ಒಂದೇ ಕುಟುಂಬದ ಮೂವರ ನಾಪತ್ತೆ
ಮೈಸೂರು: ವ್ಯಾಪಾರದಲ್ಲಿ ನಷ್ಟ ಉಂಟಾಗಿ ಸಾಲಗಾರರ ಹಿಂಸೆ ತಾಳಲಾರದೆ ಒಂದೇ ಕುಟುಂಬದ ಮೂವರು ನಾಪತ್ತೆಯಾಗಿರುವ ಘಟನೆ ಶ್ರೀರಾಂಪುರ 2ನೇ ಹಂತದಲ್ಲಿ ನಡೆದಿದೆ.ಶ್ರೀರಾಂಪುರ 2ನೇ ಹಂತ ನಿವಾಸಿ ಜಿ.ಪಿ. ರಾಜ್ಕುಮಾರ್(42), ಇವರ ಪತ್ನಿ ಬಿ.ಎನ್. ರೋಹಿಣಿ(32) ಮತ್ತು ಪುತ್ರ ಯಶಸ್ ವಿಠ್ಠಲ್(11) ನಾಪತ್ತೆಯಾದವರು. ರಾಜ್ಕುಮಾರ್ ಚಹರೆ- 5.5 ಅಡಿ ಎತ್ತರ, ಗೋದಿ ಮೈಬಣ್ಣ, ಕೋಲು ಮುಖ, ಸಾಧಾರಣ ಮೈಕಟ್ಟು. ರೋಹಿಣಿ ಚಹರೆ- 5.4 ಅಡಿ ಎತ್ತರ, ಗೋದಿ ಮೈಬಣ್ಣ, ಕೋಲು ಮುಖ, ಸಾಧಾರಣ ಮೈಕಟ್ಟು. ಯಶಸ್ ಚಹರೆ- 4.4 ಅಡಿ ಎತ್ತರ, ಗೋದಿ ಮೈಬಣ್ಣ, ಗುಂಡು ಮುಖ, ದೃಢಕಾಯ ಶರೀರ. ಈ ಮೂವರ ಬಗ್ಗೆ ಮಾಹಿತಿ ಸಿಕ್ಕಲ್ಲಿ ದೂ. 0821- 2418324 ಸಂಪರ್ಕಿಸಲು ಕುವೆಂಪುನಗರ ಠಾಣೆ ಪೊಲೀಸರು ಕೋರಿದ್ದಾರೆ.
ವ್ಯಕ್ತಿ ನಾಪತ್ತೆ
ಕುವೆಂಪುನಗರ ಠಾಣಾ ವ್ಯಾಪ್ತಿ ನಿವಾಸಿ ಮಹದೇವಸ್ವಾಮಿ(34) ನಾಪತ್ತೆಯಾಗಿದ್ದಾರೆ. ಚಹರೆ- 5.5 ಅಡಿ ಎತ್ತರ, ದುಂಡು ಮುಖ, ಗೋದಿ ಮೈಬಣ್ಣ, ಕನ್ನಡ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ಸಿಕ್ಕಲ್ಲಿ ದೂ. 2418324 ಸಂಪರ್ಕಿಸಬಹುದು.
ವಸತಿ ಸಮುಚ್ಚಯ ಇಂದು ಆರಂಭ
ಮೈಸೂರು: ಪಾಠಕ್ ಸಂಸ್ಥೆಯು ವಸತಿ ಸಮುಚ್ಚಯ ಕಟ್ಟಡ ಕಾರ್ಯ ಪೂರ್ಣಗೊಳಿಸಿದ್ದು, ಅ.11ರಂದು ಕೀಲಿ ಕೈ ಹಸ್ತಾಂತರಿಸುವ ಕಾರ್ಯಕ್ಕೆ ಮುಂದಾಗಿದೆ. ವಿವಿ ಮೊಹಲ್ಲಾದಲ್ಲಿ ಸಂಪೂರ್ಣಗೊಂಡಿರುವ ಪ್ರಥಮ್ ಆಕೃತಿ ಎಂಬ ಮತ್ತೊಂದು ಗರಿಯನ್ನು ಅ.18ರಂದು ಮುಡಿಗೇರಿಸಿಕೊಳ್ಳುವ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ ಎಂದು ಸಂಸ್ಥೆಯ ಮಾರುಕಟ್ಟೆ ವ್ಯವಸ್ಥಾಪಕ ಯೂನಸ್ ಪಾಷ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

