ಮೈಸೂರು

ಇಬ್ಬರಿಗೆ ಚಾಕುವಿನಿಂದ ಇರಿತ: ಒಬ್ಬನ ಬಂಧನ

Published On :

ಕ.ಪ್ರ.ವಾರ್ತೆ   ಮೈಸೂರು   ಅ. 10
ಕ್ಷುಲ್ಲಕ ಕಾರಣಕ್ಕೆ ಐದು ಜನರ ತಂಡವು ಇಬ್ಬರು ವ್ಯಕ್ತಿಗಳಿಗೆ ಚಾಕುವಿನಿಂದ ಇರಿದು ಗಂಭೀರ ಗಾಯಗೊಳಿಸಿರುವ ಘಟನೆ ಮೈಸೂರು- ಬೆಂಗಳೂರು ರಸ್ತೆಯಲ್ಲಿರುವ ಡಾಬಾವೊಂದರಲ್ಲಿ ಬುಧವಾರ ರಾತ್ರಿ ನಡೆದಿದೆ. ಸಿದ್ದಲಿಂಗಪುರ ನಿವಾಸಿಗಳಾದ ವೆಂಕಟೇಶ್ ಮತ್ತು ಹರೀಶ್ ಗಾಯಗೊಂಡವರು. ಈ ಇಬ್ಬರು ಮತ್ತು ವಿಜಯ್ಕುಮಾರ್ ಎಂಬವರು ಎ1 ಡಾಬಾದ ಊಟ ಮಾಡಿ ಹೊರ ಬರುತ್ತಿದ್ದಾಗ ಕಾರಿನಲ್ಲಿ ಬಂದ 5 ಜನ ಯುವಕರ ತಂಡ ಚಾಕುವಿನಿಂದ ಇರಿದಿದ್ದಾರೆ. ವೆಂಕಟೇಶ್ ಮತ್ತು ಹರೀಶ್ ತೀವ್ರವಾಗಿ ಗಾಯಗೊಂಡಿದ್ದು, ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಮೇಟಗಳ್ಳಿ ಠಾಣೆಯ ಇನ್ಸ್ಪೆಕ್ಟರ್ ವಿವೇಕಾನಂದ ಮತ್ತು ಸಿಬ್ಬಂದಿ ಅಬ್ದುಲ್ ಎಂಬಾತನನ್ನು ಬಂಧಿಸಿದ್ದಾರೆ. ಉಳಿದ ಆರೋಪಿಗಳಿಗಾಗಿ ಶೋಧ ಮುಂದುವರೆಸಿದ್ದಾರೆ.
ಅಪರಿಚಿತ ವ್ಯಕ್ತಿ ಸಾವು
ಕೆ.ಆರ್.ಆಸ್ಪತ್ರೆ ಆವರಣದಲ್ಲಿರುವ ಲಯನ್ಸ್ ತಂಗುದಾಣದಲ್ಲಿ ಅಪರಿಚಿತ ವ್ಯಕ್ತಿ ಮೃತಪಟ್ಟಿದ್ದಾರೆ. ಈ ವ್ಯಕ್ತಿ ಎಲ್ಲೊ ಬಿದ್ದು ಗಾಯ ಮಾಡಿಕೊಂಡಿದ್ದು, ಆಸ್ಪತ್ರೆಗೆ ತೋರಿಸಲು ಬಂದು ತಂಗುದಾಣದಲ್ಲಿ ಮಲಗಿದ್ದಾಗ ಮೃತಪಟ್ಟಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ. ಚಹರೆ- 40 ವರ್ಷ, 5.6 ಅಡಿ ಎತ್ತರ, ಗೋದಿ ಬಣ್ಣ, ಕೋಲು ಮುಖ, ಸಾಧಾರಣ ಮೈಕಟ್ಟು, ಬಲ ಹೊಟ್ಟೆ, ಎಡ ತೊಡೆಯ ಬಳಿ ಕಪ್ಪು ಕಾರೆ ಹರಳಿದೆ. ಎಸಿಸಿ ಎಂದು ಬರೆದಿರುವ ಕೆಂಪು ಟೀ- ಶರ್ಟ್ ಧರಿಸಿದ್ದಾರೆ. ಮೃತರ ವಾರಸುದಾರರು ಇದ್ದಲ್ಲಿ ದೂ. 0821- 2418306 ಸಂಪರ್ಕಿಸಲು ದೇವರಾಜ ಠಾಣೆ ಪೊಲೀಸರು ಕೋರಿದ್ದಾರೆ.
2ಅಂಗಡಿಗಳಲ್ಲಿ ಕಳವು
ನಗರ ಹೊರವಲಯದಲ್ಲಿರುವ ಹಿನಕಲ್ನಲ್ಲಿ ಗುರುವಾರ ಬೆಳಗಿನ ಜಾವ ಎರಡು ಅಂಗಡಿಗಳ ಶೆಟರ್ ಮುರಿದು ಕಳವು ಮಾಡಲಾಗಿದೆ. ಹುಣಸೂರು ಮುಖ್ಯರಸ್ತೆಯಲ್ಲಿರುವ ಎರಡು ಅಂಗಡಿಗಳಲ್ಲಿ ಶೆಟರ್ ಮುರಿದು, ಸಾವಿರಾರು ರು. ಮೌಲ್ಯದ ವಸ್ತುಗಳನ್ನು ಕಳವು ಮಾಡಿದ್ದಾರೆ. ಪೊಲೀಸರು ಗಸ್ತಿನಲ್ಲಿದ್ದಾಗ ಅಂಗಡಿ ಬಾಗಿಲು ತೆರೆದಿರುವುದರಿಂದ ಕಳವಾಗಿರುವುದು ಗೊತ್ತಾಗಿದೆ. ಈ ಸಂಬಂಧ ವಿಜಯನಗರ ಠಾಣೆ ಇನ್ಸ್ಪೆಕ್ಟರ್ ರವಿ ಮತ್ತು ಸಿಬ್ಬಂದಿ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.