'ಅಭಿವೃದ್ಧಿಗೆ ವಿಜ್ಞಾನ ಸಂಶೋಧನೆ ಹೆಚ್ಚಲಿ'
ಕ.ಪ್ರ.ವಾರ್ತೆ ಮೈಸೂರು ಅ. 8
ದೇಶದ ಅಭಿವೃದ್ಧಿ ಹೊಂದಲು ವಿಜ್ಞಾನ ಸಂಶೋಧನೆಗಳು ಹೆಚ್ಚಾಗಬೇಕು ಎಂದು ಕಂದಾಯ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ವಿ. ಶ್ರೀನಿವಾಸಪ್ರಸಾದ್ ಹೇಳಿದರು.
ಮಹಾರಾಣಿ ಮಹಿಳಾ ವಿಜ್ಞಾನ ಕಾಲೇಜು 2013-14ನೇ ಸಾಲಿನ ಸಾಂಸ್ಕೃತಿಕ ವೇದಿಕೆ, ರಾಷ್ಟ್ರೀಯ ಸೇವಾ ಯೋಜನೆ ಹಾಗೂ ಕ್ರೀಡಾ ಚಟುವಟಿಕೆಗಳನ್ನು ಅವರು ಮಂಗಳವಾರ ಉದ್ಘಾಟಿಸಿ ಮಾತನಾಡಿದರು.
ದೇಶದಲ್ಲಿ ವಿಜ್ಞಾನ ಮತ್ತು ಸಂಶೋಧನೆಗಳಲ್ಲಿ ಆಸಕ್ತಿ ಕಡಿಮೆ ಆಗಿದೆ. ವಿಜ್ಞಾನ, ಸಂಶೋಧನೆ ಹೆಚ್ಚಾದಂತೆ ದೇಶದ ಅಭಿವೃದ್ಧಿ ಸಾಧ್ಯ. ಸಂಶೋಧನೆಯಿಂದಲೇ ಚೀನಾ ದೇಶವು ಮುಂದುವರಿದಿದೆ. ವಿಜ್ಞಾನ ಕ್ಷೇತ್ರಕ್ಕೆ ನಮ್ಮ ದೇಶದ ಕೂಡುಗೆ ಕಡಿಮೆ ಆಗಿದೆ ಎಂದು ಅವರು ತಿಳಿಸಿದರು.
ಮಹಾರಾಜರು ದೂರದೃಷ್ಟಿಯಿಂದ ಮಹಾರಾಣಿ ಕಾಲೇಜು ಸ್ಥಾಪಿಸಿದರು. ಸಮರ್ಪಕ ನಿರ್ವಹಣೆ ಇಲ್ಲದ ಕಾರಣ ಸಮಸ್ಯೆ ಉಂಟಾಗಿದೆ. ಪ್ರಯೋಗಾಲಯ, ಗ್ರಂಥಾಲಯ ಸೇರಿದಂತೆ ಕಾಲೇಜಿಗೆ ಮೂಲ ಸೌಲಭ್ಯಗಳನ್ನು ಸರ್ಕಾರದ ವತಿಯಿಂದ ಒದಗಿಸಲಾಗುವುದು ಎಂದರು.
ನಮ್ಮ ದೇಶದಲ್ಲಿ ಮಹಿಳೆಯರನ್ನು ಗೌರವದಿಂದ ಕಾಣುತ್ತೇವೆ. ಅದೇ ರೀತಿ ಮಹಿಳಾ ದೌರ್ಜನ್ಯ ಸಹ ನಡೆಯುತ್ತಿದೆ. ಪ್ರಸ್ತುತ ಮಹಿಳೆಯರಿಗೆ ಎಲ್ಲ ಕ್ಷೇತ್ರಗಳಲ್ಲೂ ಸಾಕಷ್ಟು ಅವಕಾಶ ಸಿಗುತ್ತಿದೆ. ವಿದ್ಯಾರ್ಥಿನಿಯರು ಪಠ್ಯೇತರ ಚಟುವಟಿಕೆ, ಕ್ರೀಡೆಗಳಲ್ಲಿ ಭಾಗವಹಿಸಬೇಕು ಎಂದು ಅವರು ಸಲಹೆ ನೀಡಿದರು.
ದೇಶದಲ್ಲಿ ಸಾಕಷ್ಟು ನೈಸರ್ಗಿಕ ಸಂಪನ್ಮೂಲ ಇದೆ. ಒಗ್ಗಟ್ಟು ಇಲ್ಲದ ಕಾರಣ ಸರಿಯಾಗಿ ಬಳಕೆ ಆಗಿಲ್ಲ. ಯಾವುದೇ ಕ್ಷೇತ್ರಕ್ಕೂ ಹೋದರು ಸೇವಾ ಮನೋಭಾವ ಬೆಳೆಸಿಕೊಳ್ಳಬೇಕು. ದೇಶ ಕಟ್ಟುವ ಕೆಲಸ ಮಾಡಬೇಕು ಎಂದರು.
ರಾಜಕೀಯಕ್ಕೆ ಬನ್ನಿ...: ಶಾಸಕ ಹಾಗೂ ಕಾಲೇಜು ಅಭಿವೃದ್ಧಿ ಮಂಡಳಿ ಅಧ್ಯಕ್ಷ ವಾಸು ಮಾತನಾಡಿ, ರಾಜಕೀಯ ಕ್ಷೇತ್ರ ಕೆಟ್ಟು ಹೋಗಿದೆ ಎಂಬುದು ಸರಿಯಲ್ಲ. ರಾಜಕೀಯದಲ್ಲೂ ಒಳ್ಳೆಯವರು ಇದ್ದಾರೆ. ವಿದ್ಯಾರ್ಥಿನಿಯರು ಸಹ ಹೆಚ್ಚಿನ ಸಂಖ್ಯೆಯಲ್ಲಿ ರಾಜಕೀಯಕ್ಕೆ ಬರಬೇಕು ಎಂದು ಅವರು ಕರೆ ನೀಡಿದರು.
ಪ್ರಾಂಶುಪಾಲೆ ಡಾ. ಜಿ.ಎಂ. ಸುಶೀಲಾ ಅಧ್ಯಕ್ಷತೆ ವಹಿಸಿದ್ದರು. ನೃತ್ಯ ಕಲಾವಿದ ಶ್ರೀಧರ್ ಜೈನ್, ಆಯಾಮ ಅಕಾಡೆಮಿ ನಿರ್ದೇಶಕಿ ಎಸ್.ವಿ. ಶಾಂಭವಿ ಸ್ವಾಮಿ, ಅಂತಾರಾಷ್ಟ್ರೀಯ ಫುಟ್ಬಾಲ್ ಆಟಗಾರ್ತಿ ಚೈತ್ರಾ ಗಂಗಾಧರ್, ನಿವೃತ್ತ ಪ್ರಾಂಶುಪಾಲ ಮಲ್ಲಿಕಾರ್ಜುನಸ್ವಾಮಿ, ಡಾ. ಬಸವರಾಜು, ಸಾಂಸ್ಕೃತಿಕ ವೇದಿಕೆಯ ಅಧ್ಯಕ್ಷೆ ಮೇಘಾ, ಪದಾಧಿಕಾರಿಗಳಾದ ಪೂಜಾ ಪೊನ್ನಮ್ಮ, ಚೇತನ, ಪೂವಮ್ಮ, ಸಿಲ್ಕಿ, ಎಂ. ಪಲ್ಲವಿ, ನೃತ್ಯ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

