕುಮಾರ್, ಸಿಆರ್ಪಿ ರವಿಕುಮಾರ್, ಸತೀಶ್, ಮುಖ್ಯಶಿಕ್ಷಕ ಬಿ.ಟಿ. ನಾಗರಾಜು, ಶಿಕ್ಷಕರು ಹಾಗೂ ಎಸ್ಡಿಎಂಸಿ ಸಮಿತಿಯ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಸದಸ್ಯರು ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.