ಕಳ್ಳನ ಬಂಧನ: ಕಾರು, ಬೈಕ್ ವಶ
ಕ.ಪ್ರ.ವಾರ್ತೆ ಮೈಸೂರು ಅ. 7
ವಿಜಯನಗರ ಠಾಣೆ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿ 6.70 ಲಕ್ಷ ಮೌಲ್ಯದ 2 ಕಾರು ಮತ್ತು 6 ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಂಡಿದ್ದಾರೆ.
ಬೆಂಗಳೂರಿನ ಬ್ಯಾಡರಹಳ್ಳಿ ನಿವಾಸಿ ಚೇತನ್ಕುಮಾರ್ ಬಂಧಿತ ಆರೋಪಿ. ಈತ ಶುಕ್ರವಾರ ಹೆಬ್ಬಾಳು ಸೂರ್ಯ ಬೇಕರಿ ಬಳಿ ಬೈಕ್ ಮಾರಾಟಕ್ಕೆ ಪ್ರಯತ್ನಿಸುತ್ತಿದ್ದ. ಪೊಲೀಸರು ಹಿಡಿದು ವಿಚಾರಣೆ ನಡೆಸಿದಾಗ, ಕಳವು ಮಾಡಿರುವುದು ಗೊತ್ತಾಗಿದೆ. ಈತನನ್ನು ಶನಿವಾರ ನ್ಯಾಯಾಲಯಕ್ಕೆ ಹಾಜರುಪಡಿಸಿ ಹೆಚ್ಚಿನ ವಿಚಾರಣೆಗೆ ಪೊಲೀಸ್ ವಶಕ್ಕೆ ಪಡೆದು, ವಿವಿಧೆಡೆ ಕಳವು ಮಾಡಿದ್ದ 6.70 ಲಕ್ಷ ಮೌಲ್ಯದ 2 ಕಾರು ಮತ್ತು 6 ದ್ವಿಚಕ್ರ ವಾಹನಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಬಂಧಿತನಿಂದ ವಿಜಯನಗರ, ಕೆ.ಆರ್. ಠಾಣೆ ವ್ಯಾಪ್ತಿ ತಲಾ 1 ಬೈಕ್ ಕಳವು ಪ್ರಕರಣ ಪತ್ತೆಯಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ. ಪೊಲೀಸ್ ಆಯುಕ್ತ ಡಾ.ಎಂ.ಎ. ಸಲೀಂ, ಡಿಸಿಪಿ ಎಂ.ಎಂ. ಮಹದೇವಯ್ಯ, ಎನ್.ಆರ್. ಉಪ ವಿಭಾಗ ಎಸಿಪಿ ಸಿ.ಡಿ. ಜಗದೀಶ್ ಮಾರ್ಗದರ್ಶನದಲ್ಲಿ ವಿಜಯನಗರ ಠಾಣೆಯ ಇನ್ಸ್ಪೆಕ್ಟರ್ ಸಿ.ವಿ. ರವಿ, ಎಸ್ಐ ರಘುಪ್ರಸಾದ್ ಮತ್ತು ಸಿಬ್ಬಂದಿ ಈ ಪತ್ತೆ ಮಾಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

