ಮೈಸೂರು

ಜನರ ಅಹವಾಲಿಗೆ ಡಿವೈಎಸ್ಪಿ ಕಚೇರಿ ಮುಕ್ತ

Published On :

ಹುಣಸೂರು: ಹುಣಸೂರು ಡಿವೈಎಸ್ಪಿ ಕಚೇರಿಯಲ್ಲಿ ಅಹವಾಲು ಸಲ್ಲಿಸಲು ಮುಕ್ತವಾಗಿ ತೆರೆದಿರುತ್ತದೆ. ಅನ್ಯಾಯಕ್ಕೊಳಗಾದವರು ನಿರ್ಭೀತಿಯಿಂದ ಬಂದು ಅಹವಾಲು ಸಲ್ಲಿಸಬಹುದು ಎಂದು ನೂತನ ಡಿವೈಎಸ್ಪಿ ನಂಜುಂಡ ಹೇಳಿದರು. ಪಟ್ಟಣದ ತಾಪಂ ಸಭಾಂಗಣದಲ್ಲಿ ದಸಂಸ ಹಾಗೂ ರಾಜ್ಯ ರೈತ ಸಂಘದ ಸಂಯುಕ್ತಾಶ್ರಯದಲ್ಲಿ ನಡೆದ ವರ್ಗಾವಣೆಗೊಂಡ ಹುಣಸೂರು ಉಪ ವಿಭಾಗದ ಪೊಲೀಸ್ ಉಪ ಅಧೀಕ್ಷಕ(ಡಿವೈಎಸ್ಪಿಪಿ) ಮುದ್ದುಮಹದೇವಯ್ಯ ಅವರಿಗೆ ಆಯೋಜಿಸಿದ್ದ ಸನ್ಮಾನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಸನ್ಮಾನ ಸ್ವೀಕರಿಸಿದ ಮುದ್ದು ಮಹದೇವಯ್ಯ ತಮ್ಮ ಅಧಿಕಾರಾವಧಿಯಲ್ಲಿ ಸಹಕರಿಸಿದ ಎಲ್ಲರಿಗೂ ಕೃತಜ್ಞತೆ ಅರ್ಪಿಸಿದರು. ವೃತ್ತ ನಿರೀಕ್ಷಕ ಗಜೇಂದ್ರ ಪ್ರಸಾದ್, ತಾಪಂ ಇಒ ಡಾ. ಪ್ರೇಮ್ಕುಮಾರ್, ರೈತ ಸಂಘದ ಜಿಲ್ಲಾಧ್ಯಕ್ಷ ಹೊಸೂರು ಕುಮಾರ್, ಡೀಡ್ ಶ್ರೀಕಾಂತ್, ಸತ್ಯ ಫೌಂಡೇಶನ್ ಅಧ್ಯಕ್ಷ ಸತ್ಯಪ್ಪ, ದಲಿತ ಮುಖಂಡರಾದ ಡಿ. ಕುಮಾರ್, ವರದರಾಜು, ಸಿಪಿಐ(ಎಂ) ತಾ. ಕಾರ್ಯದರ್ಶಿ ವಿ. ಬಸವರಾಜು ಕಲ್ಕುಣಿಕೆ, ದಸಂಸ ಜಿಲ್ಲಾ ಸಂಚಾಲಕ ನಿಂಗರಾಜ ಮಲ್ಲಾಡಿ ಮಾತನಾಡಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.