ಮೈಸೂರು

ಆರೋಗ್ಯ, ನೈರ್ಮಲ್ಯಕ್ಕೆ ಒತ್ತು ನೀಡಿ: ಶ್ರೀನಿವಾಸಗೌಡ

Published On :

ಕ.ಪ್ರ.ವಾರ್ತೆ   ಸಾಲಿಗ್ರಾಮ್ಣ ಅ. 10
ಆರೋಗ್ಯ ಮತ್ತು ನೈರ್ಮಲ್ಯತೆಯ ಬಗ್ಗೆ ಪ್ರತಿಯೊಬ್ಬರು ಹೆಚ್ಚಿನ ಒತ್ತು ನೀಡಬೇಕೆಂದು ತಾಪಂ ಮಾಜಿ ಸದಸ್ಯ ಎಸ್.ಎಂ. ಶ್ರೀನಿವಾಸಗೌಡ ಹೇಳಿದರು.
ಕೆ.ಆರ್. ನಗರ ತಾಲೂಕು ಸಾಲಿಗ್ರಾಮದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಯೂತ್ ರೆಡ್ಕ್ರಾಸ್ ಘಟಕ ಸಂಯುಕ್ತವಾಗಿ ಗುರುವಾರ ಏರ್ಪಡಿಸಿದ್ದ ಆರೋಗ್ಯ ಮತ್ತು ನೈರ್ಮಲ್ಯ ಜಾಗೃತಿ ಜಾಥಾಗೆ ಚಾಲನೆ ನೀಡಿ ಅವರು ಮಾತನಾಡಿದರು. ಪ್ರಸ್ತುತ ದಿನಗಳಲ್ಲಿ ದೇಶಾದ್ಯಂತ ದೇವಾಲಯ ಮತ್ತು ಶೌಚಾಲಯಗಳ ಬಗ್ಗೆ ದೊಡ್ಡ ದೊಡ್ಡ ವ್ಯಕ್ತಿಗಳು ಚರ್ಚಿಸುತ್ತಾರೆ. ಆದರೆ ಆರೋಗ್ಯ ಮತ್ತು ನೈರ್ಮಲ್ಯತೆಯ ಬಗ್ಗೆ ಆಸಕ್ತಿ ವಹಿಸುತ್ತಿಲ್ಲವೆಂದು ಅಸಮಾಧಾನ ವ್ಯಕ್ತಪಡಿಸಿದರು. ಪ್ರತಿ ವರ್ಷವು ಸರ್ಕಾರದಿಂದ ಹತ್ತಾರು ಯೋಜನೆಗಳ ಹೆಸರಿನಡಿಯಲ್ಲಿ ಆರೋಗ್ಯ ಕ್ಷೇತ್ರಕ್ಕೆ ಹರಿದುಬರುವ ಹಣವು ಸದ್ಬಳಕೆಯಾಗಿ ಸಾರ್ವಜನಿಕರಿಗೆ ಅದರ ಲಾಭ ದೊರೆಯಬೇಕು. ಆಗ ಮಾತ್ರ ಯೋಜನೆಯು ಯಶಸ್ವಿಯಾಗಲು ಸಾಧ್ಯ ಎಂದು ಅಭಿಪ್ರಾಯಪಟ್ಟರು.
ವಿದ್ಯಾರ್ಥಿಗಳು ಗ್ರಾಮದ ಪ್ರಮುಖ ರಸ್ತೆಗಳಲ್ಲಿ ವಿವಿಧ ಘೋಷಣಾ ಫಲಕಗಳನ್ನು ಹಿಡಿದು ಘೋಷಣೆ ಕೂಗಿ ಸಂಚರಿಸುವುದರ ಮೂಲಕ ಜನಜಾಗೃತಿ ಕಾರ್ಯಕ್ರಮ ಅರ್ಥಪೂರ್ಣವಾಗಿ ಆಚರಿಸಿದ್ದು ವಿಶೇಷವಾಗಿತ್ತು. ಇದರಲ್ಲಿ ಪ್ರಾಂಶುಪಾಲ ಪ್ರೊ. ಎಸ್.ಜಿ. ಪ್ರಕಾಶ್, ಪ್ರಾಧ್ಯಾಪಕರಾದ ಬಸವಂತಪ್ಪ ಗುದಗತ್ತಿಯರ್, ಮಿರ್ಲೆ ಮೃತ್ಯುಂಜಯ, ಶಿವಕುಮಾರಸ್ವಾಮಿ, ಎಚ್.ಎಸ್. ಶ್ರೀನಿವಾಸ್, ಸತೀಶ್ಚಂದ್ರ, ಜಿ.ಆರ್. ಮಂಜುನಾಥ್, ವಿಷಕಂಠಯ್ಯ, ಕೃಷ್ಣೇಗೌಡ, ದೇವಮ್ಮಣಿ, ಶಂಕರ್, ರಾಜೇಶ್, ಎನ್ಎಸ್ಎಸ್ ಅಧಿಕಾರಿ ಕುಮಾರ್, ಕಂಪ್ಯೂಟರ್ ಶಿಕ್ಷಕ ಕೃಷ್ಣಮೂರ್ತಿ ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.