ಮೈಸೂರು

11ರಂದು ಸಭೆ

Published On :

ಟಿ. ನರಸೀಪುರ: ಕನ್ನಡ ರಾಜ್ಯೋತ್ಸವ ಆಚರಣೆ ಅಂಗವಾಗಿ ಪೂರ್ವ ಸಿದ್ಧತಾ ಸಭೆಯು ಅ.11ರಂದು ಬೆಳಗ್ಗೆ 11ಕ್ಕೆ ತಾಪಂ ಸಭಾಂಗಣದಲ್ಲಿ ನಡೆಯಲಿದೆ. ನ.1ರಂದು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಕನ್ನಡ ರಾಜ್ಯೋತ್ಸವವನ್ನು ಹಮ್ಮಿಕೊಂಡಿರುವ ಹಿನ್ನೆಲೆ ಪೂರ್ವ ಸಿದ್ಧತೆಗಳನ್ನು ಮಾಡಿಕೊಳ್ಳಲು ಈ ಸಭೆ ಕರೆಯಲಾಗಿದೆ. ಸಭೆಗೆ ಚುನಾಯಿತ ಪ್ರತಿನಿಧಿಗಳು, ಸಂಘಟನೆಗಳ ಮುಖ್ಯಸ್ಥರು ಹಾಗೂ ಪ್ರಮುಖ ನಾಗರಿಕರು ಆಗಮಿಸಿ ಸಲಹೆ ಸೂಚನೆಗಳನ್ನು ನೀಡುವಂತೆ ತಹಸೀಲ್ದಾರ್ ಅರುಣಪ್ರಭ ಕೋರಿದ್ದಾರೆ.
ಶಾಂತಿಯ ಜೀವನ
ಬೈಲುಕುಪ್ಪೆ: ಮಹಾತ್ಮ ಗಾಂಧೀಜಿ ಹಾಗೂ ನೊಬೆಲ್ ಪ್ರಶಸ್ತಿ ಪಡೆದ ದಲೈಲಾಮಾ ಅವರ ಮಾರ್ಗದರ್ಶನದಲ್ಲಿ ಸಂಘಟಿತರಾಗಿ ಶಾಂತಿಯಿಂದ ಜೀವನ ನಡೆಸುತ್ತೇವೆ ಎಂದು ಟಿಬೆಟಿಯನ್ ಯೂತ್ ಕಾಂಗ್ರೆಸ್ ಅಧ್ಯಕ್ಷ ಚಿನ್ಯಾರಿಂಗ್ ಲೆಕ್ಕಪ್ಪ ಹೇಳಿದ್ದಾರೆ. ಒಂದನೇ ಕ್ಯಾಂಪ್ ಎಸ್ಒಎಸ್ ಸಭಾಂಗಣದಲ್ಲಿ ಸೋಮವಾರ 44ನೇ ವರ್ಷದ ಟಿಬೆಟಿಯನ್ ಯೂತ್ ಕಾಂಗ್ರೆಸ್ ಸಂಘಟನೆಯ ದಿನಾಚರಣೆಯಲ್ಲಿ ಮಾತನಾಡಿದರು. ಎಸ್ಒಎಸ್ ಟಿಬೆಟನ್ ಶಾಲೆಯ ಮಕ್ಕಳಿಂದ ಭಜನಾ ಕಾರ್ಯಕ್ರಮ ನಡೆಯಿತು.
ಪಾದಚಾರಿ ಸಾವು
ಬೈಲುಕುಪ್ಪೆ: ವಾಹನವೊಂದು ಟಿಬೆಟಿಯನ್ ಪಾದಚಾರಿ ಮಹಿಳೆಯೊಬ್ಬರಿಗೆ ಡಿಕ್ಕಿ ಹೊಡೆದ ಪರಿಣಾಮ, ಆಕೆ ಸ್ಥಳದಲ್ಲೆ ಮೃತಪಟ್ಟ ಘಟನೆ ಮಂಗಳವಾರ ಬೆಳಗಿನ ಜಾವ ಹಳೆಯೂರು ಗ್ರಾಮದ ಸೀಗೆಕಟ್ಟೆ ಬಳಿ ಜರುಗಿದೆ. ಬೈಲಕುಪ್ಪೆ ಒಂದನೇ ಕ್ಯಾಂಪಿನ ನಿವಾಸಿ ದವಾ ಎಂಬವರ ಪತ್ನಿ ಚೌತಿ(73) ಮೃತಪಟ್ಟ ದುರ್ದೈವಿ. ಮುಂಜಾನೆ ಬೈಲಕುಪ್ಪೆಯಿಂದ ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುವಾಗ ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದು ಪರಾರಿಯಾಗಿದೆ. ಬೈಲಕುಪ್ಪೆ ಠಾಣೆಯಲ್ಲಿ ದೂರು ದಾಖಲಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.