ಮೈಸೂರು

2.18 ಕೋಟಿ ಕ್ರಿಯಾಯೋಜನೆಗೆ ಅಸ್ತು

Published On :

ಕ.ಪ್ರ.ವಾರ್ತೆ   ಟಿ.ನರಸೀಪುರ   ಅ. 8
ಗ್ರಾಮೀಣ ಪ್ರದೇಶಗಳ ರಸ್ತೆಗಳ ದುರಸ್ತಿಗೆ, ಕುಡಿಯುವ ನೀರು ಪೂರೈಕೆ ಹಾಗೂ ಶಾಲಾ ಕಟ್ಟಡಗಳ ನಿರ್ಮಾಣಕ್ಕೆ ಒತ್ತು ನೀಡಿ, 2.18 ಕೋಟಿ ಕ್ರಿಯಾ ಯೋಜನೆಗೆ ಮಂಗಳವಾರ ನಡೆದ ತಾಪಂ ವಿಶೇಷ ಸಭೆಯಲ್ಲಿ ಅನುಮೋದನೆ ನೀಡಲಾಯಿತು.
ತಾಪಂ ಸಭಾಂಗಣದಲ್ಲಿ ಮಂಗಳವಾರ ಅನಿರ್ಬಂಧಿತ ಅನುದಾನ ಒಂದು ಕೋಟಿ ಹಾಗೂ ಹದಿಮೂರನೇ ಹಣಕಾಸಿನ ಮೊದಲ ಕಂತು 49 ಲಕ್ಷ ಹಾಗೂ ಎರಡನೇ ಕಂತು 79 ಲಕ್ಷ ಅನುದಾನವನ್ನು ಅಭಿವೃದ್ಧಿ ಕಾರ್ಯಕ್ರಮಗಳಿಗೆ ಕ್ರಿಯಾ ಯೋಜನೆಯನ್ನು ರೂಪಿಸಲು ವಿಶೇಷ ಸಭೆ ಕರೆಯಲಾಗಿತ್ತು.
ಸದಸ್ಯರೆಲ್ಲರ ಸಲಹೆಯಂತೆ ಅಭಿವೃದ್ಧಿ ಕಾರ್ಯಕ್ರಮಗಳಿಗೆ ಅನುದಾನ ಹಂಚಿಕೆ ಮಾಡಲಾಯಿತು.
ಗ್ರಾಮೀಣ ಪ್ರದೇಶಗಳಲ್ಲಿ ಸಮರ್ಪಕವಾಗಿ ಕುಡಿಯುವ ನೀರನ್ನು ಕಲ್ಪಿಸಿ ರಸ್ತೆ ದುರಸ್ತಿ ಮತ್ತು ಚರಂಡಿ ನಿರ್ಮಾಣ, ಶಿಥಿಲಾವಸ್ಥೆಯಲ್ಲಿರುವ ಅಂಗನವಾಡಿ ಹಾಗೂ ಶಾಲಾ ಕಟ್ಟಡಗಳನ್ನು ದುರಸ್ತಿಗೊಳಿಸಬೇಕೋ ಅಥವಾ ಶಿಥಿಲ ಕಟ್ಟಡವನ್ನು ಕೆಡವಿ ನೂತನ ಕಟ್ಟಡವನ್ನು ನಿರ್ಮಾಣ ಮಾಡಬೇಕೆಂಬ ಬಗ್ಗೆ ವ್ಯಾಪಕ ಚರ್ಚೆ ನಡೆಸಿ ರೂಪಿಸಿದ ಕ್ರಿಯಾ ಯೋಜನೆ ಸಭೆಯಲ್ಲಿದ್ದ ಸದಸ್ಯರೆಲ್ಲರೂ ಅಂಕಿತ ಹಾಕಿದರು.
ಬಾಲವಿಕಾಶ ಯೋಜನಾಧಿಕಾರಿ ಬಸವರಾಜು ಮಾತನಾಡಿದರು. ಅಧ್ಯಕ್ಷ ತುಂಬಲ ಅಂದಾನಿ ಅಧ್ಯಕ್ಷತೆ ವಹಿಸಿದ್ದರು. ಉಪಾಧ್ಯಕ್ಷೆ ಸುಜಾತ ವೆಂಕಟೇಶ್, ಕಾರ್ಯನಿರ್ವಾಹಕ ಅಧಿಕಾರಿ ಜೈಕೃಷ್ಣ, ಮಾಜಿ ಅಧ್ಯಕ್ಷೆ ಗಾಯಿತ್ರಿಸ್ವಾಮಿಗೌಡ, ಮಾಜಿ ಉಪಾಧ್ಯಕ್ಷ ಸಿ. ವೆಂಕಟೇಶ್, ಜಿಪಂ ತಾಂತ್ರಿಕ ಉಪವಿಭಾಗದ ಎಇಇ ಪಿ. ಲಕ್ಷ್ಮಣರಾವ್, ತೋಟಗಾರಿಕೆ ಸಹಾಯಕ ನಿರ್ದೇಶಕ ಟಿ.ಎಸ್. ರಮೇಶ್, ಸಮಾಜ ಕಲ್ಯಾಣಾಧಿಕಾರಿ ರಾಮೇಗೌಡ, ತಾಪಂ ಸದಸ್ಯರಾದ ಶಿವಮ್ಮಮಹದೇವ, ಮಲ್ಲಾಜಮ್ಮ, ಸುವರ್ಣಪ್ರಸನ್ನ, ಸವಿತಾಜಯರಾಮ್, ಶಂಕರೇಗೌಡ, ಗುರುಮೂರ್ತಿ, ರಾಮಕೃಷ್ಣ, ಪಿ. ಗಿರೀಶ್, ನಟರಾಜು, ಗ್ರಾಪಂ ಅಧ್ಯಕ್ಷ ಎಚ್. ಅಣ್ಣಯ್ಯಸ್ವಾಮಿ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.