ಮೈಲ್ಯಾಕ್ಗೆ ಸಿಎಂ ರತ್ನ ಪ್ರಶಸ್ತಿ
ಮೈಸೂರು: ಮೈಸೂರು ಪೇಯಿಂಟ್ಸ್ ಅಂಡ್ ವಾರ್ನಿಷ್ ಲಿಮಿಟೆಡ್(ಮೈಲ್ಯಾಕ್) ಸಂಸ್ಥೆಗೆ ಮುಖ್ಯಮಂತ್ರಿ ರತ್ನ ಪ್ರಶಸ್ತಿ ಸಂದಿದೆ. ಮೈಲ್ಯಾಕ್ ಸಂಸ್ಥೆಯು 2005-06ರಿಂದ 2010-11ನೇ ಸಾಲಿನ ವರೆಗಿನ ಪ್ರಗತಿಯನ್ನು ಪರಿಗಣಿಸಿ ಸರ್ಕಾರವು ಈ ಪ್ರಶಸ್ತಿ ನೀಡಿದೆ. ಸದರಿ ಪ್ರಶಸ್ತಿ ಫಲಕವನ್ನು ಸರ್ಕಾರದ ಸಾರ್ವಜನಿಕ ಉದ್ದಿಮೆಗಳ ಇಲಾಖೆಯ ಪ್ರಧಾನ ಕಾರ್ಯದರ್ಶಿ ಎಚ್. ಭಾಸ್ಕರ್ ಅವರು ತಮ್ಮ ಕೊಠಡಿಯಲ್ಲಿ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಎಂ.ವಿ. ಹೇಮಂತಕುಮಾರ್ ಅವರಿಗೆ ಪ್ರದಾನ ಮಾಡಿದರು. ಪ್ರಶಸ್ತಿಯು 1 ಲಕ್ಷ ನಗದು ಪುರಸ್ಕಾರವನ್ನು ಒಳಗೊಂಡಿದೆ. ಇದೇ ವೇಳೆ ಕಂಪನಿಯ ಪ್ರಧಾನ ವ್ಯವಸ್ಥಾಪಕ ಸಿ. ಹರಕುಮಾರ್ ಇದ್ದರು.
ನಾಳೆಯಿಂದ ದುರ್ಗಾಪೂಜೆ
ಮೈಸೂರು: ಯಾದವಗಿರಿಯಲ್ಲಿರುವ ಶ್ರೀ ರಾಮಕೃಷ್ಣ ಆಶ್ರಮದಲ್ಲಿ ಅ.11ರಿಂದ 13ರವರೆಗೆ ದುರ್ಗಾಪೂಜೆ ಏರ್ಪಡಿಸಿದ್ದು, ಮಹಾಸಪ್ತಮಿ, ಮಹಾಅಷ್ಟಮಿ, ಮಹಾನವಮಿ, ಚಂಡೀ ಪಾರಾಯಣ, ಭಜನೆ, ಸಾಮೂಹಿಕ ಪುಷ್ಪಾಂಜಲಿ ಸೇರಿದಂತೆ ವಿವಿಧ ಕಾರ್ಯಕ್ರಮ ನಡೆಯಲಿವೆ.
ಇಬ್ಬರಿಗೆ ಪಿಎಚ್.ಡಿ ಪದವಿ
ಮೈಸೂರು: ಡಾ. ಎಚ್.ಎಂ. ಮರುಳಸಿದ್ದಯ್ಯ ಅವರ ಮಾರ್ಗದರ್ಶನದಲ್ಲಿ ಸಂಶೋಧನೆ ನಡೆಸಿ ಸಾದರಪಡಿಸಿದ ಪಿ. ಚೆಲುವಾಂಬ ಅವರ ಮಹಾಪ್ರಬಂಧವನ್ನು ಮೈಸೂರು ವಿವಿ ಅಂಗೀಕರಿಸಿ ಮಾನವಶಾಸ್ತ್ರ ವಿಷಯದಲ್ಲಿ ಪಿಎಚ್.ಡಿ ನೀಡಿದೆ. ಡಾ. ಸುಗೀತ ಸುವರ್ಣ ಮಾರ್ಗದರ್ಶನದಲ್ಲಿ ಸಂಶೋಧನೆ ನಡೆಸಿ ಸಾದರಪಡಿಸಿದ ಪಿ. ರಾಮಾಂಜನೇಯ ಅವರ ಮಹಾಪ್ರಬಂಧವನ್ನು ಮೈಸೂರು ವಿವಿ ಅಂಗೀಕರಿಸಿ ಅವರಿಗೆ ಇತಿಹಾಸ ವಿಷಯದಲ್ಲಿ ಪಿಎಚ್.ಡಿ ನೀಡಿದೆ.
ಶ್ಯಾಮಲಾಗೆ ಪ್ರಶಸ್ತಿ
ಮೈಸೂರು: ಬಾಗಲಕೋಟೆಯಲ್ಲಿ ಏರ್ಪಡಿಸಿದ್ದ 9ನೇ ಸ್ವದೇಶಿ ಕನ್ನಡ ವಿಜ್ಞಾನ ಸಮ್ಮೇಳನದಲ್ಲಿ ಭಾಗವಹಿಸಿ ವಿಚಾರ ಮಂಡಿಸಿದ್ದ ಮೈಸೂರು ವಿವಿ ಪರಿಸರ ವಿಜ್ಞಾನ ಅಧ್ಯಯನ ವಿಭಾಗದ ಸಂಶೋಧನಾ ವಿದ್ಯಾರ್ಥಿನಿ ಡಿ.ಸಿ. ಶ್ಯಾಮಲಾ ಅವರಿಗೆ ಮಹಿಳಾ ವಿಜ್ಞಾನ ಪ್ರಶಸ್ತಿ ಸಂದಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

